Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೈಲಹೊಂಗಲದಲ್ಲಿ ಕುಡಿಯೋ ನೀರಿಗೆ ಹಾಹಾಕಾರ – ಒಂದು ಕೊಡ ನೀರಿಗೆ ಗುಡ್ಡ ಹತ್ತಿ ಇಳಿಯಬೇಕು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಬೈಲಹೊಂಗಲದಲ್ಲಿ ಕುಡಿಯೋ ನೀರಿಗೆ ಹಾಹಾಕಾರ – ಒಂದು ಕೊಡ ನೀರಿಗೆ ಗುಡ್ಡ ಹತ್ತಿ ಇಳಿಯಬೇಕು!

Belgaum

ಬೈಲಹೊಂಗಲದಲ್ಲಿ ಕುಡಿಯೋ ನೀರಿಗೆ ಹಾಹಾಕಾರ – ಒಂದು ಕೊಡ ನೀರಿಗೆ ಗುಡ್ಡ ಹತ್ತಿ ಇಳಿಯಬೇಕು!

Public TV
Last updated: May 7, 2019 7:29 am
Public TV
Share
2 Min Read
BLG WATER copy
SHARE

ಬೆಳಗಾವಿ: ತಮ್ಮ ಕಷ್ಟಕ್ಕೆ ಅನುಕೂಲ, ತಮ್ಮ ಗ್ರಾಮದ ಅಭಿವೃದ್ಧಿ ಜೊತೆಗೆ ಮೂಲಭೂತ ಸೌಕರ್ಯಗಳನ್ನ ಒದಗಿಸಿಕೊಡುತ್ತಾರೆ ಎಂದು ಜಿಲ್ಲೆಯ ಗ್ರ್ರಾಮದ ಜನರು ಅವರನ್ನೆಲ್ಲಾ ಚುನಾಯಿಸಿ ಕಳುಹಿಸಿದ್ದರು. ಹೀಗೆ ಆಯ್ಕೆಯಾದ ಅವರು ಜನ ಸೇವೆ ಮರೆತು ಅಧಿಕಾರದ ದುರ್ಬಳಕೆ ಮಾಡಿಕೊಳ್ಳಲು ಆರಂಭಿಸಿರುವುದು ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೇಶನೂರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

bldg 3

ಹೌದು. ಒಂದು ಕಡೆ ಬಿರು ಬೇಸಿಗೆಯ ಎಫೆಕ್ಟ್. ಇನ್ನೊಂದು ಕಡೆ ನೀರಿಗಾಗಿ ಹಾಹಾಕಾರ. ಕಲ್ಲಿನ ಗುಡ್ದದ ಕೆಳಭಾಗದಲ್ಲಿರುವ ಈ ಗ್ರಾಮ ಹಲವು ದಶಕಗಳಿಂದ ನೀರಿನ ಸಮಸ್ಯೆಯನ್ನು ಎದುರಿಸುತ್ತಿದೆ. ಇದನ್ನ ಮನಗಂಡ ಸರ್ಕಾರ 96 ಲಕ್ಷ ವೆಚ್ಚದಲ್ಲಿ ಎರಡು ದೊಡ್ಡ ಓವರ್ ಹೆಡ್ ಟ್ಯಾಂಕ್ ನಿರ್ಮಾಣ ಮಾಡಿದೆ. ಆರಂಭದಲ್ಲಿ ಗ್ರಾಮಸ್ಥರಿಗೆ ನೀರು ಕೂಡ ಸಿಕ್ಕಿತ್ತು. ಆದರೆ ಕ್ರಮೇಣ ಗುಡ್ಡದಲ್ಲಿದ್ದ ಬೋರ್ ವೆಲ್ ಬತ್ತಿ ಹೋಗಿ ಗ್ರಾಮಸ್ಥರು ಮತ್ತೆ ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

BLG 2

ಹತ್ತು ಸಾವಿರ ಜನಸಂಖ್ಯೆ ಇರುವ ಈ ಗ್ರಾಮದಲ್ಲಿ 23 ಗ್ರಾಮ ಪಂಚಾಯಿತಿ ಸದಸ್ಯರಿದ್ದಾರೆ. ನೀರಿನ ಸಮಸ್ಯೆಯನ್ನ ಬಗೆ ಹರಿಸಬೇಕಿದ್ದ ಸದಸ್ಯರುಗಳು ಇರೋ ಒಂದು ಬೋರ್ ವೆಲ್ ನೀರನ್ನ ತಮ್ಮ ತಮ್ಮ ಮನೆಗಳಿಗೆ ಪೈಪ್‍ಲೈನ್ ಮಾಡಿಸಿಕೊಂಡು ನೀರು ಬಿಡಿಸಿಕೊಳ್ಳುತ್ತಾ ನೆಮ್ಮದಿಯಿಂದಿದ್ದಾರೆ. ಇತ್ತ ತಾವೇ ಆಯ್ಕೆ ಮಾಡಿ ಕಳುಹಿಸಿರುವ ಗ್ರಾಮ ಪಂಚಾಯ್ತಿ ಸದಸ್ಯರುಗಳು ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಸ್ಥಳೀಯ ವೈದ್ಯರಾದ ಡಾ. ಯೂಸುಫ್ ಕಿಡಿಕಾರಿದ್ದಾರೆ.

blg 4

ಗ್ರಾಮದ ಮಧ್ಯದಲ್ಲಿ ಒಂದು ಬೋರವೆಲ್ ಇದ್ದು ಅದರಿಂದ ನೀರು ಇಡೀ ಗ್ರಾಮಕ್ಕೆ ಬಿಡಲಾಗುತ್ತಿದೆ. ಆದರೆ ಸಣ್ಣ ಪ್ರಮಾಣದಲ್ಲಿ ನೀರು ಬರುತ್ತಿದ್ದು, ಕೊಡ ತುಂಬಲು ಗಂಟೆ ಗಟ್ಟಲೆ ಕಾಯಬೇಕು. ಕಾರ್ಮಿಕರು ತಮ್ಮ ಕೂಲಿ ಕೆಲಸ ಬಿಟ್ಟು ನಲ್ಲಿ ಮುಂದೆ ಕಾಯಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಇದನ್ನೂ ಓದಿ: ‘ಜಲಯುದ್ಧ’ ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ಜಿಪಂ ಸಿಇಓ ಸ್ಥಳಕ್ಕೆ ದಿಢೀರ್ ಭೇಟಿ

blg 5

ಗುಡ್ಡದ ಮೇಲೆ ಮನೆ ಇರುವವರ ಪರಿಸ್ಥಿತಿ ಇನ್ನೂ ದಾರುಣ. ಒಂದು ಕಿಲೋಮೀಟರ್‍ನಷ್ಟು ದೂರ ನಡೆದು ಹೋಗಿ ನೀರು ತುಂಬಿಕೊಂಡು ಕೊಡ ಹೊತ್ತು ಮತ್ತೆ ಮೇಲಕ್ಕೆ ಹತ್ತಬೇಕು. ರಸ್ತೆ ಕೂಡ ಸರಿಯಾಗಿ ಇಲ್ಲದ ಕಾರಣ ಎಲ್ಲೆಂದರಲ್ಲಿ ಜನ ಬೀಳೋದು ಸಾಮಾನ್ಯವಾಗಿದೆ. ಹೀಗಿದ್ದರೂ ಮಹಿಳೆಯರು ಮಕ್ಕಳು ಎರಡೆರಡು ಕೊಡ ಹೊತ್ತು ಗುಡ್ಡದ ಮೇಲಿರುವ ಮನೆಯತ್ತ ಸಾಗುತ್ತಾರೆ. ಈ ಬಗ್ಗೆ ಹಲವು ಬಾರಿ ಜಿಲ್ಲಾಡಳಿತಕ್ಕೆ ಮನವಿ ಮಾಡಿಕೊಂಡರೂ ಯಾವುದೇ ಪ್ರಯೋಜನವಾಗಿಲ್ಲ. ಕೆಲವೊಮ್ಮೆ ಒಳಚರಂಡಿ ನೀರು ಕೂಡ ಕುಡಿಯುವ ನೀರಿನಲ್ಲಿ ಮಿಕ್ಸ್ ಆಗಿ ಗ್ರಾಮಸ್ಥರು ಕಾಯಿಲೆ ಬೀಳುತ್ತಿರುವುದು ಕೂಡ ಕಂಡಬಂದಿದೆ ಎಂದು ಗ್ರಾಮ ಪಂಚಾಯ್ತಿ ಮಾಜಿ ಉಪಾಧ್ಯಕ್ಷೆ ಗೌರಮ್ಮ ದೂರಿದ್ದಾರೆ.

