Bengaluru City

ಅಪ್ರಾಪ್ತ ಬಾಲಕಿ ಜೊತೆ ಅಸಭ್ಯವಾಗಿ ವರ್ತನೆ- ಠಾಣೆ ಎದುರು ಬಿಗುವಿನ ವಾತಾವರಣ

Published

on

Share this

ಬೆಂಗಳೂರು: ಅಪ್ರಾಪ್ತ ಬಾಲಕಿ ಜೊತೆ ಅಸಭ್ಯವಾಗಿ ವರ್ತಿಸಿದ ಪ್ರಕರಣದಲ್ಲಿ ವಶಕ್ಕೆ ಪಡೆದ ಯುವಕನನ್ನು ನಮ್ಮ ಕೈಗೆ ಬಿಟ್ಟುಕೊಡಿ, ನಾವೇ ಆತನಿಗೆ ತಕ್ಕ ಶಾಸ್ತಿ ಮಾಡುತ್ತೇವೆ ಎಂದು ಆಗ್ರಹಿಸಿ ಸಾರ್ವಜನಿಕರು ಸಂಜಯನಗರ ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕಿದ್ದಾರೆ. ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ ಸಾರ್ವಜನಿಕರು ಪೊಲೀಸ್‌ ಅಧಿಕಾರಿಗಳು ಹಾಗೂ ಶಾಸಕ ಬೈರತಿ ಸತೀಶ್‌ ಅವರ ಮನವಿಗೂ ಬಗ್ಗದೇ ಪ್ರತಿಭಟನೆ ಮುಂದುವರಿಸಿದ್ದಾರೆ.

ಏನಿದು ಪ್ರಕರಣ?: ಸಂಜಯನಗರ ಪೊಲೀಸ್‌ ಠಾಣಾ ವ್ಯಾಪ್ತಿಯ ಗೆದ್ದಲಹಳ್ಳಿಯಲ್ಲಿ ಪಶ್ಚಿಮ ಬಂಗಾಳ ಮೂಲದ ಯುವಕನೊಬ್ಬ ಅಪ್ರಾಪ್ತ ಬಾಲಕಿ ಜೊತೆ ಅಸಭ್ಯವಾಗಿ ವರ್ತಿಸಿದ್ದ. ಈತನನ್ನು ಸಂಜಯ್ ನಗರ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಮಾಡುತ್ತಿದ್ದರು. ಈ ವಿಷಯ ಕಾಳ್ಗಿಚ್ಚಿನಂತೆ ಈ ಪ್ರದೇಶದಲ್ಲಿ ಹರಡಿತು. ತಕ್ಷಣ ಸ್ಥಳಕ್ಕೆ ಬಂದ ಸಾವಿರಾರು ಮಂದಿ ಸಾರ್ವಜನಿಕರು ಪೊಲೀಸ್ ಠಾಣೆ ಮುಂದೆ ಗಲಾಟೆ ಮಾಡಿದ್ದಾರೆ. ಅಲ್ಲದೇ ಆರೋಪಿಯನ್ನು ಕರೆದುಕೊಂಡು ಹೋಗಲು ಮುಂದಾದ ಪೊಲೀಸರ ವಾಹನವನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪ್ರೇಮ ವೈಫಲ್ಯ- ರೈಲ್ವೇ ಹಳಿಗೆ ತಲೆಕೊಟ್ಟು ವಿದ್ಯಾರ್ಥಿ ಆತ್ಮಹತ್ಯೆ

