ಇಸ್ಲಾಮಾಬಾದ್: ದೇಶದಲ್ಲಿ ರಾಜಕೀಯ ಮತ್ತು ಆರ್ಥಿಕ ಬಿಕ್ಕಟ್ಟು ತಲೆದೂರಿರುವ ಸಂದರ್ಭದಲ್ಲಿ ಪಾಕಿಸ್ತಾನ (Pakistan) ಪ್ರಧಾನಿ ಶೆಹಬಾಜ್ ಶರೀಫ್ (Shehbaz Sharif) ಅವರ ವರ್ತನೆಗೆ ಭಾರೀ ಟೀಕೆ ವ್ಯಕ್ತವಾಗಿದೆ.
ಇಡೀ ದೇಶವೇ ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿದೆ. ಆಹಾರ ಪದಾರ್ಥಗಳಿಗೆ ಹಾಹಾಕಾರ ಶುರುವಾಗಿದ್ದು, ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಅಲ್ಲದೇ ರಾಜಕೀಯ ಬಿಕ್ಕಟ್ಟು ಕೂಡ ಎದುರಾಗಿದೆ. ಇಂತಹ ಸನ್ನಿವೇಶದಲ್ಲಿ ಪಾಕ್ ಪ್ರಧಾನಿ ಕ್ರಿಕೆಟ್ ವೀಕ್ಷಿಸಿ ಎಂಜಾಯ್ ಮಾಡುತ್ತಿದ್ದಾರೆಂದು ದೇಶದ ಜನತೆ ಕಿಡಿಕಾರಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದಲ್ಲಿ ಮತ್ತೆ ಇಂಧನ ಬೆಲೆ ಏರಿಕೆ – 1 ಲೀಟರ್ ಪೆಟ್ರೋಲ್‌ಗೆ 272 ರೂ.
Another Afridi with such power hitting … ????
— Shehbaz Sharif (@CMShehbaz) March 18, 2023
ʼಪವರ್ ಹಿಟ್ಟಿಂಗ್ ಮಾಡಿದ ಮತ್ತೊಬ್ಬ ಅಫ್ರಿದಿʼ ಎಂದು ಪಾಕಿಸ್ತಾನ ಸೂಪರ್ ಲೀಗ್‌ಗೆ ಸಂಬಂಧಿಸಿದಂತೆ ಶಾಹೀನ್ ಅಫ್ರಿದಿಯನ್ನು ಹಾಡಿಹೊಗಳಿ ಪಾಕ್ ಪ್ರಧಾನಿ ಟ್ವೀಟ್ ಮಾಡಿದ್ದರು. ಇದಕ್ಕೆ ಭಾರೀ ಟೀಕೆ ವ್ಯಕ್ತವಾಗಿದೆ.
Another Afridi with such power hitting … ????
— Shehbaz Sharif (@CMShehbaz) March 18, 2023
ಮತ್ತೊಂದು ಟ್ವೀಟ್‌ನಲ್ಲಿ, ಪಂದ್ಯಾವಳಿಯನ್ನು ಯಶಸ್ವಿಯಾಗಿ ಆಯೋಜಿಸಿದ್ದ ಸ್ಥಳೀಯ ಸರ್ಕಾರ ಮತ್ತು ನಿರ್ವಾಹಕರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಪಾಕ್ ಪ್ರಧಾನಿ ಟ್ವೀಟ್‌ಗೆ ದೇಶದ ಜನತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೊದಲು ದೇಶದಲ್ಲಿ ಉಂಟಾಗಿರುವ ಆರ್ಥಿಕ ಬಿಕ್ಕಟ್ಟನ್ನು ಸರಿಪಡಿಸುವ ಕಡೆ ಗಮನಕೊಡಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಕೋರ್ಟ್‌ನತ್ತ ತೆರಳಿದ ಪಾಕ್ ಮಾಜಿ ಪ್ರಧಾನಿ – ಇಮ್ರಾನ್ ಮನೆಗೆ ನುಗ್ಗಿದ ಪೊಲೀಸರು
ಪ್ರಧಾನಿ ಟ್ವೀಟ್‌ಗೆ ಪ್ರತಿಕ್ರಿಯೆಯಾಗಿ, ಮಿಸ್ಟರ್ ಪ್ರಧಾನ ಮಂತ್ರಿಗಳು ಕ್ರಿಕೆಟ್ ನೋಡುವುದರಲ್ಲಿ ನಿರತರಾಗಿದ್ದಾರೆ. ಏಕೆಂದರೆ ಪಾಕಿಸ್ತಾನವು ಅತ್ಯಧಿಕ ಹಣದುಬ್ಬರ ದರವನ್ನು ದಾಖಲಿಸಿದೆ. ಇದುವರೆಗೆ IMFನೊಂದಿಗೆ ಯಾವುದೇ ಒಪ್ಪಂದ ಸಾಧ್ಯವಾಗಿಲ್ಲ. ತಾಯ್ನಾಡಿಗಾಗಿ ಕಳೆದ 11 ತಿಂಗಳಲ್ಲಿ ನಿಮ್ಮ ಉತ್ತಮ ಸೇವೆಗಳಿಗೆ ತುಂಬಾ ಧನ್ಯವಾದಗಳು ಎಂದು ಮತ್ತೊಬ್ಬರು ಕಾಲೆಳೆದಿದ್ದಾರೆ.