ಬೆಂಗಳೂರು: ಕಾಂಗ್ರೆಸ್ ಬೇಜವಾಬ್ದಾರಿ ನಡೆಯನ್ನು ಜನ ಮರೆಯುವುದಿಲ್ಲ, ಕ್ಷಮಿಸುವುದೂ ಇಲ್ಲ ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಾದಯಾತ್ರೆಗೆ ಸಂಬಂಧಿಸಿದಂತೆ ನ್ಯಾಯಾಲಯ ನೀಡಿದ ನಿರ್ದೇಶನವನ್ನು ಸ್ವಾಗತಿಸುತ್ತೇನೆ. ಇದು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕೋವಿಡ್ ನಿಯಂತ್ರಣ ಮಾರ್ಗಸೂಚಿಗೆ ಪೂರಕವಾಗಿದೆ. ಕೋವಿಡ್ ಪ್ರಕರಣ ಹೆಚ್ಚಿರುವ ಈ ಸಮಯದಲ್ಲಿ ಇದು ಸೂಕ್ತವಾಗಿದೆ. ಕಾಂಗ್ರೆಸ್‌ನ ಬೇಜವಾಬ್ದಾರಿ ನಡೆಯನ್ನು ಜನ ಮರೆಯುವುದೂ ಇಲ್ಲ, ಕ್ಷಮಿಸುವುದೂ ಇಲ್ಲ ಎಂದು ಟೀಕಿಸಿದರು. ಇದನ್ನೂ ಓದಿ: ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ- ವೇತನ 11 ಸಾವಿರದಿಂದ 28 ಸಾವಿರಕ್ಕೆ ಹೆಚ್ಚಳ
Advertisement
Advertisement
ರಾಜ್ಯದಲ್ಲಿ ಸೋಂಕು ದಿನೇ ದಿನೇ ಹೆಚ್ಚಳವಾಗುತ್ತಿದೆ. ಆದರೂ ಶೇ. 5ರಿಂದ 6 ರಷ್ಟು ರೋಗಿಗಳು ಮಾತ್ರ ಆಸ್ಪತ್ರೆ ಸೇರುತ್ತಿದ್ದಾರೆ. ನರ್ಸ್‌ಗಳು ಕೂಡ ಸೋಂಕಿಗೆ ಒಳಗಾಗುತ್ತಿರುವುದು ಆತಂಕದ ವಿಚಾರ. ಹೀಗಾಗಿ ಮತ್ತಷ್ಟು ಎಚ್ಚರಿಕೆಯ ಅವಶ್ಯಕತೆ ಇದೆ. ರಾಜ್ಯದಲ್ಲಿ ಕೊರೊನಾ ಇನ್ನೂ ಪೀಕ್‌ಗೆ ಹೋಗಿಲ್ಲ ಎಂದು ತಜ್ಞರು ಕೂಡಾ ಹೇಳಿದ್ದಾರೆ. ಫೆಬ್ರವರಿ ಮೊದಲ ವಾರ ಪೀಕ್‌ಗೆ ಹೋಗುವ ಸಾಧ್ಯತೆ ಇದೆ. 3- 4ನೇ ವಾರದಿಂದ ಕಡಿಮೆ ಆಗಲಿದೆಯೆಂದು ತಜ್ಞರು ಅಂದಾಜಿಸಿದ್ದಾರೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಆರೋಪಿಗಳ ರಕ್ಷಣೆಗೆ ಲಂಚ – ರವಿ ಡಿ.ಚನ್ನಣ್ಣನವರ್ ಅಮಾನತಿಗೆ AAP ಆಗ್ರಹ
Advertisement
Advertisement
ರಾಜ್ಯದ ಜನರಿಗೆ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳನ್ನು ಕೋರುತ್ತೇನೆ. ಈ ಉತ್ತರಾಯಣದ ಪುಣ್ಯ ಕಾಲದಲ್ಲಿ ಎಲ್ಲರಿಗೂ ಸಂತಸ, ಆರೋಗ್ಯ, ಸಮೃದ್ಧಿ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ಇಂದು ಕೋವಿಡ್ ಲಸಿಕೆಯ ಬೂಸ್ಟರ್ ಡೋಸ್ ಪಡೆದಿದ್ದಾರೆ. 9 ತಿಂಗಳ ಹಿಂದೆ ಅವರು ಎರಡು ಡೋಸ್ ಪಡೆದಿದ್ದರು. ಬಿಎಂಸಿಆರ್‌ಐನಲ್ಲಿ ಈವರೆಗೆ 83,937 ಡೋಸ್‌ಗಳನ್ನು ನೀಡಲಾಗಿದೆ. ಈ ಪೈಕಿ 420 ಬಾಣಂತಿ, 1,179 ಗರ್ಭಿಣಿಯರಿಗೆ ಲಸಿಕೆ ನೀಡಲಾಗಿದೆ. ಆರೋಗ್ಯ ಸಿಬ್ಬಂದಿ ಸೇರಿದಂತೆ ಅರ್ಹರು ಮುನ್ನೆಚ್ಚರಿಕೆಗೆ ಲಸಿಕೆಯನ್ನು ಪಡೆಯಬೇಕು. ಲಸಿಕಾಕರಣ ಒಂದರಿಂದಲೇ ರಕ್ಷಣೆ ಸಾಧ್ಯ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದು, ಪ್ರಧಾನಿಗಳು ಕೂಡ ಅದನ್ನೇ ಹೇಳಿದ್ದಾರೆ. ಎಲ್ಲರೂ ಕಡ್ಡಾಯವಾಗಿ ಲಸಿಕೆ ಪಡೆಯೋಣ ಎಂದು ಕರೆ ನೀಡಿದರು.