ನವದೆಹಲಿ: ದೆಹಲಿಯಲ್ಲಿ ಬಿಜೆಪಿ (BJP) ಸರ್ಕಾರ ಆಡಳಿತಕ್ಕೆ ಬಂದಿದೆ. ಈ ಮೂಲಕ ಜನರ ಆಶೀರ್ವಾದ ನಮ್ಮೊಂದಿಗಿದೆ ಎಂಬುವುದು ಗೊತ್ತಾಗುತ್ತದೆ. ಆದರೆ ಕೆಲವು ಜನರಿಗೆ ಈ ಆಶೀರ್ವಾದವನ್ನು ಸಹಿಸೋಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಆರೋಪ ಮಾಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ (PM Modi) ಕಿಡಿಕಾರಿದರು.
ಭಾನುವಾರ (ಆ.17) ಹರಿಯಾಣದಲ್ಲಿ (Hariyana) ಸುಮಾರು 11,000 ಕೋಟಿ ರೂ. ಮೌಲ್ಯದ ಎರಡು ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳಾದ ದ್ವಾರಕಾ ಎಕ್ಸ್‌ಪ್ರೆಸ್‌ವೇ ಮತ್ತು ದೆಹಲಿ ವಿಭಾಗದ ನಗರ ವಿಸ್ತರಣಾ ರಸ್ತೆ-2 ಯೋಜನೆಗಳನ್ನು ಉದ್ಘಾಟಿಸಿದರು.ಇದನ್ನೂ ಓದಿ: ಮುಸುಕುದಾರಿಯ ಮಂಪರು ಪರೀಕ್ಷೆ ಮಾಡಿ : ಕೈ ಶಾಸಕ ಸವದಿ ಒತ್ತಾಯ
ಈ ವೇಳೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೆಹಲಿ, ಹರಿಯಾಣ, ಉತ್ತರ ಪ್ರದೇಶ ಮತ್ತು ರಾಜಸ್ಥಾನದಾದ್ಯಂತ ಬಿಜೆಪಿ ಸರ್ಕಾರ ಅಡಳಿತದಲ್ಲಿದೆ. ಈ ಮೂಲಕ ಈ ಪ್ರದೇಶದ ಜನರು ಬಿಜೆಪಿ ಹಾಗೂ ನಮ್ಮೆಲ್ಲರನ್ನು ಎಷ್ಟು ಆಶೀರ್ವದಿಸಿದೆ ಎಂಬುದನ್ನು ತೋರಿಸುತ್ತದೆ. ಅದಕ್ಕಾಗಿಯೇ ಬಿಜೆಪಿ ಜನರಿಗೆ ಅಗತ್ಯವಿರುವ ಅಭಿವೃದ್ದಿ ಕೆಲಸಗಳನ್ನು ಮಾಡುತ್ತಲೇ ಬಂದಿದೆ, ಈಗಲೂ ಮಾಡುತ್ತಿದೆ. ನಾವು ನಮ್ಮ ಜವಾಬ್ದಾರಿಯನ್ನು ಅರ್ಥಮಾಡಿಕೊಳ್ಳುವ ಮೂಲಕ ದೆಹಲಿ-ಎನ್‌ಸಿಆರ್ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿದ್ದೇವೆ. ಆದರೆ ಇದೆಲ್ಲದರ ನಡುವೆ ಸಾರ್ವಜನಿಕರ ಈ ಆಶೀರ್ವಾದವನ್ನು ಇನ್ನೂ ಜೀರ್ಣಿಸಿಕೊಳ್ಳಲು ಸಾಧ್ಯವಾಗದ ಕೆಲವು ರಾಜಕೀಯ ಪಕ್ಷಗಳಿವೆ. ಅವರು ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದ್ದಾರೆ ಎಂದು ಕುಟುಕಿದರು.
ಇನ್ನೂ ಈ ಎರಡು ರಾಷ್ಟ್ರೀಯ ಹೆದ್ದಾರಿ ಯೋಜನೆಗಳು ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿನ ಜನರ ಪ್ರಯಾಣಕ್ಕೆ ಸಹಾಯಕವಾಗುತ್ತದೆ. ಬಹಳ ದಿನಗಳ ನಂತರ ದೆಹಲಿಯಲ್ಲಿ ಬಿಜೆಪಿ ಸರ್ಕಾರಕ್ಕೆ ಆಡಳಿತಕ್ಕೆ ಬಂದಿದೆ. ಆದರೆ ಈ ಹಿಂದಿನ ಸರ್ಕಾರಗಳು ದೆಹಲಿಯನ್ನು ಕಂದಕಕ್ಕೆ ತಳ್ಳಿದ್ದವು. ಬಿಜೆಪಿ ಸರ್ಕಾರ ದೆಹಲಿಯನ್ನು ಪ್ರಗತಿಪಥದತ್ತ ಕೊಂಡೊಯ್ಯಲಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮತ್ತು ಹರಿಯಾಣ ಮುಖ್ಯಮಂತ್ರಿ ನಯಬ್ ಸಿಂಗ್ ಸೈನಿ ಕೂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಇದನ್ನೂ ಓದಿ: Bengaluru | ಪ್ರೇಯಸಿಯ ಹೊಸ ಲವ್ವರ್‌ಗೆ ಚಾಕು ಇರಿದ ಮಾಜಿ ಬಾಯ್‌ಫ್ರೆಂಡ್