ಬೆಂಗ್ಳೂರಲ್ಲಿ ಮಳೆಯಿಂದ ಜನರ ಪರದಾಟ… ರಾಜ್ಯ ಸರ್ಕಾರದ ಮೋಜು – ಬಿವೈವಿ ಸಿಡಿಮಿಡಿ

Public TV
3 Min Read
BJP visit bengaluru Rain 4

ಬೆಂಗಳೂರು: ರಾಜ್ಯ ಕಾಂಗ್ರೆಸ್ (Congress) ಸರ್ಕಾರ ಬೆಂಗಳೂರಿನಲ್ಲಿ (Bengaluru) ಮಳೆಗಾಲಕ್ಕೆ ಸಂಬಂಧಿಸಿದ ಪೂರ್ವಭಾವಿ ಕೆಲಸ ಮಾಡಿಸುವುದನ್ನು ಬಿಟ್ಟು, ಹೊಸಪೇಟೆಯಲ್ಲಿ ಮೋಜು ಮಾಡುತ್ತಿರುವುದು ಅಕ್ಷಮ್ಯ ಅಪರಾಧ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಅವರು ಟೀಕಿಸಿದ್ದಾರೆ.

BJP visit bengaluru Rain 1

ಸಿಲ್ಕ್ ಬೋರ್ಡ್‌ನ ಮಳೆ ಹಾನಿ ಪ್ರದೇಶಗಳಿಗೆ ಬಿಜೆಪಿ ನಿಯೋಗ ಮಂಗಳವಾರ ಭೇಟಿ ನೀಡಿ, ಮಳೆ ಹಾನಿಗೆ ಕಾರಣ, ಆಗಿರುವ ಹಾನಿ ಕುರಿತು ಪರಿಶೀಲನೆ ನಡೆಸಿತು.ಇದನ್ನೂ ಓದಿ: ದರ್ಶನ್ ಮೇಕಪ್ ಆರ್ಟಿಸ್ಟ್ ಹೊನ್ನೆಗೌಡ ನಿಧನ- ಭಾವುಕ ಪೋಸ್ಟ್ ಹಂಚಿಕೊಂಡ ದಚ್ಚು

ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಅಭಿವೃದ್ಧಿ ಕಾಮಗಾರಿಗಳ ಕಡೆ ಮುಖ್ಯಮಂತ್ರಿಗಳು ಗಮನ ಕೊಡಬೇಕು. ಕೆಲಸಗಳನ್ನು ತ್ವರಿತ ಗತಿಯಲ್ಲಿ ಮುಗಿಸಬೇಕು. ರಾಜ್ಯ ಸರ್ಕಾರ ಒಂದು ಅಯೋಗ್ಯ ಸರ್ಕಾರವಾಗಿದೆ. ಈ ಸರ್ಕಾರಕ್ಕೆ ಮಾನ ಮರ್ಯಾದೆ ಯಾವುದೂ ಇಲ್ಲ ಎಂದರು.

ಕೆಲವೇ ಕೆಲವು ಗಂಟೆ ಮಳೆ ಬಂದ ಸಂದರ್ಭದಲ್ಲಿ ಇಡೀ ಬೆಂಗಳೂರು ಮಹಾನಗರವು ಜಲಾವೃತವಾಗಿದೆ. ನಾಲ್ಕು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯನವರು ಗ್ರೇಟರ್ ಬೆಂಗಳೂರು ಬಗ್ಗೆ ಮಾತನಾಡುತ್ತಾರೆ. ಬೆಂಗಳೂರಿಗೆ ಕೇವಲ ಗ್ರೇಟರ್ ಹೆಸರು ಸೇರಿಸಿದರೆ ಸಾಕಾಗುವುದಿಲ್ಲ ಸ್ವಾಮೀ, ಬೆಂಗಳೂರಿನ ಅಭಿವೃದ್ಧಿಗೆ ಎಷ್ಟು ಸಾವಿರ ಕೋಟಿ ಅನುದಾನ ಕೊಡಲಾಗಿದೆ ಎಂದು ಪ್ರಶ್ನಿಸಿದರು.

BJP visit bengaluru Rain 3

ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಸಾವಿರಾರು ಕೋಟಿ ಅನುದಾನದಲ್ಲಿ ಅನೇಕ ಕಾಮಗಾರಿಗಳು ನಡೆಯುತ್ತಿತ್ತು. ಆ ಗುತ್ತಿಗೆದಾರರಿಗೆ ಹಣ ಪಾವತಿಸದ ಕಾರಣ ಇವತ್ತು ಕೆಲಸ ಕಾರ್ಯಗಳು, ಅಭಿವೃದ್ಧಿ ಕಾಮಗಾರಿಗಳು ಹಾಗೇ ನಿಂತಿವೆ ಎಂದು ಗಮನ ಸೆಳೆದರು. ಡಿ.ಕೆ.ಶಿವಕುಮಾರ್ ಅವರು ಟಾಲೆಸ್ಟ್ ಟವರ್, ಸುರಂಗ ರಸ್ತೆ ಕುರಿತು ಮಾತನಾಡುತ್ತಾರೆ. ಬೆಂಗಳೂರಿನ ಮಹಾಜನತೆ, ಜನಸಾಮಾನ್ಯರು ಇವುಗಳನ್ನು ಕೇಳುತ್ತಿಲ್ಲ. ಬಂದ ಮಳೆಯ ನೀರು ಸರಿಯಾಗಿ ಹೋಗುವ ವ್ಯವಸ್ಥೆ ಆಗಬೇಕು. ರಾಜಕಾಲುವೆಯನ್ನು ಸರಿಪಡಿಸಬೇಕು. ಕೆರೆಗಳ ಒತ್ತುವರಿ ಸರಿಪಡಿಸಲು ಬಯಸುತ್ತಾರೆ ಎಂದು ತಿಳಿಸಿದರು.

ಹೂಳು ತೆಗೆಯುವಂತೆ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ನಿನ್ನೆ ಅಧಿಕಾರಿಗಳಿಗೆ ಹೇಳುತ್ತಿದ್ದರು. ಯಾಕೆ ಮಳೆ ಬರುತ್ತದೆ ಎಂದು ಗೊತ್ತಿಲ್ಲವೇ? ಮಳೆ ಯಾವ ತಿಂಗಳಲ್ಲಿ ಬರುತ್ತದೆಂದು ಇವರಿಗೆ ತಿಳಿದಿಲ್ಲವೇ? ಅಧಿಕಾರಿಗಳಿಗೆ ತಿಳಿಸಿ, ಮುಂಗಾರು ಮಳೆಗೆ ಮೊದಲು ಕೆಲಸ ಯಾಕೆ ಮಾಡಿಸಿಲ್ಲ ಎಂದು ಕಿಡಿಕಾರಿದರು.

BJP visit bengaluru Rain 2

ಈ ವೇಳೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್.ರವಿಕುಮಾರ್, ಶಾಸಕ ಸತೀಶ್ ರೆಡ್ಡಿ, ಪಕ್ಷದ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ. ರಾಮಮೂರ್ತಿ ಮತ್ತು ಪಕ್ಷದ ಮುಖಂಡರು ಇದ್ದರು.ಇದನ್ನೂ ಓದಿ: ನ್ಯಾ. ವರ್ಮಾ ಪ್ರಕರಣದ ತನಿಖೆ ನಡೆಸಿದ ಆಂತರಿಕ ಸಮಿತಿಗೆ ಕಾನೂನು ಮಾನ್ಯತೆ ಇಲ್ಲ: ಜಗದೀಪ್ ಧನಕರ್

Share This Article