ಬೆಂಗಳೂರು: ಅಶ್ಲೀಲ ಪೆನ್ ಡ್ರೈವ್ ಸುಳಿಯಲ್ಲಿ ಸಿಲುಕಿರುವ ಪ್ರಜ್ವಲ್ ರೇವಣ್ಣ (Prajwal Revanna) ಇಂದು ಜರ್ಮನಿಯ (Germany) ಮ್ಯೂನಿಕ್‌ನಿಂದ ಹೊರಟು ಬೆಂಗಳೂರಿಗೆ (Bengaluru) ಬರುವ ಸಾಧ್ಯತೆಯಿದೆ.
ಲುಫ್ತಾನ್ಸಾ ಏರ್‌ಲೈನ್ಸ್ ಇಂದು ಮಧ್ಯಾಹ್ನ 12:30ಕ್ಕೆ ಮ್ಯೂನಿಕ್‌ನಿಂದ ಹೊರಟು ರಾತ್ರಿ 12:30ಕ್ಕೆ ಬೆಂಗಳೂರಿಗೆ ಆಗಮಿಸಲಿದೆ. ಈ ವಿಮಾನದಲ್ಲಿ ಪ್ರಜ್ವಲ್ ರೇವಣ್ಣ ಆಗಮಿಸುವ ನಿರೀಕ್ಷೆಯಿದೆ. ಇದನ್ನೂ ಓದಿ: 40 ವರ್ಷದ ರಾಜಕೀಯದಲ್ಲಿ ನನ್ನ ಮೇಲೆ ಇದೇ ಫಸ್ಟ್ ಕೇಸ್: ಜೈಲಿಂದ ಹೊರಬಂದ ರೇವಣ್ಣ ಮೊದಲ ಪ್ರತಿಕ್ರಿಯೆ
ಪ್ರಜ್ವಲ್ ರೇವಣ್ಣ ಬುಸಿನೆಸ್ ಕ್ಲಾಸ್ ಟಿಕೆಟ್ ಬುಕ್ ಮಾಡಿದ್ದಾರೆ. ಇಲ್ಲಿಯವರೆಗೆ ಟಿಕೆಟ್ ಕ್ಯಾನ್ಸಲ್ ಮಾಡಿಲ್ಲ. ಕೊನೆ ಕ್ಷಣದಲ್ಲಿ ಟಿಕೆಟ್ ರದ್ದು ಮಾಡದೇ ಇದ್ದರೆ ಪ್ರಜ್ವಲ್ ರೇವಣ್ಣ ರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದಾರೆ.
ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡದ (SIT) ಪೊಲೀಸರು ಹೆಚ್‌ಡಿ ರೇವಣ್ಣ (HD Revanna) ಅವರನ್ನು ಬಂಧಿಸಿತ್ತು. ಜನ ಪ್ರತಿನಿಧಿಗಳ ವಿಶೇಷ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ರೇವಣ್ಣ ಮಂಗಳವಾರ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದರು.