ನವದೆಹಲಿ: ದೆಹಲಿ ಜನತೆ ಬಿಜೆಪಿ ಆಯ್ಕೆ ಮಾಡಿ ಆಪ್ ತಿರಸ್ಕರಿಸಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ (Eranna Kadadi) ತಿಳಿಸಿದ್ದಾರೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಜೆಪಿಯನ್ನು ಬಾರಿ ಬಹುಮತದಿಂದ ಗೆಲ್ಲಿಸುವ ಮೂಲಕ ಆಮ್ ಆದ್ಮಿ ಪಕ್ಷವನ್ನು ತಿರಸ್ಕರಿಸಿದ್ದು, ಆ ಪಕ್ಷದ ನೇತಾರ ಮಾಜಿ ಮುಖ್ಯಮಂತ್ರಿ ಅರವಿಂದ್ ಕ್ರೇಜಿವಾಲ್ ಮತ್ತು ಉಪಮುಖ್ಯಮಂತ್ರಿ ಮನಿಷ್ ಸೀಸೋಡಿಯಾ ಸೋಲುವ ಮೂಲಕ ಬಾರಿ ಹಿನ್ನೆಡೆ ಉಂಟಾಗಿದೆ. ಹೀಗಾಗಿ, ಬಿಜೆಪಿಗೆ ಆಶೀರ್ವದಿಸಿದ ಮತದಾರ ಬಂಧುಗಳಿಗೆ ಹಾಗೂ ಬಿಜೆಪಿಯನ್ನು ಗೆಲ್ಲಿಸುವಲ್ಲಿ ವಿಶೇಷ ಶ್ರಮವಹಿಸಿದ ದೆಹಲಿ ಬಿಜೆಪಿ ಕಾರ್ಯಕರ್ತರಿಗೆ ಹೃದಯಪೂರ್ವಕ ಧನ್ಯವಾದಗಳು ಎಂದಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿಯವರ ಅಭಿವೃದ್ಧಿ ಆಡಳಿತ ನೋಡಿ ಜನ ಬಿಜೆಪಿ ಗೆಲ್ಲಿಸಿದ್ದಾರೆ: ಬೊಮ್ಮಾಯಿ
ದೆಹಲಿ ಚುನಾವಣಾ ಫಲಿತಾಂಶದ ಬಗ್ಗೆ ಮಾತನಾಡಿದ ಅವರು, ಅಣ್ಣಾ ಹಜಾರೆ ಮತ್ತು ಅವರ ಭ್ರಷ್ಟಾಚಾರ ವಿರೋಧಿ ಹೋರಾಟದ ಮೂಲಕ ಅಧಿಕಾರಕ್ಕೆ ಬಂದಿರುವ ಆಮ್ ಆದ್ಮಿ ಪಕ್ಷದ ಸಚಿವ ಸಂಪುಟದ ಹಲವಾರು ಸಚಿವರು ಭ್ರಷ್ಟಾಚಾರ ಕಳಕಿಂತರಾಗಿ ಜೈಲು ಪಾಲಾಗಿರುವುದು ಅತ್ಯಂತ ವಿಪರ್ಯಾಸದ ಸಂಗತಿ. ಸುಳ್ಳಿನ ಅರಮನೆಯನ್ನೇ ನಿರ್ಮಿಸಿ ಅಧಿಕಾರಕ್ಕೆ ಬಂದ ಅರವಿಂದ್ ಕ್ರೇಜಿವಾಲ್ ಅವರನ್ನು ದೆಹಲಿ ಜನ ತಿರಸ್ಕರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಜನ ಆಯ್ಕೆ ಮಾಡುವ ಮೂಲಕ ದೆಹಲಿ ಅಭಿವೃದ್ಧಿ ಪರ್ವ ಪ್ರಾರಂಭವಾಗಲಿದೆ ಎಂದರು.
ಈ ಗೆಲುವಿಗೆ ಕಾರಣೀಭೂತರಾದ ದೆಹಲಿ ಮತದಾರ ಬಂಧುಗಳಿಗೂ ಹಾಗೂ ಗೆಲುವಿಗೆ ಪರಿಶ್ರಮ ವಹಿಸಿದ ಬಿಜೆಪಿ ದೆಹಲಿ ಕಾರ್ಯಕರ್ತರಿಗೂ ಹೃತ್ಪೂರ್ವಕವಾದ ಧನ್ಯವಾದಗಳು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬಿಜೆಪಿಯನ್ನು ಗೆಲ್ಲಿಸಿದ ರಾಹುಲ್‌ಗೆ ಅಭಿನಂದನೆಗಳು: ಕೆ.ಟಿ ರಾಮ್ ರಾವ್