ಮಡಿಕೇರಿ: ರಾಜ್ಯಕ್ಕೆ ನೀರುಣಿಸುವ ಕಾವೇರಿಯ ಹುಟ್ಟೂರಿನಲ್ಲಿ ಇದೀಗ ನೀರಿನ ಸಮಸ್ಯೆ ಜಾಸ್ತಿಯಾಗಿದೆ. ಕೊಡಗಿನಲ್ಲಿ (Kodagu) ಹುಟ್ಟುವ ಜೀವನದಿ ಕಾವೇರಿ ರೈತರ ಜೀವನಾಡಿ. ಕೊಡಗಿನಲ್ಲಿ ಹುಟ್ಟಿ ನಾಡಿನ ಜನರ ದಣಿವಾರಿಸುವ ಕಾವೇರಿಯ ತವರಿನ ಜನರಿಗೆ ನೀರಿನ ಬವಣೆ ಈಗಾಗಲೇ ಆರಂಭವಾಗಿದೆ. ಈ ನಡುವೆ ಸ್ಥಳೀಯ ಆಡಳಿತ ಅಧಿಕಾರಿಗಳು ಮತ್ತು ಜನ ಪ್ರತಿನಿಧಿಗಳ ಸಾಮರಸ್ಯದ ಕೊರತೆಯಿಂದ ಮಡಿಕೇರಿಯ ಜನರು ಕಳೆದ ಐದು ದಿನಗಳಿಂದ ಕುಡಿಯುವ ನೀರು ಬಾರದೇ ಸಮಸ್ಯೆಗೆ ಸಿಲುಕಿದ್ದಾರೆ.
ಮಂಜಿನ ನಗರಿ ಮಡಿಕೇರಿ (Madikeri) ನಗರದಲ್ಲಿ ಕಳೆದ 5 ದಿನಗಳಿಂದ ನೀರಿನ ಸಮಸ್ಯೆ (Wtaer Problem) ಎದುರಾಗಿದ್ದು, ಜನತೆ ಪ್ರತಿನಿತ್ಯ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ. ಮಡಿಕೇರಿ ಸಮೀಪದ ಕೂಟುಹೊಳೆಯಿಂದ ಮಡಿಕೇರಿ ನಗರಕ್ಕೆ ನೀರು ಪೂರೈಕೆಯಲ್ಲಿ ಸಮಸ್ಯೆಯಾಗಿರುವುದು ಇದಕ್ಕೆ ಮುಖ್ಯ ಕಾರಣ. ಆದರೆ ಕೂಟುಹೊಳೆಯಿಂದ ನೀರು ಪಂಪ್ ಮಾಡುವ 300 ಹೆಚ್‌ಪಿಯ 2 ನೀರೆತ್ತುವ ಪಂಪ್ ಹಾಳಾಗಿದೆ. ಇದರಿಂದ ಮಡಿಕೇರಿ ನಗರಕ್ಕೆ ನೀರು ಪೂರೈಕೆಯಲ್ಲಿ ಸಮಸ್ಯೆಯಾಗಿದೆ. ಇದನ್ನೂ ಓದಿ: ಕೋಲಾರ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ
ಈ ಸಮಸ್ಯೆ ಸರಿದೂಗಿಸಲು ಟ್ಯಾಂಕರ್ ಮೂಲಕ ನೀರಿನ ಪೂರೈಕೆ ಮಾಡಲಾಗುತ್ತಿದೆ. ಆದರೆ ಕೆಲವೊಂದು ಗುಡ್ಡಗಾಡು ಪ್ರದೇಶಗಳಿಗೆ ನೀರಿನ ಟ್ಯಾಂಕರ್‌ಗಳು ಹೋಗದೇ ಇರುವುದರಿಂದ ನಗರದ ಜನರು ನೀರಿಗಾಗಿ ಪರದಾಡುತ್ತಿದ್ದಾರೆ. ಈ ಸಮಸ್ಯೆಗೆ ಸೂಕ್ತ ರೀತಿಯಲ್ಲಿ ನೀರಿನ ಪೂರೈಕೆ ಮಾಡಲು ಸಾಧ್ಯವಾಗುತ್ತಿಲ್ಲ. ಇಲ್ಲಿಯವರೆಗೆ ಪಂಪ್ ಅನ್ನು ಸರಿಯಾಗಿ ನಗರಸಭೆ ಅಧಿಕಾರಿಗಳು ನಿರ್ವಹಣೆ ಮಾಡಿಲ್ಲ. 15 ದಿನಗಳ ಹಿಂದೆ ಒಂದು ಪಂಪ್ (Pump) ಕೆಟ್ಟುಹೋಗಿದ್ದು, ಇಲ್ಲಿಯವರೆಗೂ ಅದನ್ನು ಸರಿಪಡಿಸಲು ಯಾರೂ ಮುಂದಾಗಿಲ್ಲ. ಇದನ್ನೂ ಓದಿ: ಬಹುಕೋಟಿ ವೆಚ್ಚದ BRTS ಬಸ್‌ಗಳಲ್ಲಿ ಇಲ್ಲ ಮಹಿಳೆಯರಿಗೆ ಉಚಿತ ಪ್ರಯಾಣ
ಮತ್ತೊಂದು ಪಂಪ್‌ನಿಂದ ನೀರನ್ನು ಮೇಲಕ್ಕೆ ಎತ್ತಲಾಗುತ್ತಿತ್ತು. ಈಗ ಪಂಪ್ ಕೂಡ ಕೆಟ್ಟು ಹೋಗಿದೆ. ಅಧಿಕಾರಿಗಳ ನಿರ್ಲಕ್ಷ್ಯವೋ ಇಲ್ಲ ಜನಪ್ರತಿನಿಧಿಗಳ ನಿರ್ಲಕ್ಷ್ಯವೋ ಅಥವಾ ಆಡಳಿತ ಹಾಗೂ ನಗರಸಭೆಯ ಜನಪ್ರತಿನಿಧಿಗಳ ಸಾಮರಸ್ಯದ ಕೊರತೆಯೋ ತಿಳಿಯುತ್ತಿಲ್ಲ. ಆದರೆ ಮಡಿಕೇರಿ ನಗರದ ಜನರು ದಿನನಿತ್ಯ ನೀರಿಗಾಗಿ ಬವಣೆ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದನ್ನೂ ಓದಿ: ನಾನು ಭವಿಷ್ಯ ನುಡಿದಂತೆ ರೈಲು ದುರಂತ ಆಗಿದೆ; ದೇಶಕ್ಕೆ ಇನ್ನೊಂದು ಗಂಡಾಂತರ ಕಾದಿದೆ – ಕೋಡಿ ಮಠ ಶ್ರೀ ಭವಿಷ್ಯ
ಈ ಹಿನ್ನೆಲೆಯಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಮಂಥರ್ ಗೌಡ (Manthar Gowda) ಕೂಟುಹೊಳೆಗೆ ಭೇಟಿ ನೀಡಿ ಮೋಟರು ಸಮಸ್ಯೆ ಬಗ್ಗೆ ಮಾಹಿತಿ ಪಡೆದು ಇನ್ನೂ 6 ಗಂಟೆ ಒಳಗೆ ಸಮಸ್ಯೆ ಬಗ್ಗೆಹರಿಯದೇ ಇದ್ದರೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ನಗರಸಭೆಯಲ್ಲಿ ಬಿಜೆಪಿ ಆಡಳಿತವಿದ್ದು, ಜನರ ಬವಣೆ ಅರ್ಥ ಮಾಡಿಕೊಳ್ಳದೇ ಇರುವುದರಿಂದ ಈ ಸಮಸ್ಯೆಗೆ ಇನ್ನೂ ಪರಿಹಾರ ದೊರೆತಿಲ್ಲ ಎಂದು ದೂರಿದರು. ಇದನ್ನೂ ಓದಿ: 500 ರೂ. ನೋಟ್ ಬ್ಯಾನ್ ಮಾಡಲ್ಲ – 1,000 ರೂ. ನೋಟ್ ಪರಿಚಯಿಸುವ ಉದ್ದೇಶ ಇಲ್ಲ: RBI