ಮಾನವ ಸರಪಳಿ ನಿರ್ಮಿಸಿ ನೀರಿನಲ್ಲಿ ಕೊಚ್ಚಿ ಹೋಗ್ತಿದ್ದವರ ರಕ್ಷಣೆಗೆ ನಿಂತ ಜನ

Public TV
1 Min Read
human chain

ಭೋಪಾಲ್: ಮಧ್ಯಪ್ರದೇಶದ ಇಂದೋರಿನ ಗೌತಮಪುರದಲ್ಲಿ ತುಂಬಿ ಹರಿಯುತ್ತಿದ್ದ ಹೊಳೆಯಲ್ಲಿ ಇಬ್ಬರು ಕೊಚ್ಚಿ ಹೋಗುತ್ತಿದ್ದರು. ಈ ವೇಳೆ ಸ್ಥಳೀಯರು ಮಾನವ ಸರ್ಪಳಿ ನಿರ್ಮಿಸಿ, ತಮ್ಮ ಪ್ರಾಣ ಪಣಕ್ಕಿಟ್ಟು ಅವರ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.

ಗುರುವಾರ ಗೌತಮಪುರದಲ್ಲಿನ ಹೊಳೆಯಲ್ಲಿ ಇಬ್ಬರು ಕೊಚ್ಚಿ ಹೋಗಿದ್ದರು. ಇದನ್ನು ಗಮನಿಸಿದ ಸ್ಥಳೀಯರು ಅವರ ರಕ್ಷಣೆ ಮಾಡಲು ಮುಂದಾದರು. ಈ ವೇಳೆ 10ರಿಂದ 15 ಮಂದಿ ಸೇರಿ ಒಬ್ಬರ ಕೈ ಮತ್ತೊಬ್ಬರು ಹಿಡಿದು ಮಾನವ ಸರಪಳಿ ನಿರ್ಮಿಸಿಕೊಂಡು ಹೊಳೆಗೆ ಇಳಿದಿದ್ದಾರೆ. ಸದ್ಯ ಕೊಚ್ಚಿ ಹೋಗುತ್ತಿದ್ದ ಓರ್ವನನ್ನು ಸ್ಥಳೀಯರೇ ರಕ್ಷಣೆ ಮಾಡಿ, ಆಸ್ಪತ್ರೆಗೆ ದಾಖಲಿಸಿದ್ದಾರೆ.

ಈ ಬಗ್ಗೆ ಮಾಹಿತಿ ತಿಳಿದ ಬಳಿಕ ಸ್ಥಳಕ್ಕೆ ರಕ್ಷಣಾ ತಂಡ ಆಗಮಿಸಿದ್ದು, ಇನ್ನೋರ್ವ ಪತ್ತೆಯಾಗದ ಹಿನ್ನೆಲೆ ರಕ್ಷಣಾ ಕಾರ್ಯಚರಣೆ ಮುಂದುವರಿಸಿದ್ದಾರೆ. ಅವರಿಗೆ ಸ್ಥಳೀಯರು ಕೂಡ ಸಾಥ್ ನೀಡುತ್ತಿದ್ದಾರೆ. ಹೊಳೆಯಲ್ಲಿ ಕೊಚ್ಚಿಹೋಗಿದ್ದ ಇಬ್ಬರು ವ್ಯಕ್ತಿಗಳ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಅಲ್ಲದೆ ಈ ವ್ಯಕ್ತಿಗಳು ಹೊಳೆ ಬಳಿ ಏಕೆ ಹೋಗಿದ್ದರು? ಹೇಗೆ ನೀರಿಗೆ ಬಿದ್ದರು ಎನ್ನುವ ಬಗ್ಗೆ ಕೂಡ ಯಾವುದೇ ಮಾಹಿತಿ ದೊರಕಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *