ಬೆಂಗಳೂರು: ಮಹಿಳೆಯ ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಪ್ರಜ್ವಲ್ ರೇವಣ್ಣ (Prajwal Revanna) ಅಪ್ಪನ ಹಾದಿಯಲ್ಲೇ ನಡೆದಿದ್ದಾರೆ. ಎಸ್‌ಐಟಿ (SIT) ಕಚೇರಿಯಲ್ಲಿ ಎರಡನೇ ದಿನ ವಿಚಾರಣೆ ಎದುರಿಸಿರುವ ಪ್ರಜ್ವಲ್ ರೇವಣ್ಣ ಅಧಿಕಾರಿಗಳ ಯಾವುದೇ ಪ್ರಶ್ನೆಗೂ ಸೂಕ್ತ ಉತ್ತರ ನೀಡದೇ ಅಸಹಕಾರ ತೋರಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಪ್ರಕರಣ ಸಂಬಂಧ ಪ್ರಜ್ವಲ್ ರೇವಣ್ಣ ಅಧಿಕಾರಿಗಳಿಗೆ ಯಾವುದೇ ಸೂಕ್ತ ಉತ್ತರ ನೀಡಿಲ್ಲ ಎಂದು ಮೂಲಗಳು ತಿಳಿಸಿವೆ. ಇದು ರಾಜಕೀಯ ಪಿತೂರಿ. ಸುಖಾಸುಮ್ಮನೆ ನನ್ನನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ. ನಿಮ್ಮ ಕೆಲಸ ನೀವು ಮಾಡಿ. ನಾನೇನು ಹೇಳಲ್ಲ ಎಂದಿದ್ದಾರೆ ಎಂಬ ಮಾಹಿತಿ ಲಭ್ಯ ವಾಗಿದೆ. ಇದನ್ನೂ ಓದಿ: ನಾನು ಆರೋಗ್ಯವಾಗಿದ್ದೇನೆ: ಶಾಮನೂರು ಶಿವಶಂಕರಪ್ಪ
Advertisement
Advertisement
ಎಸ್‌ಐಟಿ ಪ್ರಶ್ನೆಗಳಿಗೆ ಪ್ರಜ್ವಲ್ ನಮ್ಮ ಲಾಯರ್‌ನ ಕೇಳಬೇಕು ಎಂದು ಹೇಳಿದ್ದಾರೆ ಎನ್ನಲಾಗಿದೆ. ಶುಕ್ರವಾರ ಇಡೀ ದಿನದ ವಿಚಾರಣೆಯಲ್ಲಿ ಪ್ರಜ್ವಲ್ ಯಾವುದೇ ಪ್ರಶ್ನೆಗಳಿಗೆ ಉತ್ತರ ನೀಡಿಲ್ಲ. ತನಿಖಾಧಿಕಾರಿ ಎಷ್ಟೇ ಪ್ರಶ್ನೆ ಮಾಡಿದರೂ ನಮ್ಮ ಲಾಯರ್ ಕೇಳಬೇಕು ಎಂದು ಹೇಳಿದ್ದಾರೆ. ನನಗೂ ಪ್ರಕರಣಕ್ಕೂ ಸಂಬಂಧವಿಲ್ಲ. ನೀವು ಏನೇ ಪ್ರಶ್ನೆ ಕೇಳಿದರೂ ನಮ್ಮ ಲಾಯರ್ ಬಳಿ ಮಾತನಾಡಿ ಹೇಳುತ್ತೇನೆ. ಏನೇ ಉತ್ತರ ಕೊಡುವುದಿದ್ದರೂ ಲಾಯರ್ ಬಳಿ ಮಾತನಾಡಿ ಆ ನಂತರ ಉತ್ತರಿಸುತ್ತೇನೆ ಎಂದಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: 19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 69.50 ರೂ. ಇಳಿಕೆ
Advertisement
Advertisement
ಪ್ರಜ್ವಲ್ ರೇವಣ್ಣನನ್ನು ಶುಕ್ರವಾರ ಕೋರ್ಟ್ ಮುಂದೆ ಹಾಜರುಪಡಿಸಿದ್ದ ಎಸ್‌ಐಟಿ ಅಧಿಕಾರಿಗಳು ಆರು ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದಾರೆ. ರಾತ್ರಿ 9 ಗಂಟೆ ತನಕ ವಿಚಾರಣೆ ನಡೆಸಿದ ಅಧಿಕಾರಿಗಳು, ನಂತರ ಊಟ ನೀಡಿದರು. ರಾತ್ರಿ 11:30 ತನಕ ಕೂತಿದ್ದ ಪ್ರಜ್ವಲ್ ನಂತರ ನಿದ್ದೆಗೆ ಜಾರಿದ್ದಾರೆ ಎನ್ನಲಾಗಿದೆ. ಇಂದು ಕೂಡ ವಿಚಾರಣೆ ನಡೆಸಲಿರುವ ಅಧಿಕಾರಿಗಳು ಭಾನುವಾರ ಅಥವಾ ಸೋಮವಾರ ಸ್ಥಳ ಮಹಜರು ಪ್ರಕ್ರಿಯೆಗೆ ಹಾಸನದ ಹೊಳೆನರಸೀಪುರಕ್ಕೆ ಕರೆದುಕೊಂಡು ಹೋಗುವ ಸಾಧ್ಯತೆ ಇದೆ. ಇದನ್ನೂ ಓದಿ: ಸಂತ್ರಸ್ತೆ ಅಪಹರಣ ಪ್ರಕರಣ; ಭವಾನಿ ರೇವಣ್ಣಗೆ ಬಂಧನ ಭೀತಿ