ಬೆಳಗಾವಿ: ನಾನು ಇನ್ನೂ 22 ವರ್ಷ ರಾಜಕಾರಣದಲ್ಲಿ ಇರುತ್ತೇನೆ. ರಾಜಕೀಯದಲ್ಲಿದ್ದವರಿಗೆ ತಾಳ್ಮೆ ಮತ್ತು ದೂರದೃಷ್ಟಿ ಎರಡೂ ಬೇಕು ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ (Laxman Savadi) ಹೇಳಿಕೆ ನೀಡಿದ್ದಾರೆ.
ಕಾಂಗ್ರೆಸ್ (Congress) ಪಕ್ಷದಲ್ಲಿ ಲಕ್ಷ್ಮಣ ಸವದಿಯವರಿಗೆ ಸೂಕ್ತ ಸ್ಥಾನಮಾನ ನೀಡುವ ವಿಚಾರದ ಕುರಿತು ಬೆಳಗಾವಿ (Belagavi) ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದೆ ಒಳ್ಳೆಯ ದಿನಗಳು ಕಾದಿವೆ ಎಂಬುದನ್ನು ನಾನು ನಂಬುತ್ತೇನೆ. ನಾನು ಮೊದಲ ಆದ್ಯತೆಯನ್ನು ಕ್ಷೇತ್ರದ ಅಭಿವೃದ್ಧಿಗೆ ನೀಡುತ್ತೇನೆ. ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕೆಲಸಗಳು ನೆನೆಗುದಿಗೆ ಬಿದ್ದಿವೆ. ನೆನೆಗುದಿಗೆ ಬಿದ್ದಿರುವ ಎಲ್ಲಾ ಯೋಜನೆಗಳನ್ನು ಪೂರ್ಣ ಮಾಡುತ್ತೇನೆ. ಕ್ಷೇತ್ರದ ಜನ ನೆಮ್ಮದಿಯಿಂದ ಬದುಕುವ ಹಾಗೆ ವಾತಾವರಣ ನಿರ್ಮಾಣ ಮಾಡಿದ ಮೇಲೆ ರಾಜ್ಯ ರಾಜಕಾರಣದ ವಿಚಾರ ಮಾಡುತ್ತೇನೆ ಎಂದರು. ಇದನ್ನೂ ಓದಿ: CET Results: ಎಂಜಿನಿಯರಿಂಗ್‌ನಲ್ಲಿ ವಿಘ್ನೇಶ್, BNYS ನಲ್ಲಿ ಪ್ರತೀಕ್ಷಾ ಫಸ್ಟ್ – ಟಾಪ್ ರ‍್ಯಾಂಕ್ ವಿದ್ಯಾರ್ಥಿಗಳ ಪಟ್ಟಿ ಇಲ್ಲಿದೆ
ಕಳೆದ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ನಾಯಕರು ಹೊಂದಾಣಿಕೆ ಮಾಡಿಕೊಂಡು ರಾಜ್ಯದಲ್ಲಿ ಬಿಜೆಪಿಗೆ (BJP) ಸೋಲಾಯಿತು ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯ ನಾಯಕರ ಮಧ್ಯೆ ಹೊಂದಾಣಿಕೆ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ.ನಾನು ಅಷ್ಟು ಕೆಳಗೆ ಹೋಗಿ ಅಧ್ಯಯನ ಮಾಡಿಲ್ಲ. ಸಿ.