ದಾವಣಗೆರೆ: ಅಪಘಾತವಾಗಿ ಚಿಂತಾಜನಕ ಸ್ಥಿತಿಯಲ್ಲಿ ಕೈ ತುಂಡಾಗಿ ನರಳಾಡುತ್ತಿದ್ದ ಗಾಯಾಳನ್ನು ಜನರು ನೋಡಿಕೊಂಡು ನಿಂತಿದ್ದ ಘಟನೆ ಬಳ್ಳಾರಿ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನಲ್ಲಿ ನಡೆದಿದೆ.
ನಗರದ ಎಸ್ಬಿಐ ಬ್ಯಾಂಕ್ ಮುಂಭಾಗ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ನಡೆದಿತ್ತು. ಈ ಅಪಘಾತದಲ್ಲಿ ಬೈಕ್ ಸವಾರ ಕುಮಾರ್(34) ಕೈ ಮೇಲೆ ಬಸ್ ಹೋದ ಪರಿಣಾಮ ಕೈ ಸಂಪೂರ್ಣ ನಜ್ಜುಗುಜ್ಜಾಗಿ ತುಂಡಾಗಿದೆ. ತೀವ್ರ ರಕ್ತದ ಮಡುವಿನಲ್ಲಿ ಬಿದ್ದಿರುವ ಕುಮಾರ್ ಅವರನ್ನು ಸಾರ್ವಜನಿಕರು ನೋಡುತ್ತಾ ನಿಂತಿದ್ದರು.
ಬಳಿಕ ಕೆಲ ಜನರು ಕುಮಾರ್ ಅವರನ್ನು ಅಂಬುಲೆನ್ಸ್ ಮೂಲಕ ತಾಲೂಕು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.
ಹರಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ದೃಶ್ಯವನ್ನು ಯಾರೋ ಸೆರೆಹಿಡಿದ ವಿಡಿಯೋ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv