ಚಿಕ್ಕಬಳ್ಳಾಪುರ: ಗ್ರಾಮದಲ್ಲಿ (Village) ಮೂಲಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ಬೆಂಗಳೂರು (Bengaluru) ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತಿರುಮಗೊಂಡನಹಳ್ಳಿ ಗ್ರಾಮದ ಯುವಕರು ವಿನೂತನವಾಗಿ ಪ್ರತಿಭಟಿಸಿದ್ದಾರೆ.
Advertisement
ಹಾಡೋನಹಳ್ಳಿ ಗ್ರಾಮ ಪಂಚಾಯತ್ ಹಾಗೂ ಗ್ರಾಮದ ಅಭಿವೃದ್ಧಿ ಕಡೆಗಣಿಸಿದ ಜನಪ್ರತಿನಿಧಿಗಳ ವಿರುದ್ಧ ವಿನೂತನ ರೀತಿಯಲ್ಲಿ ಪ್ರತಿಭಟಿಸಿದ್ದು, ಗ್ರಾಮದ ಮುಖ್ಯರಸ್ತೆ ಬದಿಯಲ್ಲಿ ‘ಜನಪ್ರತಿನಿಧಿಗಳೇ ಬದುಕಿದ್ದೀರಾ?, ಅಧಿಕಾರಿಗಳೇ ಇತ್ತ ಗಮನಿಸಿ’ ಎಂಬ ಬರಹದ ಬೃಹತ್ ಫ್ಲೆಕ್ಸ್ (Flex) ಕಟ್ಟಿ, ಅದಕ್ಕೆ ಚಪ್ಪಲಿ ಹಾರ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬೈಕ್ ರೈಡ್‍ಗೆ ಹೋಗಿದ್ದ ಟೆಕ್ಕಿ ಮೇಲೆ 10 ಮಂದಿಯಿಂದ ಗ್ಯಾಂಗ್ ರೇಪ್
Advertisement
Advertisement
ಗ್ರಾಮದಲ್ಲಿ ಕುಡಿಯುವ ನೀರು (Water), ರಸ್ತೆ (Road), ಚರಂಡಿ ಸೇರಿದಂತೆ ಯಾವುದೇ ಮೂಲಸೌಕರ್ಯ ವ್ಯವಸ್ಥೆ ಇಲ್ಲ. ಈ ಹಿಂದೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಗ್ರಾಮ ಪಂಚಾಯತ್ ಅಧಿಕಾರಿಗಳು ಶಾಮೀಲಾಗಿ ಭೌತಿಕವಾಗಿ ಕಾಮಗಾರಿ ನಡೆಸದೇ ದಾಖಲೆಗಳಲ್ಲಿ ತೋರಿಸಿ ಹಣ ಲಪಟಾಯಿಸಿದ್ದಾರೆ. ಇದರಿಂದ ಸರ್ಕಾರಕ್ಕೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾಯಿತಲ್ಲದೇ ಗ್ರಾಮವೂ ಕೂಡ ಅಭಿವೃದ್ಧಿಯಿಂದ ವಂಚಿತವಾಗಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಮದ್ಯದ ಅಮಲಿನಲ್ಲಿ ವಿಷ ಸೇವಿಸಿದ ಪತಿ- ಮನನೊಂದು ಕಂದನನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತ್ನಿ
Advertisement
ಗ್ರಾಮದಲ್ಲಿ ಮೂಲಸೌಕರ್ಯ ಕಲ್ಪಿಸುವಂತೆ ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಹಾಗೂ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಮಾಡಿದ್ದೇವು. ಪಂಚಾಯತ್ ಎದುರು ಪ್ರತಿಭಟನೆ ನಡೆಸಿದ್ದೇವು ಆದರೆ, ಯಾವುದೇ ಪ್ರಯೋಜನವಾಗಿಲ್ಲ. ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ, ಚರಂಡಿ, ರಸ್ತೆ ಅಭಿವೃದ್ಧಿ ಮಾಡಿರುವುದಾಗಿ ಪಂಚಾಯತ್ ವೆಬ್‍ಸೈಟ್ ದಾಖಲೆ ಹೇಳುತ್ತಿದೆ. ಆದರೆ, ಅಂತಹ ಯಾವುದೇ ಕಾಮಗಾರಿ ನಡೆದಿರುವ ಕುರುಹುಗಳೇ ಇಲ್ಲ. ಕಾಮಗಾರಿಯ ನಕಲಿ ದಾಖಲೆ ಸೃಷ್ಟಿಸಿ ಅಕ್ರಮ ಎಸಗಿದ್ದಾರೆ. ಗ್ರಾಮದ ರಸ್ತೆಗಳು ಮಳೆ ಬಂದರೆ ಓಡಾಡಲು ಆಗದಂತಹ ಪರಿಸ್ಥಿತಿಯಲ್ಲಿವೆ. ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೇ ಹಲವು ಸಮಸ್ಯೆ ಎದುರಾಗಿದೆ. ಇದರಿಂದ ಡೆಂಗ್ಯೂ, ಚಿಕನ್ ಗುನ್ಯಾ ಕಾಯಿಲೆಗಳು ಹೆಚ್ಚಾಗುತ್ತಿವೆ. ಕುಡಿಯುವ ನೀರಿನ ಸಮಸ್ಯೆಯಂತೂ ಹೇಳತೀರದಾಗಿದೆ ಎಂದು ಗ್ರಾಮದ ಯುವಕ ಹರ್ಷ ಅಳಲು ತೋಡಿಕೊಂಡಿದ್ದಾರೆ. ಗ್ರಾಮ ಪಂಚಾಯತ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಕೂಡಲೇ ಎಚ್ಚೆತ್ತುಕೊಂಡು ಸಮಸ್ಯೆ ಬಗೆಹರಿಸದಿದ್ದರೆ ರಸ್ತೆ ತಡೆದು ಪ್ರತಿಭಟನೆ ಮಾಡುವುದಾಗಿ ಯುವಕರು ಎಚ್ಚರಿಕೆ ನೀಡಿದ್ದಾರೆ.