Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಂವಿಧಾನ ಬದಲಾಯಿಸುತ್ತೇವೆ ಎಂದ ಬಿಜೆಪಿಯನ್ನೇ ಜನ ಬದಲಾಯಿಸಿದರು : ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಂವಿಧಾನ ಬದಲಾಯಿಸುತ್ತೇವೆ ಎಂದ ಬಿಜೆಪಿಯನ್ನೇ ಜನ ಬದಲಾಯಿಸಿದರು : ಡಿಕೆಶಿ

Bengaluru City

ಸಂವಿಧಾನ ಬದಲಾಯಿಸುತ್ತೇವೆ ಎಂದ ಬಿಜೆಪಿಯನ್ನೇ ಜನ ಬದಲಾಯಿಸಿದರು : ಡಿಕೆಶಿ

Public TV
Last updated: November 26, 2024 4:22 pm
Public TV
Share
3 Min Read
DK Shivakumar 1 3
SHARE

ಬೆಂಗಳೂರು: ಸಂವಿಧಾನವನ್ನು ಕಿತ್ತು ಹಾಕುತ್ತೇವೆ, ಹರಿದು ಹಾಕುತ್ತೇವೆ ಎಂದು ಹೇಳಿದವರೆಲ್ಲ ಮನೆಗೆ ಹೋಗಿದ್ದಾರೆ. ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದ ಬಿಜೆಪಿಯವರನ್ನೇ ಜನರು ಬದಲಾಯಿಸಿದರು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DCM DK Shivakumar) ಹೇಳಿದರು.

DK Shivakumar 3 1

ನಗರದ ವಸಂತ ನಗರದಲ್ಲಿರುವ ಅಂಬೇಡ್ಕರ್ ಭವನದಲ್ಲಿ ಮಂಗಳವಾರ (ನ.26) ನಡೆದ ಸಂವಿಧಾನ ದಿನಾಚರಣೆಯಲ್ಲಿ (Constitution Day) ಮಾತನಾಡಿದ ಅವರು, ಸಂವಿಧಾನದ ಬದಲಾವಣೆ ಬಗ್ಗೆ ಮಾತನಾಡಿದ ಬಿಜೆಪಿಯವರಿಗೆ ತಿರುಗೇಟು ನೀಡಲು ರಾಹುಲ್ ಗಾಂಧಿ ಅವರು ತಮ್ಮ ಎಲ್ಲಾ ಭಾಷಣದ ವೇಳೆಯೂ ಸಂವಿಧಾನದ ಪ್ರತಿ ಹಿಡಿದು ಮಾತು ಪ್ರಾರಂಭಿಸುತ್ತಿದ್ದರು. ಇದರಿಂದ ಪ್ರಧಾನ ಮಂತ್ರಿಗಳು ಸಂವಿಧಾನ ಪ್ರತಿಗೆ ನಮಸ್ಕರಿಸಿ ಪ್ರಮಾಣ ವಚನ ತೆಗೆದುಕೊಳ್ಳುವಂತಹ ಸಂದರ್ಭ ಸೃಷ್ಟಿಯಾಯಿತು. ನಮ್ಮ ಇಂಡಿಯಾ ಒಕ್ಕೂಟದ ಸಂಸದರು ಸಂವಿಧಾನದ ಪ್ರತಿ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ್ದು ಇತಿಹಾಸ ಎಂದರು.ಇದನ್ನೂ ಓದಿ: ನಮ್ಮ ದೇಶದಲ್ಲಿ ಸಂವಿಧಾನ ವಿರೋಧಿಗಳೂ ಇದ್ದಾರೆ, ನಾವು ಎಚ್ಚರಿಕೆಯಿಂದ ಇರಬೇಕು: ಸಿಎಂ

ಹೋರಾಟ ಮಾಡದೇ ಇದ್ದರೂ ಪರವಾಗಿಲ್ಲ, ಮಾರಾಟ ಮಾತ್ರ ಆಗಬೇಡ ಎನ್ನುವ ಕಿವಿಮಾತನ್ನು ರಾಜಕಾರಣಿಗಳಿಗೆ ಅಂಬೇಡ್ಕರ್ ಅವರು ಹೇಳಿದ್ದಾರೆ. ನಾವುಗಳು ಇತಿಹಾಸದಿಂದ ಪಾಠ ಕಲಿಯದೇ ಯಾವುದೇ ಬದಲಾವಣೆ ಮಾಡಲು ಸಾಧ್ಯವಿಲ್ಲ. ಆದ ಕಾರಣ ಪ್ರತಿಯೊಬ್ಬರು ಇತಿಹಾಸದಿಂದ ಪಾಠ ಕಲಿಯಬೇಕು ಎನ್ನುವ ಸಂದೇಶವನ್ನು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನಮಗೆ ನೀಡಿದ್ದಾರೆ ಎಂದು ಹೇಳಿದರು.

