ಬೆಂಗಳೂರು: ಲೋಕಸಭಾ ಚುನಾವಣೆಯ ಬಳಿಕ ನಾಪತ್ತೆಯಾಗಿದ್ದ ಪ್ರಜ್ವಲ್ ರೇವಣ್ಣ ಕೊನೆಗೂ ಪ್ರತ್ಯಕ್ಷರಾಗಿದ್ದಾರೆ. ಮೇ 31 ರಂದು ನಾನು ರಾಜ್ಯಕ್ಕೆ ಬರುತ್ತೇನೆ ಎಂದು ಪ್ರಜ್ವಲ್ ರೇವಣ್ಣ (Prajwal Revanna) ಹೇಳಿದ್ದಾರೆ.
ವಿದೇಶದಿಂದ ವಿಡಿಯೋ ರಿಲೀಸ್ ಮಾಡಿದ ಅವರು ಬೆಂಗಳೂರಿಗೆ (Bengaluru) ಬಂದು ಶುಕ್ರವಾರ ಬೆಳಗ್ಗೆ 10 ಗಂಟೆಗೆ ಎಸ್‌ಐಟಿ (SIT) ಮುಂದೆ ಹಾಜರಾಗಿ ಉತ್ತರ ನೀಡುತ್ತೇನೆ ಎಂದು ತಿಳಿಸಿದ್ದಾರೆ. ಅಷ್ಟೇ ಅಲ್ಲದೇ ಕುಟುಂಬಸ್ಥರು ಮತ್ತು ರಾಜ್ಯದ ಜನತೆಯಲ್ಲಿ ಪ್ರಜ್ವಲ್ ರೇವಣ್ಣ ಕ್ಷಮೆ ಕೇಳಿದ್ದಾರೆ. ಇದನ್ನೂ ಓದಿ: ಐಆರ್‌ಎಸ್ ಅಧಿಕಾರಿಯ ಫ್ಲಾಟ್‍ನಲ್ಲಿ ಮಹಿಳೆಯ ಶವ ಪತ್ತೆ – ಕೊಲೆ ಆರೋಪ
Advertisement
Advertisement
ಹೇಳಿಕೆಯಲ್ಲಿ ಏನಿದೆ?
ವಿದೇಶಕ್ಕೆ ಹೋಗುವ ಬಗ್ಗೆ ಮೊದಲೇ ಪ್ಲಾನ್ ಆಗಿತ್ತು. ವಿದೇಶಕ್ಕೆ ಹೋಗುವಾಗ ನನ್ನ ಮೇಲೆ ಯಾವುದೇ ಆರೋಪ ಇರಲಿಲ್ಲ. ನಾನು ವಿದೇಶದಲ್ಲಿದ್ದಾಗ ಯೂಟ್ಯೂಬ್ ನ್ಯೂಸ್ ನೋಡಿ ನನ್ನ ಮೇಲೆ ಗಂಭೀರ ಆರೋಪ ಬಂದಿರುವುದು ಕಂಡುಬಂದಿದೆ. ಇದಾದ ನಂತರ ನನ್ನ ಹೆಸರನ್ನು ರಾಜಕೀಯವಾಗಿ ಬಳಸಿಕೊಂಡಿದ್ದಾರೆ. ಎಸ್‌ಐಟಿ ನೋಟಿಸ್ ನೀಡಿದ ವಿಚಾರ ಗೊತ್ತಾಯಿತು. ನಾನು ರಾಜಕೀಯವಾಗಿ ಬೆಳೆಯಬಾರದು ಎಂಬ ಕಾರಣಕ್ಕೆ ನನ್ನ ಮೇಲೆ ಪಿತೂರಿ ಮಾಡಿದ್ದಾರೆ. ಇದನ್ನೂ ಓದಿ: ಅಧಿಕಾರಿಗಳ ಹೆಸರು ಉಲ್ಲೇಖಿಸಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ!
Advertisement
ನನ್ನ ಮೇಲೆ ರಾಜಕೀಯ ಪಿತೂರಿ ಮಾಡಲಾಗಿದೆ. ಚುನಾವಣೆ ಸಮಯದಲ್ಲಿ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರ ಆರೋಪದಿಂದ ನಾನು ಮಾನಸಿಕ ಖಿನ್ನತೆಗೆ ಜಾರಿದ್ದೆ. ಈ ಖಿನ್ನತೆಯಿಂದ ಹೊರ ಬರದಲು ಕೆಲ ಸಮಯ ಬೇಕಿತ್ತು. ನನಗೆ ನ್ಯಾಯಾಲಯದ ಮೇಲೆ ನಂಬಿಕೆಯಿದೆ. ಈ ಸುಳ್ಳು ಪ್ರಕರಣದಿಂದ ನಾನು ಹೊರ ಬರುತ್ತೇನೆ. ಬಂದ ಮೇಲೆ ಎಲ್ಲರಿಗೂ ಉತ್ತರ ನೀಡುತ್ತೇನೆ ಎಂದು ಹೇಳಿದ್ದಾರೆ.