ಮಂಡ್ಯ: ಬ್ರಾಹ್ಮಣರಲ್ಲಿ ಯಾರೂ ಧ್ವನಿ ಎತ್ತಿ ಮಾತನಾಡುವವರು ಇಲ್ಲ. ಸಂಖ್ಯಾಬಲ ಇಲ್ಲ. ಅಲ್ಪ ಸಂಖ್ಯಾತರು ಆದ್ದರಿಂದ ಏನು ಮಾತನಾಡಿದ್ರು ನಡೆಯತ್ತೆ ಎಂದು ಮಾತನಾಡ್ತಾರೆ ಅಂತ ಪೇಜಾವರ ಶ್ರೀ (Pejawara Sri) ಬೇಸರ ವ್ಯಕ್ತಪಡಿಸಿದ್ದಾರೆ.
Advertisement
ಮಂಡ್ಯ (Mandya) ದ ಮದ್ದೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ರೀತಿ ಹಿಂದಿನಿಂದಲೂ ಬ್ರಾಹ್ಮಣರ ವಿರುದ್ಧದ ಹೇಳಿಕೆಗಳು ಕೇಳಿಬರುತ್ತಿದೆ. ಪ್ರತಿ ಚುನಾವಣೆ ಬಂದಾಗ ಇದು ಹೆಚ್ಚು ಕಾಣುತ್ತೆ. ರಾಜ್ಯದಲ್ಲಿ ಬ್ರಾಹ್ಮಣ ಶಾಸಕರು ಎಷ್ಟು ಜನ ಇದ್ದಾರೆ..?, ಎಷ್ಟು ಮಂದಿಗೆ ಟಿಕೆಟ್ ಕೊಟ್ಟಿದ್ದಾರೆ..?, ಮಾತನಾಡುವವರು ಏನು ಬೇಕಾದರೂ ಮಾತನಾಡುತ್ತಾರೆ. ಹಿನ್ನೆಲೆ ಅಥವಾ ಪುರಾವೆ ಇಟ್ಟುಕೊಂಡು ಮಾತನಾಡಬೇಕು. ಒಂದು ವೇಳೆ ಬ್ರಾಹ್ಮಣರು ಮುಖ್ಯಮಂತ್ರಿ ಆಗೋದಾದರೆ ಆಗಲಿ. ಯಾಕೆ ಬ್ರಾಹ್ಮಣರು ಸಿಎಂ ಆಗಬಾರದು..? ಬ್ರಾಹ್ಮಣರು ಭಾರತದ ಪ್ರಜೆಗಳಲ್ಲವೆ ಎಂದು ಪ್ರಶ್ನಿಸಿದರು.
Advertisement
Advertisement
ಬ್ರಾಹ್ಮಣರಿಂದಲೇ ಗಾಂಧಿ (Mahatma Gandhi) ಹತ್ಯೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ಒಬ್ಬ ವ್ಯಕ್ತಿ ಮಾಡಿದ ತಪ್ಪಿಗೆ ಇಡೀ ಸಮಾಜವನ್ನ ದೂಷಿಸುವುದಾದರೆ ಇತರೆ ಸಮಾಜದಲ್ಲಿ ನಡೆದ ವಿಚಾರವನ್ನ ಸಾಮೂಹಿಕರಣ ಮಾಡ್ತಿಲ್ಲ. ಬ್ರಾಹ್ಮಣ ಸಮಾಜವನ್ನ ದೂರಬೇಕು ಎಂದು ಯಾವುದಾದರೂ ಒಂದು ನೆಪ ಮಾಡಿ ದೂರುತ್ತಾರೆ. ಪ್ರಜಾಪ್ರಭುತ್ವ ಸಮಾಜದಲ್ಲಿ ಯಾರಿಗೂ ಅನ್ಯಾಯವಾಗಬಾರದು ಎಂದರು. ಇದನ್ನೂ ಓದಿ: ಬಿಜೆಪಿ ಅಧಿಕಾರಕ್ಕೆ ಬಂದರೆ ಪ್ರಹ್ಲಾದ್ ಜೋಶಿ ಸಿಎಂ- ಹೆಚ್‍ಡಿಕೆ ಹೊಸ ಬಾಂಬ್
Advertisement
ಇವತ್ತು ಯಾವುದೋ ಸಮಾಜ, ಧರ್ಮದ ಪರವಾಗಿ ಸರ್ಕಾರ ನಡೆಯೋದಾದರೆ ಅನ್ಯಾಯವಾದಾಗ ಒಂದು ಧರ್ಮದ ವಿರುದ್ಧ ಮತ್ತೊಂದು ಧರ್ಮ ಪುಟಿದೇಳಬೇಕು. ಪ್ರಜಾಪ್ರಭುತ್ವ ಸಮಾಜದಲ್ಲಿ ಈ ರೀತಿ ಒಂದು ಧರ್ಮವನ್ನ ದೂಷಿಸುವುದು ಸರಿಯಲ್ಲ. ಯಾವ ಧರ್ಮದವ್ರಿಗೂ ಅನ್ಯಾಯ ಆಗಬಾರದು ಎಂದು ಹೇಳಿದರು.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k