ಬೀದರ್: ಮುಡಾ, ವಕ್ಫ್ ಬಗ್ಗೆ ಪ್ರತಿಪಕ್ಷಗಳು ನಮ್ಮ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದು, ಆ ಸುಳ್ಳು ಆರೋಪಗಳಿಗೆ ಇಂದು (ನ.23) ಜನರು ತಕ್ಕ ಉತ್ತರ ಕೊಟ್ಟಿದ್ದಾರೆ ಎಂದು ಜಿಲ್ಲೆಯ ಬಸವಕಲ್ಯಾಣದಲ್ಲಿ ಸಚಿವ ಈಶ್ವರ್ ಖಂಡ್ರೆ (Eshwar Khandre) ಬಿಜೆಪಿ (BJP) ನಾಯಕರಿಗೆ ಟಾಂಗ್ ಕೊಟ್ಟಿದ್ದಾರೆ.
ಜಿಲ್ಲೆಯಲ್ಲಿ ಮಾತನಾಡಿದ ಅವರು, ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಮತದಾರರು ನಮ್ಮ ಕೈ ಹಿಡಿದಿದ್ದು, ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಭರ್ಜರಿ ಗೆಲವು ತಂದು ಕೊಟ್ಟಿದ್ದಾರೆ. ನಮ್ಮ ಗ್ಯಾರಂಟಿಗಳಿಗೆ ಜಯ ಸಿಕ್ಕಿದೆ. ಜಾತ್ಯತೀತ ವಿಚಾರಗಳಿಗೆ ಜಯ ಸಿಕ್ಕಿರುವುದು ಬಿಜೆಪಿ, ಜೆಡಿಎಸ್ ಅನೈತಿಕ ಸಂಬಂಧಕ್ಕೆ ಇದು ತಕ್ಕ ಉತ್ತರವಾಗಿದೆ ಎಂದು ಹೇಳಿದರು.ಇದನ್ನೂ ಓದಿ: ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದಿದೆ: ಮಹಾರಾಷ್ಟ್ರದಲ್ಲಿ ಮಹಾಯುತಿ ಗೆಲುವಿಗೆ ಮೋದಿ ಕೃತಜ್ಞತೆ
ವಿಶೇಷವಾಗಿ ಶಿಗ್ಗಾಂವಿ ಮತದಾರರು ಜಾತ್ಯತೀತವಾಗಿ ಮತ ಹಾಕಿದ್ದು, ಜಾತಿ-ಜಾತಿಗಳ ನಡುವೆ ಜಗಳ ಹಚ್ಚುವ ಕೆಲಸ ಮಾಡಿದರೂ ನಮ್ಮ ಅಭ್ಯರ್ಥಿ ಯಾಸಿರ್ ಖಾನ್ ಗೆದ್ದಿದ್ದು ಸತ್ಯಕ್ಕೆ ಜಯವಾಗಿದೆ. ಈ ಮೂರು ಕ್ಷೇತ್ರದ ಗೆಲುವಿನಿಂದಾಗಿ ಇನ್ನಷ್ಟು ಕೆಲಸ ಮಾಡುವ ಹುಮ್ಮಸ್ಸು ಸಿಕ್ಕಿದೆ. ಸಿದ್ದರಾಮಯ್ಯನವರ ನಾಯಕತ್ವಕ್ಕೆ ಜನ ಬೆಂಬಲಿಸಿದ್ದಾರೆ. ಪ್ರತಿಪಕ್ಷದವರು ಇನ್ನಾದರೂ ಬುದ್ಧಿ ಕಲಿಯಲಿ ಎಂದು ಚಾಟಿ ಬೀಸಿದರು.
ಮಹಾರಾಷ್ಟ್ರದಲ್ಲಿ (Maharashtra) ಕಾಂಗ್ರೆಸ್‌ಗೆ (Congress) ಹಿನ್ನಡೆಯಾಗಿರುವುದು ಪರಿಶೀಲನೆ ಮಾಡಬೇಕಾಗುತ್ತದೆ. ಎಕ್ಸಿಟ್ ಪೋಲ್‌ನಲ್ಲಿ ಸಮ ಪೈಪೋಟಿ ಎಂದು ಹೇಳಲಾಗಿತ್ತು. ಏನಾಗಿದೆ ಎಂದು ನಮ್ಮ ವರಿಷ್ಠರು ಪರಾಮರ್ಶೆ ಮಾಡುತ್ತಾರೆ ಎಂದು ತಿಳಿಸಿದರು.ಇದನ್ನೂ ಓದಿ: ರಾಹುಲ್ ದಾಖಲೆ ಬ್ರೇಕ್ – ಪ್ರಿಯಾಂಕಾಗೆ 4 ಲಕ್ಷಕ್ಕೂ ಅಧಿಕ ಮತಗಳ ಅಂತರದ ಗೆಲುವು