ನೆಲಮಂಗಲ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ. ಕೆ.ಸುಧಾಕರ್ (Sudhakar) ಅಭಿನಂದನಾ ಸಮಾವೇಶದಲ್ಲಿ ಜನರು ಎಣ್ಣೆ, ಬಾಡೂಟಕ್ಕೆ ಮುಗಿಬಿದ್ದ ದೃಶ್ಯ ಕಂಡುಬಂತು.
ನೆಲಮಂಗಲದ (Nelamangala) ಹೊರವಲಯದಲ್ಲಿ ಅಭಿನಂದನಾ ಸಮಾರಂಭ ಆಯೋಜಿಸಲಾಗಿತ್ತು. ಸಮಾರಂಭಕ್ಕೆ ಆಗಮಿಸಿದ್ದ ಜನರಿಗಾಗಿ ಭರ್ಜರಿ ಬಾಡೂಟ ವ್ಯವಸ್ಥೆ ಮಾಡಲಾಗಿತ್ತು. ಇದನ್ನೂ ಓದಿ: ಕಾರ್ಯಕರ್ತರ ಜೊತೆ ಸಭೆ ನಡೆಸಿ ಅಭ್ಯರ್ಥಿ ಆಯ್ಕೆ ಬಗ್ಗೆ ರಹಸ್ಯ ಕಾಯ್ದುಕೊಂಡ ಹೆಚ್‌ಡಿಕೆ
ಬಗೆಬಗೆಯ ಬಾಡೂಟ ಖಾದ್ಯಕ್ಕಾಗಿ ಜನರ ನೂಕುನುಗ್ಗಲು ಏರ್ಪಟ್ಟಿತ್ತು. ಸಮಾರಂಭಕ್ಕೆ ಬಂದಿದ್ದ ಕಾರ್ಯಕರ್ತರಿಗೆ ಬಾಡೂಟದ ಜೊತೆಗೆ ಎಣ್ಣೆ ಸಹ ನೀಡಲಾಗಿತ್ತು. ಎಣ್ಣೆ ಪಡೆದುಕೊಳ್ಳಲು ಜನರ ನೂಕುನುಗ್ಗಲು ಏರ್ಪಟ್ಟಿತ್ತು.
ಸಮಾವೇಶಕ್ಕೆ ಬಂದವರಿಗೆ ಬಿಯರ್ ಹಾಗೂ ಹಾಟ್ ಡ್ರಿಂಕ್ಸ್ ವ್ಯವಸ್ಥೆ ಮಾಡಲಾಗಿತ್ತು. ಜನ ಮುಗಿಬಿದ್ದು ಎಣ್ಣೆ ಪಡೆದುಕೊಂಡರು. ಇದನ್ನೂ ಓದಿ: ನಾನು ಉಸ್ತುವಾರಿ ಸಚಿವನಿದ್ದಾಗಲೇ ಮುಡಾದಲ್ಲಿ ಅವ್ಯವಹಾರ ನಡೆದಿತ್ತು – ಎಸ್‌ಟಿಎಸ್ ಬಾಂಬ್