Connect with us

Bengaluru City

ಕಾಂಗ್ರೆಸ್ ಬಗ್ಗೆ ಯಾವುದೇ ನಿರೀಕ್ಷೆ ಇಟ್ಟುಕೊಳ್ಳುವಂತಿಲ್ಲ: ಮೋದಿ

Published

on

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ ಬಳಿಕ ನೇರವಾಗಿ ಬೆಂಗಳೂರಿನ ಹೆಚ್‍ಎಎಲ್ ಗೆ ಬಂದಿಳಿದರು.

ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮತ್ತು ರಾಜ್ಯಪಾಲ ವಜೂಭಾಯಿ ವಾಲಾ ಅವರು ಮೈಸೂರು ಪೇಟ ತೊಡಿಸಿ, ಹಾರ ಹಾಕಿ, ಶಾಲು ಹೊದಿಸಿ ಆದರದಿಂದ ಬರಮಾಡಿಕೊಂಡರು. ರಾಜ್ಯ ಬಿಜೆಪಿ ಘಟಕದಿಂದ ಹೆಚ್‍ಎಎಲ್ ಪಾರ್ಕಿಂಗ್ ಬಳಿ ಚಿಕ್ಕ ಸಮಾವೇಶವನ್ನು ಆಯೋಜನೆ ಮಾಡಲಾಗಿತ್ತು. ಮೋದಿ ಅವರ ಮಾತುಗಳನ್ನು ಕೇಳಲು ಸಾವಿರಾರು ಕಾರ್ಯಕರ್ತರು ಸೇರಿದ್ದರು.

ಕಾರ್ಯಕರ್ತರ ಒತ್ತಾಯದ ಮೇರೆಗೆ ಮೋದಿ ಮಾತನಾಡಿದರು. ತಮ್ಮ ಭಾಷಣದುದ್ದಕ್ಕೂ ಕಾಂಗ್ರೆಸ್ ನ್ನು ತರಾಟೆಗೆ ತೆಗೆದುಕೊಂಡರು. ಕರ್ನಾಟಕದ ಜನತೆ ಚುನಾವಣೆಗೂ ಮುನ್ನ ವಿಕಾಸ ಪಥವನ್ನು ಸೇರಲು ಕಾತುರರಾಗಿದ್ದಾರೆ. ಕರ್ನಾಟಕದಲ್ಲಿಯೂ ಅಭಿವೃದ್ಧಿ ಪಥದತ್ತ ಸಾಗಲಿದೆ. ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದರು.

ಇದನ್ನೂ ಓದಿ: ಮೀನೂಟ ತಿಂದುಬಂದ ಸಿಎಂ, ಉಪವಾಸದಲ್ಲೇ ಧರ್ಮಸ್ಥಳಕ್ಕೆ ಬಂದ ಮೋದಿ!

ಕಾಂಗ್ರೆಸ್ ದೇಶದ ಭದ್ರತಾ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ. ದೇಶದ ಜನತೆಗೆ ಕಾಂಗ್ರೆಸ್ ಮೇಲೆ ಯಾವುದೇ ನಂಬಿಕೆ ಮತ್ತು ವಿಶ್ವಾಸಗಳಿಲ್ಲ. ಕಾಶ್ಮೀರಕ್ಕಾಗಿ ದೇಶದ ಎಲ್ಲ ರಾಜ್ಯದ ಜನರು ಬಲಿದಾನ ನೀಡಿದ್ದಾರೆ. ದೇಶಕ್ಕೆ ಬಲಿದಾನ ನೀಡಿದವರ ಬಗ್ಗೆ ರಾಜಕೀಯ ಮಾಡುವುದು ಎಷ್ಟು ಸರಿ. ಅಂಥವರಿಂದ ದೇಶದ ಅಭಿವೃದ್ಧಿ ಆಗುವುದಿಲ್ಲ. ಭಾರತದ ಶಿಸ್ತು, ಸಂಯಮ, ಧೈರ್ಯವನ್ನು ಡೋಕ್ಲಾಂ ಘಟನೆಯಿಂದ ಇಡೀ ವಿಶ್ವವೇ ನೋಡಿದೆ. ಕಾಂಗ್ರೆಸ್ ಡೋಕ್ಲಾಂ ಬಗ್ಗೆ ಸುಳ್ಳು ಸುದ್ದಿ ಹರಿಡಿದ್ದರು. ಇಂದು ಕಾಂಗ್ರೆಸ್ ತಾವು ನೀಡಿದ ಪ್ರತಿಯೊಂದು ಹೇಳಿಕೆಗೆ ದೇಶದ ಜನತೆಗೆ ಉತ್ತರ ನೀಡಬೇಕಾಗಿದೆ ಎಂದು ವಾಗ್ದಾಳಿ ನಡೆಸಿದರು.

ಮೋದಿ ಅವರು ಹೆಚ್‍ಎಎಲ್ ವಿಮಾನ ನಿಲ್ದಾಣದಿಂದ ನೇರವಾಗಿ ಮಧ್ಯಾಹ್ನ 3.30ರವರೆಗೆ ಸೌಂದರ್ಯ ಲಹರಿ ಸಮರ್ಪಣಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಸಂಜೆ 4.45ಕ್ಕೆ ಬೆಂಗಳೂರಿನಿಂದ ಬೀದರ್ ಗೆ ಪ್ರಯಾಣ ಬೆಳೆಸಿ ಸಂಜೆ 5.10ಕ್ಕೆ ಬೀದರ್-ಕಲಬುರಗಿ ರೈಲು ಲೋಕಾರ್ಪಣೆ ಮಾಡಲಿದ್ದಾರೆ. ಈ ಕಾರ್ಯಕ್ರಮ ಮುಗಿಸಿ ಸಂಜೆ 6.20ಕ್ಕೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ಇದನ್ನೂ ಓದಿ: ಧರ್ಮಸ್ಥಳದಲ್ಲಿ ನಮೋ ಮೇನಿಯಾ- ಭಾಷಣದುದ್ದಕ್ಕೂ ಹೆಗ್ಗಡೆರನ್ನು ಹಾಡಿ ಹೊಗಳಿದ ಪ್ರಧಾನಿ ಮೋದಿ

ಇದನ್ನೂ ಓದಿ: ಧರ್ಮಸ್ಥಳಕ್ಕೆ ನನ್ನನ್ನು ಕರೆದಿದ್ರೆ ಹೋಗುತ್ತಿದ್ದೆ: ಸಿಎಂ ಸಿದ್ದರಾಮಯ್ಯ

Click to comment

Leave a Reply

Your email address will not be published. Required fields are marked *