ರಾಮನಗರ: ಮಾಗಡಿ ಶಾಸಕ ಹೆಚ್.ಸಿ ಬಾಲಕೃಷ್ಣ (H C Balakrishna) ಅವರು ಇದೀಗ ಹೇಳಿಕೆಯೊಂದನ್ನು ನೀಡಿ ಭಾರೀ ಚರ್ಚೆಗೆ ಗ್ರಾಸವಾಗುವ ಮೂಲಕ ವಿವಾದಕ್ಕೀಡಾಗಿದ್ದಾರೆ.
ಕಾಂಗ್ರೆಸ್‍ಗೆ (Congres) ವೋಟು ಹಾಕುವ ಊರುಗಳಿಗೆ ಮಾತ್ರ ಕೆಲಸ ಮಾಡುತ್ತೇವೆ. ವೋಟ್ ಹಾಕದೇ ಇರೋರ ಬಗ್ಗೆ ಆಲೋಚನೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಶಾಸಕರ ಈ ಬೇಜಾವಾಬ್ದಾರಿ ಹೇಳಿಕೆಗೆ ಭಾರೀ ಖಂಡನೆ ವ್ಯಕ್ತವಾಗುತ್ತಿದೆ. ಅಲ್ಲದೆ ದ್ವೇಷದ ರಾಜಕಾರಣಕ್ಕೆ ಶಾಸಕರು ಮುಂದಾದ್ರಾ ಎಂಬ ಪ್ರಶ್ನೆಯೂ ಎದ್ದಿದೆ.
Advertisement
Advertisement
ಬಿಜೆಪಿ-ಜೆಡಿಎಸ್ (BJP_ JDS) ಮೈತ್ರಿಯಿಂದ ಕಾಂಗ್ರೆಸ್‍ಗೆ ಅನುಕೂಲವಾಗಲಿದೆ. ಕಾಂಗ್ರೆಸ್ ಮತಗಳು ವಿಭಜನೆ ಆಗಲ್ಲ. ರಾಜ್ಯದಲ್ಲಿ ಮುಂದಿನ ಐದು ವರ್ಷ ನಮ್ಮ ಸರ್ಕಾರ ಇರುತ್ತೆ. ಬೂತ್ ಲೆಕ್ಕಾಚಾರದ ಮೇಲೆ ಎಲೆಕ್ಷನ್ ಆಗುತ್ತೆ. ಯಾವ್ ಬೂತ್ ನಲ್ಲಿ ಹೆಚ್ಚು ನಮಗೆ ವೋಟ್ ಬರುತ್ತೋ ಅಲ್ಲಿ ಕೆಲಸ ಮಾಡ್ತೀವಿ. ವೋಟ್ ಹಾಕದಿದ್ರೆ ಅಂತಹ ಬೂತ್ ಗಳ ಬಗ್ಗೆ ಆಲೋಚನೆ ಮಾಡ್ತೀವಿ. ಹಾಗಾಗಿ ಇದನ್ನ ಜನ ಯೋಚನೆ ಮಾಡಬೇಕು ಎಂದು ಶಾಸಕರು ಹೇಳಿದ್ದಾರೆ. ಇದನ್ನೂ ಓದಿ: ಇಸ್ರೇಲ್‌ಗೆ ಬಂದಿಳಿದ ಅಮೆರಿಕದ ಶಸ್ತ್ರಾಸ್ತ್ರ ಹೊತ್ತ ಮೊದಲ ವಿಮಾನ – ಇಸ್ರೇಲ್‌ಗೆ ನೂರಾನೆ ಬಲ
Advertisement
Advertisement
ತಮ್ಮ ಹೇಳಿಕೆಯ ಮೂಲಕ ಶಾಸಕರು ಪರೋಕ್ಷವಾಗಿ ಕಾಂಗ್ರೆಸ್‍ಗೆ ಮತಹಾಕದಿದ್ರೆ ಅಭಿವೃದ್ಧಿ ಮಾಡಲ್ಲ ಎಂದಿದ್ದಾರೆ. ಸದ್ಯ ಬಾಲಕೃಷ್ಣ ಹೇಳಿಕೆಗೆ ಸಾರ್ವಜನಿಕರು ಆಕ್ರೋಶ ಹೊರಹಾಕುತ್ತಿದ್ದಾರೆ.
Web Stories