ಬಳ್ಳಾರಿ: ಅಪ್ರಾಪ್ತರ ಕೈಗೆ ಬೈಕ್ ( Bike) ಹಾಗೂ ಕಾರು ಓಡಿಸಲು ಕೊಟ್ಟರೆ ಪೋಷಕರಿಗೆ 25 ಸಾವಿರ ರೂ. ದಂಡ ಹಾಗೂ 3 ವರ್ಷ ಜೈಲು ಶಿಕ್ಷೆ ವಿಧಿಸಲು ಪೊಲೀಸ್ (Police) ಇಲಾಖೆ ಕ್ರಮಕೈಗೊಂಡಿದೆ. ಈ ವಿಚಾರವಾಗಿ ವಿಜಯನಗರ (Vijayanagara) ಎಸ್‍ಪಿ ಶ್ರೀಹರಿಬಾಬು ಖಡಕ್ ಆದೇಶ ಹೊರಡಿಸಿದ್ದಾರೆ.
ಇಂದಿನಿಂದಲೇ ಈ ಆದೇಶ ಜಾರಿಗೆ ಬರಲಿದ್ದು, ಆರ್‍ಟಿಒದಿಂದ ಪರವಾನಗಿ ಇಲ್ಲದೆ ವಾಹನ ಚಲಾಯಿಸಿದರೂ ಕಠಿಣ ಕ್ರಮಕೈಗೊಳ್ಳುವ ಎಚ್ಚರಿಕೆಯನ್ನು ಅವರು ನೀಡಿದ್ದಾರೆ. ಈಗಾಗಲೇ ಪೊಲೀಸ್ ಸಿಬ್ಬಂದಿ ಕಾರ್ಯದಲ್ಲಿ ತೊಡಗಿದ್ದಾರೆ. ಅಪ್ರಾಪ್ತರು ಬೈಕ್ ಹಾಗೂ ಕಾರು ಓಡಿಸೋದು ಕಂಡು ಬಂದರೆ ಪೋಷಕರ ಮೇಲೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಸ್‍ಪಿ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಮಳೆ ಕೊರತೆ – ಮೂರೇ ದಿನಕ್ಕೆ ಕೆಆರ್‌ಎಸ್ ಒಳಹರಿವಿನಲ್ಲಿ ತೀವ್ರ ಕುಸಿತ
ವಾಹನ ಪರವಾನಗಿ ಇಲ್ಲದೇ ಹಾಗೂ ಅಪ್ರಾಪ್ತರ ವಾಹನ ಚಾಲನೆಗೆ ಮೋಟಾರು ಕಾಯ್ದೆ ಅಡಿ ಅಗತ್ಯ ಕ್ರಮ ಜರುಗಿಸಲಾಗುವುದು ಎಂದು ಆದೇಶದಲ್ಲಿ ಅವರು ತಿಳಿಸಿದ್ದಾರೆ. ಇದನ್ನೂ ಓದಿ: ನಮ್ಮ ಮೆಟ್ರೋದಲ್ಲಿ ಯೂಟ್ಯೂಬರ್ ಹುಚ್ಚಾಟ – ಮೂರ್ಛೆ ಬಂದವನಂತೆ ಪ್ರ್ಯಾಂಕ್ ಮಾಡಿ ಪ್ರಯಾಣಿಕರಿಗೆ ಶಾಕ್
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]