– ಮಸ್ಕಿ ಕ್ಷೇತ್ರದಿಂದ ನಾನು ಸ್ಪರ್ಧೆ ಮಾಡುವುದಾಗಿ ಎಲ್ಲಿಯೂ ಹೇಳಿಲ್ಲ
ರಾಯಚೂರು: ದುರ್ಬಲ ಆಡಳಿತಕ್ಕೆ ಜನ ಬೇಸತ್ತಿದ್ದಾರೆ, ರಾಜ್ಯದ ಎರಡು ಉಪಚುನಾವಣೆಗಳಲ್ಲಿ ಬಿಜೆಪಿ (BJP) ಗೆಲುವು ಖಚಿತ ಅಂತ ಮಾಜಿ ಸಚಿವ ಬಿ.ಶ್ರೀರಾಮುಲು (Sriramulu) ಹೇಳಿದ್ದಾರೆ.
ರಾಯಚೂರಿನ ಮಸ್ಕಿಯಲ್ಲಿ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಯೊಂದಕ್ಕೂ ಹೈಕಮಾಂಡ್ ಅಂತಾರೆ. ಕಾಂಗ್ರೆಸ್ ಪಕ್ಷದಲ್ಲಿನ ಆಡಳಿತ ವ್ಯವಸ್ಥೆ ಸರಿಯಿಲ್ಲ ಅನ್ನೋದನ್ನ ಇದು ತೋರಿಸುತ್ತೆ. ರಾಜ್ಯ ಸರ್ಕಾರದ ದುರ್ಬಲ ಆಡಳಿತಕ್ಕೆ ಜನ ಬೇಸತ್ತಿದ್ದಾರೆ. ಜನಸಾಮಾನ್ಯರ ಮೇಲೆ ತೆರಿಗೆ ಭಾರ ಹೆಚ್ಚಿಸಿರುವುದಕ್ಕೆ ಅಸಮಾಧಾನದಲ್ಲಿದ್ದಾರೆ. ಎರಡು ಉಪಚುನಾವಣೆಯಲ್ಲಿ ಬಿಜೆಪಿ ಪರ ಹೆಚ್ಚು ಮತದಾನವಾಗಲಿದೆ, ಬಹುಮತದಿಂದ ಬಿಜೆಪಿ ಗೆಲುವು ಸಾಧಿಸಲಿದೆ ಎಂದಿದ್ದಾರೆ. ಇದನ್ನೂ ಓದಿ: ನಾವು ಎಚ್ಚರಿಕೆ ನೀಡಿದ್ದಕ್ಕೆ ಟ್ರಂಪ್ ಕದನ ವಿರಾಮ ಘೋಷಣೆ – ಇರಾನ್ ತಿರುಗೇಟು
ಇನ್ನೂ ತುಂಗಭದ್ರಾ ಎಡದಂಡೆ ಕಾಲುವೆ ವಿಚಾರದಲ್ಲಿಯೂ ಸರ್ಕಾರ ಚೆಲ್ಲಾಟವಾಡುತ್ತಿದೆ. ಕಾಲುವೆಯನ್ನು ದುರಸ್ತಿ ಮಾಡಿ, ಕುಡಿಯುವ ನೀರನ್ನು ಸಮರ್ಪಕವಾಗಿ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.
2028ರ ಚುನಾವಣೆಯಲ್ಲಿ ಶ್ರೀರಾಮುಲು ಮಸ್ಕಿಯಿಂದ ಸ್ಪರ್ಧಿಸುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, 2028ರ ವಿಧಾನಸಭೆ ಚುನಾವಣೆ ದೃಷ್ಟಿಯಲ್ಲಿ ಪಕ್ಷ ಸಂಘಟನೆಗೆ ಪ್ರವಾಸ ಮಾಡುತ್ತಿದ್ದೇನೆ. ಕಲ್ಯಾಣ ಕರ್ನಾಟಕ ಭಾಗದ ಆರು ಜಿಲ್ಲೆಗಳಲ್ಲಿ ಪಕ್ಷ ಬಲಪಡಿಸುವ ಜವಾಬ್ದಾರಿ ವರಿಷ್ಠರು ನೀಡಿದ್ದಾರೆ. ಮಸ್ಕಿ ಕ್ಷೇತ್ರದಿಂದ ನಾನು ಸ್ಪರ್ಧೆ ಮಾಡುವುದಾಗಿ ಎಲ್ಲಿಯೂ ಹೇಳಿಲ್ಲ. ಟಿಕೆಟ್ ಹಂಚಿಕೆ ವಿಷಯ ಪಕ್ಷದ ವರಿಷ್ಠರಿಗೆ ಬಿಟ್ಟಿದ್ದು. ನನಗೆ ಸಂಘಟನೆ ಜವಾಬ್ದಾರಿ ನೀಡಲಾಗಿದೆ, ಹೀಗಾಗಿ ಮಸ್ಕಿಯಲ್ಲೂ ಪ್ರವಾಸ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.ಇದನ್ನೂ ಓದಿ: ಕಾಂಗ್ರೆಸ್‌ನಿಂದ ದ್ರೋಹ ಆಗಿರುವುದು ನಮಗೆ, ನಮ್ಮ ಪಕ್ಷಕ್ಕೆ – ಪ್ರೀತಿ, ಮದ್ವೆ ಎಂದು ಟೀಕಿಸಿದ್ದ ಖರ್ಗೆಗೆ ಹೆಚ್‌ಡಿಡಿ ತಿರುಗೇಟು

