ರಾಂಚಿ: ರಸ್ತೆಗಳು ಹದಗೆಟ್ಟ ಪರಿಣಾಮ ಗ್ರಾಮಸ್ಥರು ತುಂಬು ಗರ್ಭಿಣಿಯನ್ನು ಮಂಚದ ಮೇಲೆ ಮಲಗಿಸಿ ಅದನ್ನು ತಮ್ಮ ಹೆಗಲಲ್ಲಿ ಹೊತ್ತು ಆಸ್ಪತ್ರೆಗೆ ನಡೆದ ವಿಲಕ್ಷಣ ಘಟನೆಯೊಂದು ಜಾರ್ಖಂಡ್ ನಲ್ಲಿ ನಡೆದಿದೆ.
Advertisement
ಗುಡಿಯಾ ದೇವಿ ತುಂಬು ಗರ್ಭಿಣಿ. ಈಕೆಗೆ ಸೋಮವಾರ ಹೆರಿಗೆ ನೋವು ಕಾಣಿಸಿಕೊಂಡಿದೆ. ಆದರೆ ಈಕೆಯಿದ್ದ ಪ್ರದೇಶದಲ್ಲಿ ರಸ್ತೆ ವ್ಯವಸ್ಥೆ ಸರಿಯಾಗಿಲ್ಲ. ಅಲ್ಲದೆ ಹತ್ತಿರ ಯಾವುದೇ ಆಸ್ಪತ್ರೆಯೂ ಇರಲಿಲ್ಲ. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆಕೆಯನ್ನು ಮಂಚದ ಮೇಲೆ ಮಲಗಿಸಿದ್ದಾರೆ. ನಂತರ ಮಂಚವನ್ನು ಹೊತ್ತು ಗ್ರಾಮಸ್ಥರು ಕೆಲ ದೂರ ಸಾಗಿದ್ದಾರೆ. ಸೂಕ್ತವಾದ ರಸ್ತೆ ಸಿಕ್ಕಿದ ಬಳಿಕ ಗುಡಿಯಾ ದೇವಿಯವರನ್ನು ಕಾರಿನ ಮೂಲಕ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.
Advertisement
Advertisement
ಈ ಸಂಬಂಧ ಸಮಾಜ ಸೇವಕ ಭವೇಶ್ ಕುಮಾರ್ ಹೆಂಬ್ರಾಂ ಮಾತನಾಡಿ, ಗ್ರಾಮಕ್ಕೆ ರಸ್ತೆ ನಿರ್ಮಾಣಕ್ಕೆ ಜಿಲ್ಲಾಡಳಿತದಿಂದ ಸರ್ಕಾರಕ್ಕೆ ಹಲವು ಬಾರಿ ಅರ್ಜಿ ಸಲ್ಲಿಸಲಾಗಿತ್ತು. ಆದರೆ ಅದರಿಂದ ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ. ಜಾರ್ಖಂಡ್‍ನ 6 ಗ್ರಾಮಗಳಿಗೆ ಮೂಲ ಸೌಕರ್ಯಗಳ ಕೊರತೆಯಿದೆ ಎಂದರು.
Advertisement
ಗ್ರಾಮದಲ್ಲಿ ಸರಿಯಾದ ರಸ್ತೆ ವ್ಯವಸ್ಥೆ ಹಾಗೂ ಆಸ್ಪತ್ರೆ ಕೂಡ ಇಲ್ಲ. ಹೀಗಾಗಿ ಈ ಗ್ರಾಮಗಳಲ್ಲಿ ಜನ ವೈದ್ಯಕೀಯ ಚಿಕಿತ್ಸೆ ಪಡೆಯಲು ಜನ ಹರಸಾಹಸಪಡಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ಅವರು ಅಳಲು ತೋಡಿಕೊಂಡರು.