DK Shivakumar 2 1

ಅನೇಕ ರಾಜ್ಯಗಳಲ್ಲಿ ಜನರಿಂದ ಆಯ್ಕೆಯಾದ ಶಾಸಕರು ಮಾರಾಟವಾಗಿರುವ ನಿದರ್ಶನಗಳನ್ನು ನೋಡಿದ್ದೇವೆ. ಇದು ನಮ್ಮೆಲ್ಲರ ಬದುಕಿಗೂ ಸಂಬಂಧ ಪಡುತ್ತದೆ ಎನ್ನುವ ಕಿವಿಮಾತನ್ನು ನಮಗೆ ಅಂಬೇಡ್ಕರ್ ಅವರು ಬಿಟ್ಟು ಹೋಗಿದ್ದಾರೆ. ಇತಿಹಾಸ ಮರೆತವನು ಇತಿಹಾಸ ಸೃಷ್ಟಿಸಲು ಸಾಧ್ಯವಿಲ್ಲ. ಧರ್ಮ ಗ್ರಂಥಗಳನ್ನು ಆಯಾ ಧರ್ಮದವರು ಪವಿತ್ರ ಎಂದು ಹೇಳುತ್ತಾರೆ. ಇಡೀ ಭಾರತಕ್ಕೆ ಸಂವಿಧಾನವೇ ಪವಿತ್ರ ಗ್ರಂಥ. ಇದು ನಮ್ಮೆಲ್ಲರನ್ನು ರಕ್ಷಣೆ ಮಾಡುತ್ತಿದೆ ಎಂದು ಹೇಳಿದರು.

ಬೆಂಗಳೂರಿನ ವಸಂತನಗರದಲ್ಲಿರುವ ಅಂಬೇಡ್ಕರ್ ಭವನದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಇಂದು ಹಮ್ಮಿಕೊಂಡಿದ್ದ ಸಂವಿಧಾನ ದಿನಾಚರಣೆ ಹಾಗೂ ನವೀಕೃತ ಸಮ್ಮೇಳನ ಸಭಾಂಗಣ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಪಾಲ್ಗೊಂಡು ಮಾತನಾಡಿದೆ.

ಸ್ವತಂತ್ರ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಮ್ಮ ಸಂವಿಧಾನ ದೇಶದ ಜನರನ್ನು… pic.twitter.com/ENkRc5DkkN

— DK Shivakumar (@DKShivakumar) November 26, 2024

ನಮ್ಮ ರಾಜಕೀಯ ಆಯಸ್ಸು ಇನ್ನು 10-15 ವರ್ಷ, ವಿದ್ಯಾರ್ಥಿಗಳು ಮುಂದಿನ 60- 70 ವರ್ಷಗಳ ಕಾಲ ಈ ದೇಶವನ್ನು ಮುನ್ನಡೆಸುವವರು. ಅವರಿಗೆ ಸಂವಿಧಾನದ ಬಗ್ಗೆ ಅಡಿಪಾಯ ಹಾಕಬೇಕು ಎನ್ನುವ ಕಾರಣಕ್ಕೆ ಜಾಗೃತಿ ಮೂಡಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಅಮೆರಿಕಾದ ಮಾಜಿ ಅಧ್ಯಕ್ಷರಾದ ಬರಾಕ್ ಬಬಾಮ ಅವರು ಭಾರತದ ಸಂವಿಧಾನ ಇಡೀ ವಿಶ್ವಕ್ಕೆ ಮಾದರಿಯಾಗಿದೆ ಎಂದು ಹೇಳಿದ್ದಾರೆ ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷ ಈ ದೇಶದ ಚುಕ್ಕಾಣಿ ಹಿಡಿದ ಸಂದರ್ಭದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ಕರಡು ಸಮಿತಿಯ ಅಧ್ಯಕ್ಷರಾದರು. ಅಂಬೇಡ್ಕರ್ ಅವರು ಇಡೀ ಪ್ರಪಂಚವೇ ಸ್ಮರಿಸಿಕೊಳ್ಳುವಂತಹ ಮಹಾನ್ ಗ್ರಂಥ ನಮಗೆ ನೀಡಿದ್ದಾರೆ ಎಂದು ಹೇಳಿದರು.

