ಕೊಡಗು: ಪ್ರವಾಹಕ್ಕೆ ತತ್ತರಿಸಿ ನಿರಾಶಿತ್ರ ಕೇಂದ್ರ ಸೇರಿದ್ದ ಸಂತ್ರಸ್ತರನ್ನು ತಹಶೀಲ್ದಾರ್ ಕೀಳಾಗಿ ಕಾಣುತ್ತಿದ್ದಾರೆ ಎನ್ನುವ ಕಾರಣಕ್ಕೆ ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕುಶಾಲನಗರದ ವಾಲ್ಮೀಕಿ ಭವನದ ಮುಂದೆ ಸಂತ್ರಸ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕುಶಾಲನಗರದ ವಾಲ್ಮೀಕಿ ಭವನದಲ್ಲಿ ನಿರಾಶ್ರಿತ ಕೇಂದ್ರ ಶುರುವಾದ ದಿನದಿಂದಲೂ ಒಂದಿಲ್ಲೊಂದು ಕಾರಣಗಳಿಂದ ಸುದ್ದಿಯಾಗುತ್ತಲೇ ಇದೆ. ಮಂಗಳವಾರ ತಡರಾತ್ರಿಯು ಸಹ ಸಂತ್ರಸ್ತರು ತಹಶೀಲ್ದಾರ್ ಮಹೇಶ್ ವಿರುದ್ಧ ರೊಚ್ಚಿಗೆದ್ದು, ಪತ್ರಿಭಟನೆ ನಡೆಸುತ್ತಿದ್ದರು. ಅಲ್ಲದೇ ನಿರಾಶ್ರಿತ ಕೇಂದ್ರದಲ್ಲಿ ಶೌಚಾಲಯ ವ್ಯವಸ್ಥೆಯಿಲ್ಲ. ಸರಿಯಾಗಿ ಊಟ ನೀಡುತ್ತಿಲ್ಲ ಹಾಗೂ ಎಲ್ಲಾ ಅಧಿಕಾರಿಗಳು ನಮ್ಮನ್ನು ಭಿಕ್ಷುಕರಂತೆ ನೋಡುತ್ತಾರೆ ಎಂದು ಆರೋಪಿಸಿದ್ದರು.
Advertisement
Advertisement
ಈ ವೇಳೆ ತಹಶೀಲ್ದಾರ್ ಮಹೇಶ್‍ರವರು ಮಹಿಳೆಯೊಬ್ಬರ ಮೈಯನ್ನ ಮುಟ್ಟಿದರು ಎಂದು ಆರೋಪಿಸಿ ಅವರ ಮೇಲೆ ಮುತ್ತಿಗೆ ಹಾಕುವ ಯತ್ನ ಮಾಡಿದರು. ಕೂಡಲೇ ಪ್ರತಿಭಟನಾಕಾರರಿಂದ ತಪ್ಪಿಸಿಕೊಂಡು ತಹಶೀಲ್ದಾರ್ ಕೋಣೆಯೊಳಗೆ ಹೋಗಿ ಬಾಗಿಲು ಹಾಕಿಕೊಂಡು, ನಾನು ಏನು ತಪ್ಪು ಮಾಡಿಲ್ಲ ಅಂತ ಕ್ಷಮೆಯಾಚಿಸಿದರು.
Advertisement
ಸುಮಾರು 400 ಜನರು ಇರುವ ನಿರಾಶ್ರಿತ ಕೇಂದ್ರದಲ್ಲಿ ಕೇವಲ ಮೂರೇ ಮೂರು ಶೌಚಾಲಯ. ಶೌಚಾಲಯದ ವ್ಯವಸ್ಥೆ ಸರಿಪಡಿಸಿ ಹಾಗೂ ಊಟವನ್ನು ಸರಿಯಾಗಿ ನೀಡಿ ಎಂದು ಪ್ರಾರಂಭವಾದಗಿನಿಂದಲೂ ಹೇಳುತ್ತಲೆ ಬಂದಿದ್ದರು. ಸಮಸ್ಯೆಗಳನ್ನು ಪರಿಹರಿಸದೇ ಕೀಳಾಗಿ ನೋಡಿದ್ದರಿಂದ ರೊಚ್ಚಿಗೆದ್ದು ಪ್ರತಿಭಟನೆಗೆ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.
Advertisement
ಸಂತ್ರಸ್ತ ಕೇಂದ್ರದಲ್ಲಿ ಪ್ರತಿಭಟನೆ ಜೋರಾದಾಗ ಪೊಲೀಸರು ಮಧ್ಯ ಪ್ರವೇಶಿಸಿದರು. ಈ ವೇಳೆ ಪ್ರತಿಭಟನೆ ವಿಕೋಪಕ್ಕೆ ತಿರುಗುವ ಲಕ್ಷಣ ಗೋಚರಿದ ತಕ್ಷಣ ಜಿಲ್ಲಾಧಿಕಾರಿ ಶ್ರೀವಿದ್ಯಾರವರು ತಡರಾತ್ರಿ 12.15ಕ್ಕೆ ಆಗಮಿಸಿ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿದರು. ಅಲ್ಲದೇ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಿ, ಸರಿಯಾಗಿ ವ್ಯವಸ್ಥೆ ಕೈಗೊಳ್ಳುತ್ತೇನೆ. ಒಂದು ವೇಳೆ ತಹಶೀಲ್ದಾರ್ ವಿರುದ್ಧ ತಪ್ಪು ಕಂಡುಬಂದರೆ ಸೂಕ್ತ ಕ್ರಮ ತೆಗೆದುಕೊಳ್ಳುತ್ತೀನಿ ಎನ್ನುವ ಭರವಸೆ ನೀಡಿದ ಮೇಲೆ ಪ್ರತಿಭಟನಾಕಾರರು ತಮ್ಮ ಹೋರಾಟವನ್ನು ಕೈ ಬಿಟ್ಟರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv