ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ (Prajwal Revanna) ಜರ್ಮನಿಯ ಮ್ಯೂನಿಕ್‌ನಿಂದ (Munich Airport) ಬೆಂಗಳೂರಿಗೆ (Bengaluru) ಪ್ರಯಾಣ ಬೆಳೆಸಿದ್ದಾರೆ.
ಮ್ಯೂನಿಕ್ ವಿಮಾನ ನಿಲ್ದಾಣದ ವಲಸೆ ವಿಭಾಗ ಬೆಂಗಳೂರು ವಿಮಾನ ನಿಲ್ದಾಣದ ವಲಸೆ ವಿಭಾಗಕ್ಕೆ ಪ್ರಯಾಣಿಕರ ಪಟ್ಟಿ ಕಳುಹಿಸಿದೆ. ಈ ಪಟ್ಟಿಯಲ್ಲಿ ಪ್ರಜ್ವಲ್ ರೇವಣ್ಣ ಹೆಸರು ಇರುವುದನ್ನು ಎಸ್‌ಐಟಿ ಖಚಿತ ಪಡಿಸಿದೆ.
- Advertisement
ಲುಫ್ತನ್ಸಾ ವಿಮಾನದಲ್ಲಿ 3 ಲಕ್ಷ ರೂ. ಖರ್ಚು ಮಾಡಿ ಬಿಸಿನೆಸ್ ದರ್ಜೆಯ (Business Class) ಟಿಕೆಟ್ ಖರೀದಿಸಿ ಪ್ರಜ್ವಲ್ ಪ್ರಯಾಣ ಮಾಡುತ್ತಿದ್ದಾರೆ. ಒಟ್ಟು 23 ಬಿಸಿನೆಸ್ ದರ್ಜೆಯ ಟಿಕೆಟ್ ಪೈಕಿ 8 ಮಂದಿ ಮಾತ್ರ ಬುಕ್ ಮಾಡಿದ್ದಾರೆ. ಪ್ರಜ್ವಲ್ ರೇವಣ್ಣ ಒಬ್ಬಂಟಿಯಾಗಿ ವಿಂಡೋ ಸೀಟ್‌ನಲ್ಲಿ ಕುಳಿತಿದ್ದಾರೆ.
- Advertisement
ಭಾರತೀಯ ಕಾಲಮಾನ ಸಂಜೆ 4:09ಕ್ಕೆ ವಿಮಾನ ಟೇಕಾಫ್ ಆಗಿದ್ದು ಮಧ್ಯರಾತ್ರಿ 1:05 ರ ವೇಳೆಗೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡ್ ಆಗಲಿದೆ. ಈಗಾಗಲೇ ಎಸ್‌ಐಟಿ ತಂಡ ವಿಮಾನ ನಿಲ್ದಾಣದಲ್ಲಿ ಬೀಡು ಬಿಟ್ಟಿದ್ದು, ಪ್ರಜ್ವಲ್ ಚೆಕ್ ಔಟ್ ಆಗುತ್ತಿದ್ದಂತೆ ಅವರನ್ನು ಬಂಧಿಸಲಿದ್ದಾರೆ.