ಕತ್ತಿ, ಜಾರಕಿಹೊಳಿ ಸಹೋದರರ ಮಧ್ಯೆ ಸಂಘರ್ಷಕ್ಕೆ ವೇದಿಕೆಯಾಗುತ್ತಾ ಬೆಳಗಾವಿ ಜಿಲ್ಲಾ ವಿಭಜನೆ ಕೂಗು?

Public TV
1 Min Read
umesh katti ramesh jarkiholi

ಬೆಳಗಾವಿ: ಸಚಿವ ಉಮೇಶ್ ಕತ್ತಿ ಮತ್ತು ರಮೇಶ್ ಜಾರಕಿಹೊಳಿ ಸಹೋದರರ ಮಧ್ಯೆ ಬೆಳಗಾವಿ ಜಿಲ್ಲಾ ವಿಭಜನೆ ಕೂಗು ಮತ್ತೊಂದು ಸಂಘರ್ಷಕ್ಕೆ ವೇದಿಕೆ ಆಗುವ ಸಾಧ್ಯತೆ ದಟ್ಟವಾಗಿದೆ. ಬೆಳಗಾವಿಯನ್ನು ಮೂರು ಜಿಲ್ಲೆಯಾಗಿಸಲು ಸಚಿವ ಉಮೇಶ್ ಕತ್ತಿ ಒಲವು ತೋರಿಸಿದ್ದಾರೆ.

ಅದರಲ್ಲಿ ಪ್ರಮುಖವಾಗಿ ಬೆಳಗಾವಿ, ಚಿಕ್ಕೋಡಿ, ಬೈಲಹೊಂಗಲ ಜಿಲ್ಲೆ ಮಾಡುವಂತೆ ಉಮೇಶ್ ಕತ್ತಿ ಆಗ್ರಹಿಸಿದ್ದಲ್ಲದೇ ಸದ್ಯದಲ್ಲೇ ಸಿಎಂ ಭೇಟಿಯಾಗಿ ಮನವಿ ಮಾಡಲು ಉಮೇಶ್ ಕತ್ತಿ ನಿರ್ಧಾರ ಮಾಡಿದ್ದಾರೆ. ಇನ್ನೂ ಉಮೇಶ್ ಕತ್ತಿ ಬೆಂಬಲಕ್ಕೆ ರಮೇಶ್ ಜಾರಕಿಹೊಳಿ ಬದ್ಧವೈರಿ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಸಾಥ್ ನೀಡಿರೋದು ಗೋಕಾಕ್ ಭಾಗದ ಜನರ ಆಕ್ರೋಶಕ್ಕೂ ಕಾರಣವಾಗಿದೆ.

lakshmi hebbalkar 1

ಹೌದು, ಇಂತಹದೊಂದು ಚರ್ಚೆಗಳು ರಾಜಕೀಯ ವಲಯದಲ್ಲಿ ಶುರುವಾಗಿದ್ದು, ಈಗಾಗಲೇ ಉಮೇಶ್ ಕತ್ತಿ ಹೇಳಿಕೆಗೆ ಜಾರಕಿಹೊಳಿ ಸಹೋದರರ ಪರಮಾಪ್ತ ಆಗಿರೋ ಮಾಜಿ ಜಿಲ್ಲಾಪಂಚಾಯಿತಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕಾರ್ಯಕಾರಿಣಿ ಸಭೆ ಬಳಿಕ ಸಂಪುಟ ಸರ್ಜರಿ ಫೈನಲ್: ಸಿಎಂ

ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಜೆ.ಎಚ್. ಪಟೇಲ್ ಅವರು ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಬೆಳಗಾವಿ, ಚಿಕ್ಕೋಡಿ, ಗೋಕಾಕ್ ಅನ್ನು ಜಿಲ್ಲೆಯನ್ನಾಗಿ ಮಾಡಲು ಗೆಜೆಟ್ ನೋಟಿಫಿಕೇಶನ್ ಹೊರಡಿಸಲಾಗಿತ್ತು. ಆದರೆ, ರಾಜಕೀಯ ಕಾರಣದಿಂದ ಅದು ರದ್ದಾಗಿತ್ತು. ಕಳೆದ 20 ವರ್ಷದಿಂದ ಬೆಳಗಾವಿ ಜಿಲ್ಲೆ ವಿಭಜನೆ ಮಾಡಿ ಬೆಳಗಾವಿ, ಚಿಕ್ಕೋಡಿ ಗೋಕಾಕ ಜಿಲ್ಲೆಯಾಗಿ ಘೋಷಣೆ ಮಾಡಬೇಕೆಂದು ಹೋರಾಟ ಮಾಡುತ್ತಾ ಬರುತ್ತಿದ್ದೇವೆ. ಆದರೆ, ಸಚಿವ ಉಮೇಶ್ ಕತ್ತಿ ಅವರು ಮಾಧ್ಯಮಕ್ಕೆ ನೀಡಿದ ಹೇಳಿಕೆಯಲ್ಲಿ ಸ್ಪಷ್ಟತೆ ಇಲ್ಲ ಎಂದು ಹೇಳಿದ್ದಾರೆ.

belagavi

ಲಕ್ಷ್ಮಿ ಹೆಬ್ಬಾಳಕರ್ ಅವರು ಕೂಡ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಮಾತನಾಡಿದ್ದಾರೆ. ಅವರಿಗೂ ನಾವು ವಿನಂತಿಸುತ್ತೇವೆ. ಬೆಳಗಾವಿ ಜಿಲ್ಲೆ ವಿಭಜನೆ ಮಾಡುವುದಾದರೇ ಬೆಳಗಾವಿ, ಚಿಕ್ಕೋಡಿ, ಗೋಕಾಕ್ ಅನ್ನು ಜಿಲ್ಲೆಯಾಗಿ ಘೋಷಣೆ ಮಾಡಬೇಕೆಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಸ್ಥಳೀಯ ಭಾಷೆಗಳಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ಒತ್ತು: ನರೇಂದ್ರಮೋದಿ

Share This Article
Leave a Comment

Leave a Reply

Your email address will not be published. Required fields are marked *