ಹುಬ್ಬಳ್ಳಿ: ಕಾಂಗ್ರೆಸ್ ಜನರನ್ನು ಇಷ್ಟು ವರ್ಷ ನರಕದಲ್ಲಿ ಇಟ್ಟಿತ್ತು. ಅದಕ್ಕೆ ಜನ ಅದನ್ನು ತಿರಸ್ಕರಿಸಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ವಾಗ್ದಾಳಿ ನಡೆಸಿದರು.
Advertisement
ಹುಬ್ಬಳ್ಳಿಯಲ್ಲಿ (Hubballi) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‍ನ (Congress) ರಾಜ್ಯಸಭಾ ಸದಸ್ಯ ರಣದೀಪ್ ಸಿಂಗ್ ಸುರ್ಜೇವಾಲ (Randeep Singh Surjewala) ಅವರ ಬಿಜೆಪಿ (BJP) ವಿರುದ್ಧದ ಹೇಳಿಕೆಗೆ ತಿರುಗೇಟು ಕೊಟ್ಟರು. ಕಾಂಗ್ರೆಸ್ ಬೇಜವಾಬ್ದಾರಿ ವಿರೋಧ ಪಕ್ಷವಾಗಿದೆ. ಜನರಿಗೆ ಸರ್ಕಾರದ ವೈಫಲ್ಯ ಹಾಗೂ ತಮ್ಮ ಪಕ್ಷದ ಸಾಧನೆ ತೋರಿಸುವ ಬದಲು, ಸುರ್ಜೇವಾಲ ಈ ರೀತಿ ಮಾತನಾಡುವುದು ಸರಿಯಲ್ಲ. ಅವನಿಗೆ ಕರ್ನಾಟಕದ ಬಗ್ಗೆ ಏನು ಗೊತ್ತಿದೆ ಎಂದು ಏಕವಚನದಲ್ಲಿ ತರಾಟೆಗೆ ತೆಗೆದುಕೊಂಡರು.
Advertisement
Advertisement
ಮೊದಲು ಕಾಂಗ್ರೆಸ್ ತನ್ನ ಒಳ ಜಗಳವನ್ನು ಸರಿಮಾಡಿಕೊಳ್ಳಲಿ. ಆಮೇಲೆ ಕರ್ನಾಟಕದ ಬಗ್ಗೆ ಮಾತಾಡಲಿ. ಜನರಿಗೆ ಯಾರು ರಾಕ್ಷಸರು ಹಾಗೂ ಯಾರು ದೇವತೆಗಳು ಎಂದು ತಿಳಿದಿದೆ. ಕಾಂಗ್ರೆಸ್‍ನಲ್ಲಿ ಅಸುರರ ಪಟ್ಟಿ ಬಹಳ ದೊಡ್ಡದಿದೆ ಎಂದು ಕುಟುಕಿದರು. ಇದನ್ನೂ ಓದಿ: RCB ನಾಯಕಿಯಾಗಿ ಸ್ಮೃತಿ ಮಂದಾನ ಆಯ್ಕೆ – ಕೊಹ್ಲಿ ವಿಶೇಷ ಸಂದೇಶ ಏನು?
Advertisement
ಎಪ್ಪತ್ತು ವರ್ಷಗಳ ಕಾಲ ಆಡಳಿತ ಮಾಡಿದ ಕಾಂಗ್ರೆಸ್‍ನ್ನು ಜನ ಕಿತ್ತು ಒಗೆದಿದ್ದಾರೆ. ಈಗ ಚುನಾವಣೆಗೋಸ್ಕರ ಜನರನ್ನು ಮರಳುಮಾಡುವ ತಂತ್ರ ಬಳಸುತ್ತಿದೆ ಎಂದರು.
ಬಜೆಟ್ ಅನುಷ್ಟಾನಕ್ಕೆ ಕ್ರಮ ಕೈಗೊಳ್ಳಲಾಗುವುದು. ಮಹಾದಾಯಿ (Mahadayi) ವಿಚಾರ ಅಂತಿಮ ಹಂತದಲ್ಲಿದೆ ಎಂದು ತಿಳಿಸಿದರು.
ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ಬಗ್ಗೆ ನಾನು ಮಾತನಾಡುವುದಿಲ್ಲ. ಅವರು ನಿರಂತರವಾಗಿ ಬಣ್ಣ ಬದಲಿಸುವುದು ಜನರಿಗೆ ತಿಳಿದಿದೆ ಎಂದರು. ಇದನ್ನೂ ಓದಿ: ಭಿನ್ನಮತ ಸ್ಫೋಟ – ಬಿಜೆಪಿಗೆ ಮಾಜಿ ಶಾಸಕ ಕಿರಣ್ ಕುಮಾರ್ ಗುಡ್‌ಬೈ
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k