ಬೆಂಗಳೂರು: ಕಳೆದ 34 ದಿನಗಳ ಬಳಿಕ ಬೆಂಗಳೂರಿಗೆ ಬಂದಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಇಂದು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿತ್ತು.
ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಚೆಕಪ್‌ಗೆ ಎಸ್‌ಐಟಿ ಅಧಿಕಾರಿಗಳು ಕರೆದುಕೊಂಡು ಹೋಗಿದ್ದರು. ವೈದ್ಯಕೀಯ ತಪಾಸಣೆಯಲ್ಲಿ ಪ್ರಜ್ವಲ್ ಫಿಟ್ & ಫೈನ್ ಆಗಿದ್ದಾರೆ ಎಂಬುದಾಗಿ ಆಸ್ಪತ್ರೆಯ ಮೂಲಗಳು ತಿಳಿಸಿವೆ.
Advertisement
Advertisement
ಜನರಲ್ ಚೆಕಪ್ ಮಾಡಿರೋ ಬೌರಿಂಗ್ ಆಸ್ಪತ್ರೆಯ (Bowring Hospital) ವೈದ್ಯರು, ಬಿಪಿ, ಶುಗರ್, ಹಾರ್ಟ್ ಬೀಟ್, ಪಲ್ಸ್ ರೇಟ್, ಬಾಡಿ ಟೆಂಪರೇಚರ್, ಆಕ್ಸಿಜನ್ ಲೆವಲ್ ಚೆಕ್ ಮಾಡಿದ್ದಾರೆ. ಎಲ್ಲವೂ ನಾರ್ಮಲ್ ಇರುವುದಾಗಿ ರಿಪೋರ್ಟ್ ಬಂದಿದೆ. ಒಟ್ಟಿನಲ್ಲಿ ಪ್ರಜ್ವಲ್ ರೇವಣ್ಣ ಅವರ ದೈಹಿಕ ಆರೋಗ್ಯ ನಾರ್ಮಲ್ ಆಗಿದ್ದು, ಯಾವುದೇ ಸಮಸ್ಯೆ ಇಲ್ಲ ಅಂತಾ ವೈದ್ಯರು ರಿಪೋರ್ಟ್ ಕೊಟ್ಟಿರುವುದಾಗಿ ಬೌರಿಂಗ್ ಆಸ್ಪತ್ರೆಯ ವೈದ್ಯರ ಮೂಲಗಳಿಂದ ಮಾಹಿತಿ ದೊರೆತಿದೆ. ಇದನ್ನೂ ಓದಿ: ಭವಾನಿ ರೇವಣ್ಣಗೆ ಎಸ್‌ಐಟಿಯಿಂದ ಮತ್ತೊಂದು ನೋಟಿಸ್
Advertisement
Advertisement
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋಗಳಿರುವ ಪೆನ್‌ಡ್ರೈವ್ ಪ್ರಕರಣವು ದೇಶಾದ್ಯಂತ ಭಾರೀ ಕೋಲಹಲ ಎಬ್ಬಿಸಿತ್ತು. ಈ ನಡುವೆ ಪ್ರಕರಣ ಹೊರ ಬರುತ್ತಿದ್ದಂತೆಯೇ ಅಂದರೆ ಲೋಕಸಭಾ ಚುನಾವಣೆಯ ಮರುದಿನವೇ ಸಂಸದರು ಜರ್ಮನಿಗೆ (Germany) ಹಾರಿದ್ದರು. ಇದಾದ ಬಳಿಕ ಎಸ್‌ಐಟಿ ನೋಟಿಸ್. ಲುಕೌಟ್ ನೋಟಿಸ್ ಜಾರಿ ಮಾಡಿದ್ದರೂ ಪ್ರಜ್ವಲ್ ರೇವಣ್ಣ ಸುಳಿವಿರಲಿಲ್ಲ.
ಇತ್ತ ಸೋಮವಾರ ಅಜ್ಞಾತ ಸ್ಥಳದಿಂದ ವೀಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದ ಪ್ರಜ್ವಲ್ ರೇವಣ್ಣ, ಶುಕ್ರವಾರ ಬೆಳಗ್ಗೆ ಎಸ್‌ಐಟಿ ಮುಂದೆ ಹಾಜರಾಗುವುದಾಗಿ ತಿಳಿಸಿದ್ದರು. ಅಂತೆಯೇ ನಿನ್ನೆ ಜರ್ಮನಿಯಿಂದ ಹೊರಟಿದ್ದ ಅವರು ಮಧ್ಯರಾತ್ರಿ ಬೆಂಗಳೂರಿಗೆ ಲ್ಯಾಂಡ್ ಆಗಿದ್ದಾರೆ. ಬೆಂಗಳೂರು ಏರ್‌ಪೋರ್ಟ್‌ಗೆ ಪ್ರಜ್ವಲ್ ರೇವಣ್ಣ ಅವರು ಬಂದು ಇಳಿಯುತ್ತಿದ್ದಂತೆಯೇ ಎಸ್‌ಐಟಿಯ ಮಹಿಳಾ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.