ಇಟಾನಗರ: ಬಿಜೆಪಿ ನಾಯಕ ಪೆಮಾ ಖಂಡು (Pema Khandu) ಅವರು ಅರುಣಾಚಲ ಪ್ರದೇಶದ (Arunachal Pradesh) ಮುಖ್ಯಮಂತ್ರಿಯಾಗಿ ಸತತ ಮೂರನೇ ಅವಧಿಗೆ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು.
ಇಟಾನಗರದಲ್ಲಿರುವ ಡಿಕೆ ರಾಜ್ಯ ಸಮಾವೇಶ ಕೇಂದ್ರದಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಕೇಂದ್ರ ಸಚಿವರಾದ ಅಮಿತ್ ಶಾ, ಜೆಪಿ ನಡ್ಡಾ, ಕಿರಣ್ ರಿಜಿಜು ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಉಪಸ್ಥಿತರಿದ್ದರು. ಇದನ್ನೂ ಓದಿ: ಒಡಿಶಾದ ಮೊದಲ ಬಿಜೆಪಿ ಸಿಎಂ ಆಗಿ ಮೋಹನ್ ಚರಣ್ ಪ್ರಮಾಣವಚನ ಸ್ವೀಕಾರ
Advertisement
Advertisement
ಖಂಡು ಅವರು ಬುಧವಾರ ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದರು. ಸತತ ಮೂರನೇ ಅವಧಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. 44 ವಯಸ್ಸಿನ ಖಂಡು 2016 ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು.
Advertisement
ಅರುಣಾಚಲ ಪ್ರದೇಶದ ಗವರ್ನರ್ ಲೆಫ್ಟಿನೆಂಟ್ ಜನರಲ್ ಕೆಟಿ ಪರ್ನಾಯಕ್ (ನಿವೃತ್ತ) ಖಂಡು ಅವರನ್ನು ಸರ್ಕಾರ ರಚಿಸಲು ಆಹ್ವಾನಿಸಿದ್ದರು. ಇದನ್ನೂ ಓದಿ: ಪೆಮಾ ಖಂಡು ಸತತ 3ನೇ ಅವಧಿಗೆ ಅರುಣಾಚಲ ಪ್ರದೇಶ ಸಿಎಂ
Advertisement
60 ಸದಸ್ಯ ಬಲದ ಅರುಣಾಚಲ ಪ್ರದೇಶ ವಿಧಾನಸಭೆಗೆ ಲೋಕಸಭೆ ಚುನಾವಣೆಯ ಜೊತೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 46 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಚುನಾವಣೆಗೂ ಮುನ್ನ ರಾಜ್ಯದಲ್ಲಿ ಬಿಜೆಪಿ ಹತ್ತು ಸ್ಥಾನಗಳನ್ನು ಅವಿರೋಧವಾಗಿ ಗೆದ್ದಿತ್ತು.