ಮಂಗಳೂರು: ಪೇಜಾವರ ಸ್ವಾಮೀಜಿ ಸನ್ಯಾಸಿಗಳು. ಅವರು ಟಿವಿ ನೋಡೋದಿಲ್ಲ. ಹಾಗಾಗಿ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಅವರಿಗೆ ಅರಿವಿಲ್ಲ ಅಂತಾ ಸಂಸದೆ ಶೋಭಾ ಕರಂದ್ಲಾಜೆ ಮಂಗಳೂರಿನಲ್ಲಿ ಹೇಳಿದ್ದಾರೆ.
ಕೇಂದ್ರ ಸರ್ಕಾರದ ಸಾಧನೆ ಬಗ್ಗೆ ಪಕ್ಷದ ಹಿರಿಯರಿಂದ ಸ್ವಾಮಿಗಳಿಗೆ ಮನವರಿಕೆ ಮಾಡಲಾಗುತ್ತದೆ. ಪೇಜಾವರ ಸ್ವಾಮೀಜಿಗಳನ್ನು ಭೇಟಿಯಾಗುವವರು ಸರ್ಕಾರದ ಯೋಜನೆಗಳ ಬಗ್ಗೆ ಮಾತನಾಡದೇ ಇರೋದರಿಂದ ಅವರು ತಪ್ಪು ಅಭಿಪ್ರಾಯ ಹೊಂದಿರಬಹುದು ಎಂದು ಶೋಭಾ ಕರಂದ್ಲಾಜೆ ಅಭಿಪ್ರಾಯಪಟ್ಟಿದ್ದಾರೆ.
Advertisement
ಇನ್ನೂ ಇತ್ತೀಚೆಗೆ ಉಡುಪಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ದನದ ವ್ಯಾಪಾರಿ ಹಸನಬ್ಬ ಸಾವು ಪ್ರಕರಣದ ಬಗ್ಗೆ ಮಾತನಾಡಿದ ಶೋಭಾ ಕರಂದ್ಲಾಜೆ, ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಸುಳ್ಳು ಆರೋಪದ ಮೂಲಕ ಬಂಧಿಸಲಾಗಿದೆ ಎಂದು ಆರೋಪಿಸಿದರು.
Advertisement
Advertisement
ಆರೋಪಿಗಳ ಜೊತೆ ಮತ್ತು ಎಸ್ಪಿ ಜೊತೆ ಮಾತನಾಡಿದ್ದು, ಕಾರ್ಯಕರ್ತರ ಬಿಡುಗಡೆಗೆ ಆಗ್ರಹಿಸಿ ನಾಳೆ ಉಡುಪಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ತಿಳಿಸಿದರು.
Advertisement
ನರೇಂದ್ರ ಮೋದಿಯವರ ಸರ್ಕಾರ ಬಂದು ನಾಲ್ಕು ವರ್ಷವಾದರು, ಚುನಾವಣೆ ಪೂರ್ವದಲ್ಲಿ ವಿದೇಶದಲ್ಲಿರುವ ಕಪ್ಪು ಹಣವನ್ನು ತರುವುದಾಗಿ ಭರವಸೆ ನೀಡಿ ಈಡೇರಿಸಿಲ್ಲ ಎಂದು ಮಂತ್ರಾಲಯದಲ್ಲಿ ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಮೋದಿಯವರ ಅಚ್ಛೇ ದಿನ್ ಇನ್ನೂ ಪರಿಣಾಮಕಾರಿ ಆಗಬೇಕಿದೆ: ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