ಕಾರವಾರ: ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕೆ ಜಾಲತಾಣಿಗರು ಹೆಗ್ಡೆ ವಿರುದ್ಧ ಕಿಡಿಕಾರುತ್ತಿದ್ದಾರೆ.
Advertisement
ಕಳೆದ ಎರಡು ದಿನಗಳ ಹಿಂದೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ತಂದೆ ಮುಸಲ್ಮಾನ ತಾಯಿ ಕ್ರಿಶ್ಚಿಯನ್ ರಾಹುಲ್ ಗಾಂಧಿ ಬ್ರಾಹ್ಮಣ ಹೇಗಾದ ಎಂದು ಹೆಗ್ಡೆ ಪ್ರಶ್ನೆ ಮಾಡಿದ್ದರು. ಅಲ್ಲದೆ ರಾಜೀವ್ ಗಾಂಧಿ ಹತ್ಯೆ ಸಂದರ್ಭದಲ್ಲಿ ರಾಹುಲ್ ಗಾಂಧಿ ಡಿಎನ್‍ಎ ಪರೀಕ್ಷೆ ಮಾಡಿಸಿರಲಿಲ್ಲ. ಬದಲಾಗಿ ಪ್ರಿಯಾಂಕ ಗಾಂಧಿ ಡಿಎನ್‍ಎ ಪರೀಕ್ಷೆಯನ್ನು ಸೋನಿಯಾ ಗಾಂಧಿ ಮಾಡಿಸಿದ್ದರು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ವಿಷಯವನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Advertisement
Advertisement
ಅನಂತ್ ಕುಮಾರ್ ಡಿಎನ್‍ಎ ಪರೀಕ್ಷೆ ಮಾಡಿಕೊಳ್ಳಲಿ ಎಂದು ಕಿಡಿಕಾರಿ ಪೋಸ್ಟ್ ಗಳನ್ನು ಮಾಡಿದ್ದಲ್ಲದೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ: ಮುಸಲ್ಮಾನನ ಮಗ ಗಾಂಧಿ ಹೇಗಾದ ಎನ್ನುವ ಪ್ರಶ್ನೆಗೆ ಕಾಂಗ್ರೆಸ್ ಉತ್ತರ ಕೊಡಲಿ: ಅನಂತಕುಮಾರ್ ಹೆಗ್ಡೆ
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv