ಬಳ್ಳಾರಿ: ಇತಿಹಾಸ ಪ್ರಸಿದ್ಧ ಕೊಟ್ಟೂರು ಬಸವೇಶ್ವರ ಜಾತ್ರೆ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ಜರುಗಿದೆ. ಒಂದೆಡೆ ಮೂಲಾ ನಕ್ಷತದಲ್ಲಿ ಈ ರಥೋತ್ಸವ ಜರಗುವುದು ಜಾತ್ರೆಯ ವಿಶೇಷವಾದರೆ, ಜಾತ್ರೆಗೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಪಾದಯಾತ್ರೆ ಮೂಲಕ ಆಗಮಿಸಿ ರಥೋತ್ಸವದಲ್ಲಿ ಭಾಗಿಯಾಗುವುದು ಮತ್ತೊಂದು ವಿಶೇಷವಾಗಿತ್ತು.
ಬಳ್ಳಾರಿ ಜಿಲ್ಲೆಯ ಕೂಡ್ಲಗಿ ತಾಲೂಕಿನ ಇತಿಹಾಸ ಪ್ರಸಿದ್ಧ ಕೊಟ್ಟೂರು ಬಸವೇಶ್ವರ ಜಾತ್ರೆ ಈ ಬಾರಿ ಅದ್ಧೂರಿಯಾಗಿ ಜರುಗಿತು. ಪ್ರತಿ ವರ್ಷದಂತೆ ಈ ವರ್ಷವೂ ಸಹ ಜಾತ್ರೆಯಲ್ಲಿ ಸುಮಾರು 3 ಲಕ್ಷಕ್ಕೂ ಅಧಿಕ ಭಕ್ತರು ಭಾಗವಹಿಸಿದ್ದು ವಿಶೇಷವಾಗಿತ್ತು ಎಂದು ಭಕ್ತರು ಹೇಳಿದ್ದಾರೆ.
Advertisement
Advertisement
ಮುಜರಾಯಿ ಸಚಿವ ಪರಮೇಶ್ವರ ನಾಯ್ಕ್, ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ ಸಹ ಪಾದಯಾತ್ರೆ ಮೂಲಕ ಆಗಮಿಸಿ ರಥೋತ್ಸವದಲ್ಲಿ ಭಾಗಿಯಾದ್ದರೂ. ಅಲ್ಲದೆ ಹೊಸ ದಂಪತಿ ರಥೋತ್ಸವದಲ್ಲಿ ಕಳಸ ನೋಡಿದರೆ ವೈವಾಹಿಕ ಜೀವನ ಸುಖಕರವಾಗಿರುತ್ತೆ ಅನ್ನೋ ನಂಬಿಕೆ ಲಕ್ಷಾಂತರ ಭಕ್ತರಲ್ಲಿದೆ.
Advertisement
Advertisement
ಕೊಟ್ಟೂರು ಬಸವೇಶ್ವರ ಸ್ವಾಮಿಗೆ ರಾಜ್ಯ ಸೇರಿದಂತೆ ಹೊರ ರಾಜ್ಯದಲ್ಲೂ ಲಕ್ಷಾಂತರ ಭಕ್ತರಿದ್ದಾರೆ. ಈ ಭಕ್ತರು ಪ್ರತಿ ವರ್ಷ ಜಾತ್ರೆ ಸಂದರ್ಭದಲ್ಲಿ ಪಾದಯಾತ್ರೆ ಮೂಲಕ ಕೊಟ್ಟೂರಿಗೆ ಆಗಮಿಸಿ ಜಾತ್ರೆಯಲ್ಲಿ ಪಾಲ್ಗೊಳ್ಳುವುದು ವಿಶೇಷವಾಗಿದೆ. ಈ ಬಾರಿ ಸುಮಾರು 40 ಸಾವಿರಕ್ಕೂ ಅಧಿಕ ಭಕ್ತರು ಪಾದಯಾತ್ರೆ ಮೂಲಕ ಆಗಮಿಸಿ ರಥೋತ್ಸವದಲ್ಲಿ ಭಾಗಿಯಾಗುವ ಮೂಲಕ ಕೊಟ್ಟೂರೇಶ್ವರನ ದರ್ಶನ ಪಡೆದರು. ಈ ಜಾತ್ರೆಯ ವೇಳೆ ಪಾದಯಾತ್ರೆಯ ಮೂಲಕ ಆಗಮಿಸಿ ಪೂಜೆ ಸಲ್ಲಿಸಿದರೆ ಇಷ್ಟಾರ್ಥ ಸಿದ್ಧಿಯಾಗುತ್ತೆ ಅನ್ನೋ ನಂಬಿಕೆ ಕೂಡ ಲಕ್ಷಾಂತರ ಭಕ್ತರಲ್ಲಿದೆ ಎಂದು ಎಸ್. ಭೀಮಾನಾಯ್ಕ್ ತಿಳಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv