Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್ಸಿನ ‘ವೋಟ್‌ ಚೋರಿ’ ಸುಳ್ಳು ಸಂಕಥನಕ್ಕೆ ಕಪಾಳಮೋಕ್ಷ: ಹೆಚ್.ಡಿ.ಕುಮಾರಸ್ವಾಮಿ ಟಾಂಗ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕಾಂಗ್ರೆಸ್ಸಿನ ‘ವೋಟ್‌ ಚೋರಿ’ ಸುಳ್ಳು ಸಂಕಥನಕ್ಕೆ ಕಪಾಳಮೋಕ್ಷ: ಹೆಚ್.ಡಿ.ಕುಮಾರಸ್ವಾಮಿ ಟಾಂಗ್‌

Latest

ಕಾಂಗ್ರೆಸ್ಸಿನ ‘ವೋಟ್‌ ಚೋರಿ’ ಸುಳ್ಳು ಸಂಕಥನಕ್ಕೆ ಕಪಾಳಮೋಕ್ಷ: ಹೆಚ್.ಡಿ.ಕುಮಾರಸ್ವಾಮಿ ಟಾಂಗ್‌

Public TV
Last updated: November 14, 2025 6:36 pm
Public TV
Share
3 Min Read
HD Kumaraswamy 1
SHARE

– ಬಿಹಾರ ಫಲಿತಾಂಶ ಐತಿಹಾಸಿಕ; ಮೋದಿ ಅವರ ವಿಕಸಿತ ಭಾರತ ಸಂಕಲ್ಪಕ್ಕೆ ಸಂದ ಜಯ ಎಂದ ಕೇಂದ್ರ ಸಚಿವ
– ಕರ್ನಾಟಕದಲ್ಲಿ ಬಿಹಾರ ಫಲಿತಾಂಶ ಮರುಕಳಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಹೆಚ್ಡಿಕೆ

ನವದೆಹಲಿ: ವೋಟ್‌ ಚೋರಿ ಎನ್ನುವ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ ಪಕ್ಷಕ್ಕೆ ಬಿಹಾರ ಮತದಾರರು ತಕ್ಕಪಾಠ ಕಲಿಸಿದ್ದಾರೆ ಎಂದು ಕೆಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಕಟುವಾಗಿ ಟೀಕಿಸಿದ್ದಾರೆ.

ಇಲ್ಲಿನ ತಮ್ಮ ಗೃಹ ಕಚೇರಿಯಲ್ಲಿ ಶುಕ್ರವಾರ ಸಂಜೆ ಬಿಹಾರ ಫಲಿತಾಂಶದ ಬಗ್ಗೆ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು ಸಚಿವರು, ಕಾಂಗ್ರೆಸ್‌ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ನಂಬಿಕೆ ಕಳೆದುಕೊಂಡು ಸುಳ್ಳಿನ ಕಥೆಗಳನ್ನೇ ಸೃಷ್ಟಿಸಿ ಅಪಪ್ರಚಾರ ನಡೆಸಿತು. ಬಿಹಾರದ ಪ್ರಭುದ್ಧ ಮತದಾರರು ಇದಕ್ಕೆ ತಕ್ಕ ಪ್ರತಿಕ್ರಿಯೆ ನೀಡಿ ಆ ಪಕ್ಷಕ್ಕೆ ಕಪಾಳಮೋಕ್ಷ ಮಾಡಿದ್ದಾರೆಂದು ಹೇಳಿದರು. ಇದನ್ನೂ ಓದಿ: 2020 ರಲ್ಲಿ 1, ಈ ಬಾರಿ 20+ ಕ್ಷೇತ್ರಗಳಲ್ಲಿ ಜಯ – ಯುವ ನಾಯಕ, ಮೋದಿಯ ಹನುಮ ಚಿರಾಗ್‌ ಕಮಾಲ್‌!

ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿಪರ ಆಡಳಿತ ಹಾಗೂ 2047ಕ್ಕೆ ವಿಕಸಿತ ಭಾರತ ಸಾಕಾರ ಆಗಬೇಕೆನ್ನುವ ಅವರ ದೃಢ ಸಂಕಲ್ಪಕ್ಕೆ ಬಿಹಾರದ ಜನತೆ ಅಭೂತಪೂರ್ವ ಬೆಂಬಲ ನೀಡಿದ್ದಾರೆ. ಇದಕ್ಕಾಗಿ ನಾನು ಅಲ್ಲಿನ ಜನರನ್ನು ಅಭಿನಂದಿಸುತ್ತೇನೆ ಎಂದರು.

rahul gandhi press meet

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಬಲಿಷ್ಠ ಎನ್‌ಡಿಎ ಮೈತ್ರಿಕೂಟವು ಸ್ವಾತಂತ್ರ್ಯೋತ್ತರ ಭಾರತದಲ್ಲಿಯೇ ಹಿಂದೆಂದೂ ಕಂಡಿರದ ದಾಖಲೆ ವಿಜಯವನ್ನು ಸಾಧಿಸಿದೆ. ಮೋದಿ ಅವರೊಂದಿಗೆ ಮೈತ್ರಿಕೂಟದ ಜಯಕ್ಕಾಗಿ ಅವಿರತವಾಗಿ ದುಡಿಮೆ ಮಾಡಿದ ಬಿಹಾರದ ಮುಖ್ಯಮಂತ್ರಿ ನಿತೀಶ್‌ ಕುಮಾರ್, ಗೃಹ ಸಚಿವ ಅಮಿತ್‌ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಸಚಿವರಾದ ಚಿರಾಗ್‌ ಪಾಸ್ವಾನ್‌ ಹಾಗೂ ಜಿತಿನ್‌ ಕುಮಾರ್‌ ಮಾಂಜಿ ಅವರನ್ನು ನಾನು ಅಭಿನಂಧಿಸುತ್ತೇನೆ ಎಂದು ಕುಮಾರಸ್ವಾಮಿ ತಿಳಿಸಿದರು.

ಕರ್ನಾಟಕದಲ್ಲಿ ಬಿಹಾರದ ಫಲಿತಾಂಶ ಮರುಕಳಿಸಲಿದೆ
ಬಿಹಾರದಲ್ಲಿ ಎನ್‌ಡಿಎ ಪರ ಬಂದಿರುವ ಈ ಐತಿಹಾಸಿಕ ವಿಜಯವೂ ಮುಂಬರುವ ಕರ್ನಾಟಕದ ವಿಧಾನಸಭೆ ಚುನಾವಣೆ ಮೇಲೆಯೂ ಗಾಢ ಪ್ರಭಾವ ಬೀರಲಿದೆ. ಜೆಡಿಎಸ್‌-ಬಿಜೆಪಿ ಮೈತ್ರಿಕೂಟವೂ ಮುಂದಿನ ಚುನಾವಣೆಯಲ್ಲಿ ಉತ್ತಮ ಬಹುಮತದೊಂದಿಗೆ ಸರ್ಕಾರ ಮಾಡುವುದು ಶತಃಸಿದ್ಧ ಎಂದು ಭವಿಷ್ಯ ನುಡಿದರು. ಇದನ್ನೂ ಓದಿ: ಉತ್ತಮ ಆಡಳಿತ ಗೆದ್ದಿದೆ, ಅಭಿವೃದ್ಧಿ ಗೆದ್ದಿದೆ, ಸಾಮಾಜಿಕ ನ್ಯಾಯ ಗೆದ್ದಿದೆ – ಪ್ರಧಾನಿ ಮೋದಿ ಹರ್ಷ

ಈಗಾಗಲೇ ರಾಜ್ಯ ಕಾಂಗ್ರೆಸ್‌ ಸರ್ಕಾರ ಆಡಳಿತ ವಿರೋಧಿ ಅಲೆಯಿಂದ ನರಳುತ್ತಿದೆ. ಕಳೆದ ಎರಡೂವರೆ ವರ್ಷದಿಂದ ನಾಯಕತ್ವ ಬದಲಿಸುವುದರಲ್ಲೇ ಕಾಂಗ್ರೆಸ್ ಕಾಲಹರಣ ಮಾಡಿದೆ. ಜನರು ಭ್ರಮನಿರಸಗೊಂಡಿದ್ದು, ಬಹಳ ನಿರೀಕ್ಷೆ ಇಟ್ಟುಕೊಂಡು 136 ಸ್ಥಾನ ಕೊಟ್ಟಿದ್ದಕ್ಕೆ ನಿರಾಶರಾಗಿದ್ದಾರೆ. ರಾಜ್ಯದ ಜನರು ಯಾವಾಗ ಚುನಾವಣೆ ಬರುತ್ತದೋ ಎಂದು ನೋಡುತ್ತಿದ್ದಾರೆ. ಕಾಂಗ್ರೆಸ್ಸಿಗೆ ಪಾಠ ಕಲಿಸಲು ಮಾನಸಿಕವಾಗಿ ಸಿದ್ಧವಾಗಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ರಾಜ್ಯದಲ್ಲಿ ಎನ್‌ಡಿಎ ಮೈತ್ರಿಕೂಟ ಬಲಿಷ್ಠವಾಗಿದೆ. ಬಿಜೆಪಿ-ಜೆಡಿಎಸ್ ನಾಯಕರೆಲ್ಲರೂ ಒಂದೇ ವೇದಿಕೆಯಲ್ಲಿ ಹೋಗುತ್ತಿದ್ದೇವೆ. ಬಿಹಾರದಂತೆಯೇ ಕರ್ನಾಟಕದಲ್ಲಿಯೂ ದಾಖಲೆಯ ಫಲಿತಾಂಶ ಪಡೆಯಲು ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಕೆಲಸ ಮಾಡುತ್ತೇವೆ. ಬಿಹಾರದ ದಾಖಲೆಯನ್ನು ಮುರಿಯುವ ರೀತಿಯಲ್ಲಿ ಕೆಲಸ ಮಾಡುತ್ತೇವೆ ಎಂದು ಕೇಂದ್ರ ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.

ಮತ ಚೋರಿ ಭಜನೆಯನ್ನು ನಿಲ್ಲಿಸಿ ಎಂದು ಬಿಹಾರದ ಜನ ಕಾಂಗ್ರೆಸ್ಸಿಗೆ ಹೇಳಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಇವರು 136 ಸೀಟು ಗೆಲ್ಲುತ್ತೇವೆ ಎಂದು ಹೇಳಿದ್ದರು. ಅಷ್ಟು ಕರಾರುವಕ್ಕಾಗಿ ಹೇಳಲು ಇವರೇನು ತ್ರಿಕಾಲ ಜ್ಞಾನಿಗಳಾ? ಇವರೇನು ಚುನಾವಣಾ ಆಯೋಗದ ಸಹಾಯ ಪಡೆದು ಗೆದ್ದಿದ್ದರಾ? ಫಲಿತಾಂಶ ಬರುವುದಕ್ಕೆ ಮೊದಲು ಕೆಪಿಸಿಸಿ ಅಧ್ಯಕ್ಷರು ಹೇಳಿದ್ದರಲ್ಲಾ, ಅದರ ಅರ್ಥವೇನು? ಇನ್ನಾದರೂ ಕಾಂಗ್ರೆಸ್‌ ನಾಯಕರು ದುರಾಹಂಕಾರ ಮಾತುಗಳನ್ನು ನಿಲ್ಲಿಸುವುದು ಒಳ್ಳೆಯದು ಎಂದು ಕುಮಾರಸ್ವಾಮಿ ಹೇಳಿದರು.

TAGGED:Bihar Resultscongressh d kumaraswamyndaVote Choriಎನ್‍ಡಿಎಕಾಂಗ್ರೆಸ್ಬಿಹಾರ ಫಲಿತಾಂಶವೋಟ್‌ ಚೋರಿಹೆಚ್‌.ಡಿ.ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Kerala Blast
Latest

ಕೇರಳ | ತ್ರಿಶೂರ್ ಪೂರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಸ್ಥಳದಲ್ಲಿ ಭಾರೀ ಸ್ಫೋಟ – 13 ಮಂದಿ ಸಾವು

Public TV
By Public TV
2 minutes ago
Delhi NCR
Latest

ದೆಹಲಿ-NCR ನಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು – ಪಾಕ್‌ ಮೂಲದ ಇಬ್ಬರು ಶಂಕಿತ ಉಗ್ರರ ಬಂಧನ

Public TV
By Public TV
38 minutes ago
Mallikarjun Kharge Narendra Modi
Latest

ಮೋದಿ ಒಬ್ಬ ಭಯೋತ್ಪಾದಕ – ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ

Public TV
By Public TV
55 minutes ago
ATS Raid 2 Arrested
Latest

ಗುಜರಾತ್‌ ATS ದಾಳಿ: ಘಜ್ವಾ-ಎ-ಹಿಂದ್ ಸಂಚು ಪ್ರಕರಣದಲ್ಲಿ ಇಬ್ಬರ ಬಂಧನ

Public TV
By Public TV
1 hour ago
KN RAJANNA
Bengaluru City

ಸಿಎಂಗೆ ಯಾರೋ ಮಾಟ ಮಂತ್ರ ಮಾಡಿಸಿರಬಹುದು, ಜನ್ರೂ ಮಾತಾಡಿಕೊಳ್ತಿದ್ದಾರೆ: ರಾಜಣ್ಣ

Public TV
By Public TV
2 hours ago
Pahalgam Terror Attack 2 1
Latest

ಪಹಲ್ಗಾಮ್‌ ದಾಳಿಗೆ 1 ವರ್ಷ; ಮಾಸದ ಗಾಯ, ನಿಲ್ಲದ ಕಣ್ಣೀರು – ‘ಸಿಂಧೂರ’ ಸಾಂತ್ವನ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?