ರಾಯಚೂರು: ಶವ ಹೂಳಲು ಸ್ಥಳ ಇಲ್ಲದ ಕಾರಣ ಶವವನ್ನಿಟ್ಟು ಪ್ರತಿಭಟನೆ ನಡೆಸಿದ ಘಟನೆ ರಾಯಚೂರಿನ ಮಾನ್ವಿ ತಾಲೂಕಿನ ಮಿಟ್ಟೆ ಕ್ಯಾಂಪ್ ಬಳಿ ನಡೆದಿದೆ. ಇಲ್ಲಿನ ಗ್ರಾಮ ಪಂಚಾಯತಿ ಕಚೇರಿ ಮುಂದೆ ಶವ ಇಟ್ಟು ಗ್ರಾಮಸ್ಥರು ಪ್ರತಿಭಟನೆ ಮಾಡಿದ್ದಾರೆ.
ಗ್ರಾಮದ ಹನುಮೇಶ್ ಎಂಬವರು ಗ್ರಾಮದಲ್ಲಿ ಸಾವನ್ನಪ್ಪಿದ್ದು ಶವ ಸಂಸ್ಕಾರಕ್ಕೆ ಸ್ಥಳವಿಲ್ಲದ ಕಾರಣ, ಶವ ಹೂಳದೆ ಗ್ರಾಮಸ್ಥರು ಹೋರಾಟಕ್ಕೆ ಮುಂದಾಗಿದ್ದಾರೆ. ಸರ್ಕಾರದಿಂದ ಸ್ಮಶಾನ ಜಾಗಕ್ಕೆ ಜಮೀನು ಮಂಜೂರಾದರು ಅಧಿಕಾರಿಗಳು ಸ್ಥಳ ಇದುವರೆಗೂ ಗುರುತಿಸಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಗ್ರಾಮದಲ್ಲಿ ಶವ ಸಂಸ್ಕಾರಕ್ಕೆ ತೊಂದರೆಯಾಗುತ್ತಿದೆ ಅಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Advertisement
Advertisement
ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಶವ ಸಂಸ್ಕಾರಕ್ಕೆ ಸ್ಥಳ ಗುರುತಿಸಿಕೊಡುವವರೆಗೂ ಶವವಿಟ್ಟುಕೊಂಡೆ ಹೋರಾಟ ಮುಂದುವರಿಸುವುದಾಗಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಅಧಿಕಾರಿಗಳು ಗ್ರಾಮಸ್ಥರ ಮನವೊಲಿಕೆಗೆ ಮುಂದಾಗಿದ್ದು ಸ್ಮಶಾನಕ್ಕೆ ಜಾಗದ ಭರವಸೆ ನೀಡಿದ್ದಾರೆ.
Advertisement