ಟಿ ರವಿ, ಪ್ರತಾಪ್ ಸಿಂಹ ಹೇಳಿಕೆಯನ್ನು ನಾನು ಮಾಧ್ಯಮದಲ್ಲಿ ಗಮನಿಸಿದ್ದೇನೆ. ಅದರ ಬಗ್ಗೆ ಕೂಲಂಕುಷ ಅಧ್ಯಯನ ಮಾಡಿ ಅದರ ಬಗ್ಗೆ ಮಾತನಾಡುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ನಿಗಮಗಳಿಗೆ ವಿಶೇಷ ಅನುದಾನ ನೀಡಲು ಸಾಧ್ಯವಿಲ್ಲ: ಸಾರಿಗೆ ಇಲಾಖೆ
ಅಕ್ಕಿ ವಿಚಾರವಾಗಿ ಕೇಂದ್ರದ ಮೇಲೆ ಸಿಎಂ ಸಿದ್ದರಾಮಯ್ಯ (Siddaramaiah) ಆರೋಪ ವಿಚಾರದ ಕುರಿತು ಮಾತನಾಡಿದ ಅವರು, ಕೇಂದ್ರ ಸರ್ಕಾರದಿಂದ ಬರಬೇಕಾದ ಐದು ಕೆಜಿ ಅಕ್ಕಿ ಬಂದೇ ಬರುತ್ತದೆ. ರಾಜ್ಯ ಸರ್ಕಾರ ಐದು ಕೆಜಿ ಅಕ್ಕಿಯನ್ನು ಕೊಡಬೇಕು ಎಂದು ಚುನಾವಣಾ ಪ್ರಣಾಳಿಕೆಯಲ್ಲಿಯೇ ಹೇಳಿದೆ. ಅದರ ಬಗ್ಗೆ ಆಹಾರ ಮಂತ್ರಿಗಳು ಹಾಗೂ ಮುಖ್ಯಮಂತ್ರಿಗಳು ಚರ್ಚೆ ಮಾಡಿದ್ದಾರೆ. ಬೇರೆ ಬೇರೆ ರಾಜ್ಯಗಳಲ್ಲಿ ಎಲ್ಲೆಲ್ಲಿ ಲಭ್ಯತೆ ಇದೆ ಅದನ್ನು ಪಡೆದುಕೊಂಡಾದರೂ ಕೊಡುವ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ ಎಂದರು. ಇದನ್ನೂ ಓದಿ: ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಬಳಿಕ ಮತ್ತೊಂದು ಶಾಕ್ - ಏಕಾಏಕಿ ವಾಟರ್ ಬಿಲ್ ಡಬಲ್
ಕೇಂದ್ರ ಸರ್ಕಾರ ಅಕ್ಕಿ ಕೊಡಲಿಲ್ಲ ಎಂಬ ಕಾರಣಕ್ಕೆ ನಾವೇನು ಆ ಯೋಜನೆ ನಿಲ್ಲಿಸುವುದಿಲ್ಲ. ಖಂಡಿತ ಆ ಯೋಜನೆಯನ್ನು ಪ್ರಾರಂಭ ಮಾಡಿಯೇ ಮಾಡುತ್ತೇವೆ. ಅಕ್ಕಿ ಬೆಳೆಯುವ ರಾಜ್ಯಗಳು ಕಡಿಮೆ ಇವೆ. ಕೇಂದ್ರ ಸರ್ಕಾರ ರಾಜಕಾರಣ ಮಾಡುತ್ತಿದೆ ಎಂಬ ಸಿದ್ದರಾಮಯ್ಯ ಆರೋಪ ವಿಚಾರಕ್ಕೆ ಅವರೇನು ಮಾಹಿತಿ ತೆಗೆದುಕೊಂಡು ಹೇಳಿದ್ದಾರೆ ಗೊತ್ತಿಲ್ಲ. ಮುಖ್ಯಮಂತ್ರಿಗಳು ಹೇಳಿದ್ದಕ್ಕೆ ನಾವು ಪರಾಮರ್ಶೆ ಮಾಡುವುದು ಸರಿಯಲ್ಲ ಎಂದು ಹೇಳಿದರು. ಇದನ್ನೂ ಓದಿ: Cyclone Biparjoy: ಇಂದು ಸಂಜೆ ಅಪ್ಪಳಿಸಲಿದೆ ಸೈಕ್ಲೋನ್ – 74 ಸಾವಿರ ಮಂದಿ ಸ್ಥಳಾಂತರ