ತುಮಕೂರು: ಲೋಕಸಭೆ ಚುನಾವಣೆಗೆ ಜೆಡಿಎಸ್–ಬಿಜೆಪಿ (BJP-JDS Alliance) ಮೈತ್ರಿ ಮಾಡಿಕೊಂಡಿದ್ದು, ಇದರಿಂದ ಕಾಂಗ್ರೆಸ್‌ಗೆ ಲಾಭವೂ ಇಲ್ಲ, ನಷ್ಟವೂ ಇಲ್ಲ. ಮೈತ್ರಿಯನ್ನು ಜನ ಒಪ್ಪುವುದಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ (G.Parameshwara) ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿದ್ದೆವು. ಇದರಿಂದ ಫಲಿತಾಂಶ ಏನಾಯಿತು ಎಂಬುದು ಎಲ್ಲರಿಗೂ ಗೊತ್ತಿದೆ. ನಂತರ ಬಿಜೆಪಿಯವರಿಗೂ ಗೊತ್ತಾಗಲಿದೆ ಎಂದು ವಿಶ್ಲೇಷಿಸಿದರು. ಇದನ್ನೂ ಓದಿ: ಮಹಿಳೆಯರಿಗೆ ವಂಚನೆ ಮಾಡಿ ಅಂತಲೇ ದೇವರು ಮೋದಿಯನ್ನ ಕಳುಹಿಸಿದ್ದಾ; ಸಿಎಂ ಪ್ರಶ್ನೆ
ಕಳೆದ ಚುನಾವಣೆಯಲ್ಲಿ ದೇವೇಗೌಡ ಅವರು ಕಷ್ಟ ಬಿದ್ದು ಕೆಲಸ ಮಾಡಿದರೂ ಗೆಲ್ಲಲು ಸಾಧ್ಯವಾಗಲಿಲ್ಲ. ಈಗ ಜನರು ಏನು ಮಾಡುತ್ತಾರೆ ನೋಡಬೇಕು ಎಂದರು.
ಜೆಡಿಎಸ್ ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ ಡಿ.ಸಿ.ಗೌರಿಶಂಕರ್ ನನ್ನನ್ನು ಭೇಟಿ ಮಾಡಿದ್ದರು. ಆದರೆ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಬೆಂಗಳೂರು-ಹೈದರಾಬಾದ್ ಸೇರಿ 9 ವಂದೇ ಭಾರತ್ ರೈಲುಗಳಿಗೆ ಮೋದಿ ಚಾಲನೆ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]