ಮಡಿಕೇರಿ: ಹಲವು ದಿನಗಳಿಂದ ಬಣಗುಡುತ್ತಿದ್ದ ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಲ್ಲೀಗ ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಮತ್ತೆ ಪ್ರವಾಸಿಗರ ಕಲರವ ಆರಂಭವಾಗಿದೆ. ವೀಕೆಂಡ್ ಸೇರಿದಂತೆ ಹಬ್ಬಗಳ ರಜೆ ಇರುವುದರಿಂದ ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಭಾರೀ ದಂಡು ಕಾಣಸಿಗುತ್ತಿದೆ. ಈ ಮೂಲಕ ಪ್ರವಾಸೋದ್ಯಮ ಕ್ಷೇತ್ರ, ರಾಜ್ಯದ ಆರ್ಥಿಕತೆ ಚೇತರಿಕೆಯ ಮುನ್ಸೂಚನೆ ನೀಡುತ್ತಿದೆ.
ಕೊಡಗು ಜಿಲ್ಲೆಯಲ್ಲೂ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರ ಕಲರವ ಕಂಡು ಬರುತ್ತಿದೆ. ಅದರೆ ಬಂದ ಪ್ರವಾಸಿಗರು ಹುಚ್ಚಾಟ ನಡೆಸುತ್ತಿದ್ದಾರೆ. ಹೌದು, ಕೊಡಗಿಗೆ ಜಾಲಿ ರೈಡ್ ನೆಪದಲ್ಲಿ ಬಂದ ಪ್ರವಾಸಿಗರು ಅಪಾಯಕಾರಿ ಪ್ರಯಾಣಕ್ಕೆ ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರವಾಸಿಗರನ್ನು ತಡೆದು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡಿದ್ದಾರೆ.
Advertisement
ಮಡಿಕೇರಿ ಸಮೀಪದ ಗಾಳಿಬೀಡು ರಸ್ತೆ ಮೂಲಕ ನಗರಕ್ಕೆ ಮರಳುತ್ತಿದ್ದ ಟೆಂಪೋ ಟ್ರಾವೆಲರ್ ವಾಹನವೊಂದು ವೇಗವಾಗಿ ಸಾಗುತ್ತಿದ್ದು, ವಾಹನದ ಮೇಲೆ 12 ಮಕ್ಕಳು ಅಪಾಯಕಾರಿ ಸ್ಥಿತಿಯಲ್ಲಿ ಕುಳಿತಿರುವುದನ್ನು ಸಾರ್ವಜನಿಕರು ಗಮನಿಸಿದ್ದಾರೆ. ಕೂಡಲೇ ಎಚ್ಚೆತ್ತುಕೊಂಡ ಸಾರ್ವಜನಿಕರು ವೇಗವಾಗಿ ಚಲಿಸುತ್ತಿದ್ದ ವಾಹನವನ್ನು ಹಿಂಬಾಲಿಸಿ, ಚಾಲಕ ಹಾಗೂ ಒಳಗೆ ಕುಳಿತಿದ್ದ ಪಾಲಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: RRR ಚಿತ್ರದಲ್ಲಿ ಕರ್ನಾಟಕದ ಪ್ರಕೃತಿ ರೆಡ್ಡಿ ಹಾಡಿದ ಕೊಮ್ಮ ಉಯ್ಯಾಲ ಹಾಡು ರಿಲೀಸ್
Advertisement
Advertisement
ಗುಡ್ಡಗಾಡು ಪ್ರದೇಶವಾಗಿರುವ ಕೊಡಗಿನ ರಸ್ತೆಗಳಲ್ಲಿ ಸಾಕಷ್ಟು ತಿರುವುಗಳಿವೆ. ಆದರೂ ಮಕ್ಕಳನ್ನು ವಾಹನದ ಟಾಪ್ ಮೇಲೆ ಕೂರಿಸಿಕೊಂಡು ಪ್ರಯಾಣಿಸುತ್ತಿದ್ದೀರಿ. ಏನಾದರೂ ಅನಾಹುತ ಆದರೆ ಮಕ್ಕಳ ಸ್ಥಿತಿ ಏನಾಗಬೇಡ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಯೇಸುವಿನ ಮರಣದ ಜೀವಂತ ದೃಶ್ಯ ರೂಪಕ ಕಂಡು ಕಣ್ಣೀರು ಹಾಕಿದ ಭಕ್ತರು
Advertisement
ಬೆಂಗಳೂರು ಮೂಲದ ಪ್ರವಾಸಿಗರು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದಾಗ ಸ್ಥಳದಲ್ಲೇ ಕ್ಷಮೆ ಕೇಳಿ ಬಳಿಕ ಮಕ್ಕಳನ್ನು ಗಾಡಿ ಒಳಗೆ ಕೂರಿಸಿ ಹೋಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅನೇಕ ಪ್ರವಾಸಿಗರು ಈ ರೀತಿಯ ವರ್ತನೆ ಮಾಡುತ್ತಿದ್ದಾರೆ ಎಂದು ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದಾರೆ.