ಹಾಸನ: ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋ ಇರುವ ಪೆನ್‌ಡ್ರೈವ್ (Pendrive) ಹಂಚಿಕೆ ಆರೋಪದಡಿ ಮಂಗಳವಾರ ಬೆಂಗಳೂರಿನಲ್ಲಿ ಬಂಧನಕ್ಕೊಳಗಾಗಿರುವ ಇಬ್ಬರು ಆರೋಪಿಗಳಾದ ನವೀನ್ ಗೌಡ ಹಾಗೂ ಚೇತನ್ ಗೌಡರನ್ನು ನ್ಯಾಯಾಲಯ ಮೂರು ದಿನಗಳ ಕಾಲ ಎಸ್‌ಐಟಿ (SIT) ವಶಕ್ಕೆ ನೀಡಿದೆ.
ಬುಧವಾರ ಇಬ್ಬರನ್ನೂ ಹಿಮ್ಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ನಂತರ ಹಾಸನದ ಎರಡನೇ ಅಧಿಕ ಹಿರಿಯ ಸಿವಿಲ್ ಮತ್ತು ಜೆಎಂಎಫ್‌ಸಿ ಕೋರ್ಟ್ ಮುಂದೆ ಹಾಜರು ಪಡಿಸಲಾಯಿತು. ವಿಚಾರಣೆ ನಡೆಸಿದ ನ್ಯಾಯಾಧೀಶರು ಬುಧವಾರದಿಂದ ಜೂ.1ರವರೆಗೆ ಎಸ್‌ಐಟಿ ಕಸ್ಟಡಿಗೆ ನೀಡಿ ಆದೇಶಿಸಿದರು. ಇದನ್ನೂ ಓದಿ: ಕಾಲೇಜಿನಲ್ಲಿ ಜೈ ಶ್ರೀರಾಮ್ ಹಾಡು ಹಾಕಿದ್ದಕ್ಕೆ ಮಾರಾಮಾರಿ- 17ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ FIR
ಜೂನ್ 1ರ ಶನಿವಾರ ಸಂಜೆ 4:30 ಕ್ಕೆ ಮತ್ತೆ ಕೋರ್ಟ್‌ಗೆ ಹಾಜರುಪಡಿಸಲು ತಿಳಿಸಲಾಗಿದೆ. ನಾಳೆ (ಗುರುವಾರ) ಇಬ್ಬರು ಆರೋಪಿಗಳನ್ನು ಸ್ಥಳ ಮಹಜರಿಗೆ ಕರೆದೊಯ್ಯಲಿದ್ದು, ಪೆನ್‌ಡ್ರೈವ್ ಹಂಚಿಕೆ ಹಿಂದೆ ಇರುವ ಕಾಣದ ಕೈಗಳ ಬಗ್ಗೆ ಆರೋಪಿಗಳಿಂದ ಸಾಕ್ಷ್ಯ ಸಂಗ್ರಹಕ್ಕೆ ಎಸ್‌ಐಟಿ ಮುಂದಾಗಿದೆ. ಇದನ್ನೂ ಓದಿ: ಹಗ್ಗಜಗ್ಗಾಟದಲ್ಲಿ ಚೀನಿಯರನ್ನು ಸೋಲಿಸಿದ ಭಾರತೀಯ ಸೈನಿಕರು