ಪೊಲೀಸ್ ಠಾಣೆ ಮುಂದೆ ಬಿಗುವಿನ ವಾತಾವರಣ ಕಂಡುಬರುತ್ತಿದ್ದು, ಪೊಲೀಸರು ಪ್ರತಿಭಟನಕಾರರ ನಡುವೆ ಮಾತಿನ ಚಕಮಕಿ ನಡೆದಿದೆ. ಘಟನಾ ಸ್ಥಳಕ್ಕೆ ಹೆಚ್ಚಿನ ಭದ್ರತೆಗಾಗಿ ಕೆಎಸ್‍ಆರ್‌ಪಿ ತುಕಡಿ ನಿಯೋಜನೆ ಮಾಡಲಾಗಿದೆ. ಕ್ಷಣ ಕ್ಷಣಕ್ಕೂ ಪ್ರತಿಭಟನಕಾರರು ಹೆಚ್ಚಾಗುತ್ತಿರೋ ಹಿನ್ನೆಲೆ ಪೊಲೀಸರು ಭದ್ರತೆ ಹೆಚ್ಚಿಸಿಕೊಂಡಿದ್ದಾರೆ. ಇನ್ಸ್‌ಪೆಕ್ಟರ್ ಬಾಲರಾಜ್ ಪ್ರತಿಭಟನಾಕಾರರನ್ನು ಮನವೋಲಿಸಲು ಪ್ರಯತ್ನ ಪಟ್ಟರೂ ಅವರ ಮಾತಿಗೆ ಸೊಪ್ಪು ಹಾಕದೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನ ಸ್ಥಳಕ್ಕೆ ಡಿಸಿಪಿ ಭೇಟಿ ನೀಡಿದ್ದು, ಉತ್ತರ ವಿಭಾಗದ ಡಿಸಿಪಿ ಧರ್ಮೇಂದ್ರ ಕುಮಾರ್ ಮೀನಾ ಭೇಟಿ ನೀಡಿ ಮನವೊಲಿಕೆ ಯತ್ನ ಮುಂದುವರಿಸಿದ್ದಾರೆ.

ಈ ನಡುವೆ ಪ್ರತಿಭಟನೆಯಲ್ಲಿ ತೊಡಗಿದ್ದ ಮಹಿಳೆಯೊಬ್ಬರು ಅಸ್ವಸ್ಥರಾಗಿದ್ದರು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಸದ್ಯ ಪೊಲೀಸರು ಠಾಣೆ ಮುಂದೆ ನಿಂತಿದ್ದವರನ್ನು ಚದುರಿಸುವ ಕೆಲಸಕ್ಕೆ ಮುಂದಾಗಿದ್ದು ಪ್ರತಿಭಟನಾಕಾರರನ್ನು ವಾಪಸ್‌ ಕಳುಹಿಸುತ್ತಿದ್ದಾರೆ.

ಆರೋಪಿಯನ್ನು ನಮಗೆ ಬಿಟ್ಟುಕೊಡಬೇಕು ಎಂದು ಆಗ್ರಹಿಸಿ ಪ್ರತಿಭಟನಾಕಾರರು ಪೊಲೀಸರ ವಿರುದ್ಧ ಧಿಕ್ಕಾರ ಕೂಗುತ್ತಿದ್ದು, ಠಾಣೆಗೆ ನುಗ್ಗಲು ಮುಂದಾಗಿದ್ದಾರೆ. ಪೋಷಕರ ಪ್ರತಿಭಟನೆಗೆ ಕರವೇ ಪ್ರವೀಣ್ ಶೆಟ್ಟಿ ಸಾಥ್ ನೀಡಿದ್ದಾರೆ. ಈ ವೇಳೆ ಸಮಾಧಾನವಾಗಿರುವಂತೆ ಪೊಲೀಸರು ಮನವಿ ಮಾಡುತ್ತಿದ್ದು, ಕಾನೂನು ರೀತಿಯ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದ್ದಾರೆ. ಘಟನಾ ಸ್ಥಳಕ್ಕೆ  ಶಾಸಕ ಬೈರತಿ ಸತೀಶ್ ಅವರು ಆಗಮಿಸಿ ಪ್ರತಿಭಟನಾಕಾರರನ್ನು ಸಮಾಧಾನ ಪಡಿಸಲು ಯತ್ನಿಸಿದ್ದಾರೆ. ಆದರೆ ಇದ್ಯಾವುದಕ್ಕೂ ಜಗ್ಗದ ಪ್ರತಿಭಟನಾಕಾರರು ಆರೋಪಿಯನ್ನು ಹೊರಗೆ ಕರೆ ತರುವಂತೆ ಪಟ್ಟು ಹಿಡಿದು ಠಾಣೆ ಮುಂದೆ ಕೂತಿದ್ದಾರೆ. ಇದನ್ನೂ ಓದಿ: ಬಾಲಕಿ ಕೆನ್ನೆ ಕಚ್ಚಿದ್ದ ಶಿಕ್ಷಕನಿಗೆ ಪೊಲೀಸರ ಮುಂದೆಯೇ ಥಳಿಸಿದ ಸ್ಥಳೀಯರು

Click to comment

Leave a Reply

Your email address will not be published. Required fields are marked *

Advertisement
Advertisement