DK Shivakumar 6

ಮಹದೇವಪ್ಪಗೆ ಮೆಚ್ಚುಗೆ
ಸಚಿವರಾದ ಹೆಚ್.ಸಿ.ಮಹದೇವಪ್ಪ ಅವರು ಸಮಾಜ ಕಲ್ಯಾಣ ಇಲಾಖೆಗೆ ಹೊಸ ರೂಪವನ್ನು ನೀಡಿದ್ದಾರೆ. ರಾಜಕೀಯದಿಂದ ನಿವೃತ್ತಿ ಪಡೆದ ಮೇಲೆ ಮಹದೇವಪ್ಪ ಅವರನ್ನು ನಮ್ಮ ವಿಶ್ವವಿದ್ಯಾನಿಲಯಗಳಿಗೆ ಸಂದರ್ಶಕ ಉಪನ್ಯಾಸಕರನ್ನಾಗಿ ಕಳುಹಿಸಬೇಕು ಎನ್ನುವ ಅಭಿಲಾಷೆ ಅವರ ಮಾತುಗಳನ್ನು ಕೇಳಿದಾಗ ಅನ್ನಿಸಿತು. ಗುಣಕ್ಕೆ ಮತ್ಸರವಿಲ್ಲ ಎನ್ನುವ ರೀತಿ ನಮ್ಮ ಸಂವಿಧಾನವೇ ನಮ್ಮ ಧರ್ಮ. ಈ ಚಿಕ್ಕ ಮಕ್ಕಳಿಗೂ ಅರ್ಥವಾಗುವ ರೀತಿ ಅವರು ಸಂವಿಧಾನದ ಬಗ್ಗೆ ತಿಳಿಸಿಕೊಟ್ಟಿದ್ದಾರೆ. ಸಂವಿಧಾನ ಪೀಠಿಕೆಯನ್ನು ಶಾಲಾ, ಕಾಲೇಜುಗಳಲ್ಲಿ ಪಠಿಸಬೇಕು ಎನ್ನುವ ಹೊಸ ಆಚರಣೆಗೆ ನಾಂದಿ ಹಾಡಿದವರು. ಇದಕ್ಕಾಗಿ ಅವರಿಗೆ ಅಭಿನಂದನೆ ತಿಳಿಸುತ್ತೇನೆ ಎಂದರು.ಇದನ್ನೂ ಓದಿ: ಕಲಬೆರಕೆ ಸೇಂದಿ ಮಾರಾಟ ಮಾಡುತ್ತಿದ್ದ ದಂಪತಿ ಬಂಧನ – 400 ಲೀಟರ್ ಸೇಂದಿ ಜಪ್ತಿ

TAGGED:bengaluruConstitution DayDCM DK Shivakumarಡಿಸಿಎಂ ಡಿ.ಕೆ.ಶಿವಕುಮಾರ್ಬೆಂಗಳೂರುಸಂವಿಧಾನ ದಿನ
Share This Article
Facebook Whatsapp Whatsapp Telegram

Cinema news

Rakshit Shetty 2
ಕಾಪಿರೈಟ್ ಉಲ್ಲಂಘನೆ – ನಟ ರಕ್ಷಿತ್ ಶೆಟ್ಟಿಗೆ 25 ಲಕ್ಷ ದಂಡ ವಿಧಿಸಿದ ಕೋರ್ಟ್‌
Cinema Court Latest Main Post Sandalwood
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Donald Trump
Latest

ಮುಂದಿನ 2-3 ವಾರಗಳಲ್ಲಿ ಇರಾನ್‌ ವಿರುದ್ಧದ ಯುದ್ಧ ಅಂತ್ಯ: ಡೊನಾಲ್ಡ್‌ ಟ್ರಂಪ್

Public TV
By Public TV
7 minutes ago
Bengaluru Cauvery Water Bandh
Bengaluru City

ಇಂದಿನಿಂದ ಬೆಂಗಳೂರಿನಲ್ಲಿ ನೀರಿನ ಶುಲ್ಕ 3% ಹೆಚ್ಚಳ

Public TV
By Public TV
32 minutes ago
Bengaluru Karaga Mahotsav
Bengaluru City

ವಿಶ್ವವಿಖ್ಯಾತ ಬೆಂಗಳೂರು ಕರಗಕ್ಕೆ ಕೌಂಟ್‌ಡೌನ್ – ಉತ್ಸವ ಕಣ್ತುಂಬಿಕೊಳ್ಳಲು ಭಕ್ತ ಸಾಗರ ಕಾತುರ

Public TV
By Public TV
40 minutes ago
LPG
Latest

ಹಣಕಾಸು ವರ್ಷದ ಮೊದಲ ದಿನವೇ ಶಾಕ್‌ – ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ದರ 195.50 ರೂ. ಏರಿಕೆ

Public TV
By Public TV
59 minutes ago
Train Ticket Cancel Refund Policy
Latest

ರೈಲು ಹೊರಡುವ 8 ಗಂಟೆಯೊಳಗೆ ಟಿಕೆಟ್‌ ರದ್ದು ಮಾಡಿದ್ರೆ ಸಿಗಲ್ಲ ಹಣ – ಇಂದಿನಿಂದ ಹೊಸ ನಿಯಮ ಜಾರಿ? ಏನೇನು ಬದಲಾವಣೆ?

Public TV
By Public TV
1 hour ago
daily horoscope dina bhavishya
Astrology

ದಿನ ಭವಿಷ್ಯ: 01-04-2026

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?