ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಶಾಸಕರಾಗಿರುವ ಪ್ರೀತಂ ಗೌಡಗೆ (Preetham Gowda) ಎಸ್‍ಐಟಿ ಅಧಿಕಾರಿಗಳು ನೊಟೀಸ್ ನೀಡುವ ಸಾಧ್ಯತೆಗಳಿವೆ.
ಬೆಂಗಳೂರಿನಲ್ಲಿ ಪೆನ್‍ಡ್ರೈವ್ (Prajwal Pendrive Case) ಖರೀದಿ ಮಾಡಿಸಿದ್ದು ಪ್ರೀತಂ ಗೌಡ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಪ್ರೀತಂಗೌಡ ವಿರುದ್ಧ ಸಿಐಡಿ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.
Advertisement
Advertisement
ಸಂತ್ರಸ್ತೆಯಿಂದ ಪ್ರಜ್ವಲ್ ಲೈಂಗಿಕ ದೌರ್ಜನ್ಯ ಎಸಗಿರುವ ವೀಡಿಯೋ ಮಾಡಿ ಶೇರ್ ಮಾಡಿರುವ ಆರೋಪ ಶಾಸಕರ ಮೇಲಿದೆ. ಹೀಗಾಗಿ ಪ್ರಜ್ವಲ್ ಜೊತೆಗೆ ಹಾಸನ ಮಾಜಿ ಶಾಸಕ ಪ್ರೀತಂ ಗೌಡ, ಚೇತನ್ ಹಾಗೂ ಕ್ವಾಲಿಟಿ ಬಾರ್ ಶರತ್ ವಿರುದ್ಧ ಕೂಡ ಕಳೆದ ವಾರ ಐಪಿಸಿ ಸೆಕ್ಷನ್ 354 (ಮಹಿಳೆಯ ಮೇಲಿನ ದೌರ್ಜನ್ಯ) , ಐಟಿ ಆಕ್ಟ್ 66ಇ ಅಡಿ ಪ್ರಕರಣ ದಾಖಲು ಮಾಡಲಾಗಿದೆ.
Advertisement
Advertisement
ವಿಡೀಯೋ ಹಂಚಿಕೆ ಸಂಬಂಧ ದಾಖಲಾಗಿರುವ ಎಫ್ ಐ ಆರ್ ನಲ್ಲಿ ಪ್ರೀತಮ್ ಗೌಡ ನಾಲ್ಕನೆ ಆರೋಪಿಯಾಗಿದ್ದಾರೆ. ಹೀಗಾಗಿ ಯಾವುದೇ ಕ್ಷಣದಲ್ಲಾದರೂ ಮಾಜಿ ಶಾಸಕ ಪ್ರೀತಂ ಗೌಡಗೆ ಎಸ್‍ಐಟಿ ನೊಟೀಸ್ ನೀಡುವ ಸಾಧ್ಯತೆಗಳಿವೆ. ಬಳಿಕ 66ಇ ಸೆಕ್ಷನ್ (ಗೌಪ್ಯತೆಯ ಉಲ್ಲಂಘನೆ) ಅಡಿ ಬಂಧನ ಮಾಡಿ ವಿಚಾರಣೆ ಮಾಡುವ ಸಾಧ್ಯತೆಗಳಿವೆ. ಇದನ್ನೂ ಓದಿ: ಸೂರಜ್ ರೇವಣ್ಣಗೆ ಇಂದೂ ಮೆಡಿಕಲ್ ಟೆಸ್ಟ್ – ಲಿಂಗತ್ವ ಪರೀಕ್ಷೆ ಸಾಧ್ಯತೆ!
ತಮ್ಮ ವಿರುದ್ಧ ಎಫ್‍ಐಆರ್ ದಾಖಲಾದ ವಿಚಾರಕ್ಕೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿದ್ದ ಅವರನ್ನು ಮಾಧ್ಯಮವರು ಈ ಬಗ್ಗೆ ಕೇಳಿದಾಗ, ಪ್ರಕರಣ ದಾಖಲಾದ ಬಗ್ಗೆ ನನಗೆ ಗೊತ್ತಿಲ್ಲ. ಅದರ ಬಗ್ಗೆ ತಿಳಿದುಕೊಳ್ಳುತ್ತೇನೆ. ಆ ಬಳಿಕ ಬಂದು ಮತ್ತೆ ಮಾತಾಡ್ತೇನೆ ಎಂದು ಹೇಳಿ ತರಾತುರಿಯಲ್ಲಿ ಕಾರು ಹತ್ತಿ ಹೊರಟರು.