blg 6

ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಇದ್ದು ಇಲ್ಲದಂತಾಗಿದೆ. ಅದನ್ನ ಬಳಕೆ ಮಾಡದೇ ಕೀ ಹಾಕಿ ಹಾಗೇ ಇಟ್ಟಿದ್ದರಿಂದ ಯಂತ್ರಗಳು ಕೂಡ ಹಾಳಾಗುತ್ತಿವೆ. ಜನರ ಸಮಸ್ಯೆಗಳನ್ನ ಆಲಿಸಿ ಪರಿಹರಿಸಬೇಕಿದ್ದ ಜನಪ್ರತಿನಿಧಿಗಳೇ ಇಂದು ತಮ್ಮ ಅಧಿಕಾರ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಇತ್ತ ಜಿಲ್ಲಾಡಳಿತ ಕೂಡ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. ಇನ್ನಾದರೂ ಜಿಲ್ಲಾಡಳಿತ ಎಚ್ಚೆತ್ತುಕೊಂಡು ಜನರಿಗೆ ನೀರು ಕೊಡಿಸುವ ಕೆಲಸ ಮಾಡಬೇಕಿದೆ.

BLG 1

TAGGED:bailahongalabelagaviElection. public tvPublic TVwaterನೀರುಪಬ್ಲಿಕ್ ಟಿವಿಬೆಳಗಾವಿಬೈಲ ಹೊಂಗಲ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Wild elephant attacks three ETF staff in Hassan Beluru
Districts

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
31 minutes ago
Donald Trump Angry
Latest

ಭಾರತ, ಚೀನಾ ನರಕದ ಕೂಪಗಳು| ಲ್ಯಾಪ್‌ಟಾಪ್ ಹೊಂದಿರುವ ದರೋಡೆಕೋರರು: ಟ್ರಂಪ್‌ ಕೆಂಡಾಮಂಡಲ

Public TV
By Public TV
32 minutes ago
Arvind Kejriwal 4
Court

ಕೋರ್ಟ್‌ ವಿಚಾರಣೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಶೇರ್‌ – ಅರವಿಂದ್ ಕೇಜ್ರಿವಾಲ್‌ಗೆ ನೋಟಿಸ್

Public TV
By Public TV
32 minutes ago
PETROL
Latest

ಪೆಟ್ರೋಲ್, ಡೀಸೆಲ್ ದರ ಏರಿಕೆಯ ಚಿಂತನೆ ಇಲ್ಲ – ವದಂತಿಗಳಿಗೆ ಬ್ರೇಕ್ ಹಾಕಿದ ಕೇಂದ್ರ ಸರ್ಕಾರ

Public TV
By Public TV
52 minutes ago
bad touch for young women 2 arrested in bengaluru
Bengaluru City

ಬೈಕ್‌ಲ್ಲಿ ಬಂದು ಯುವತಿಯರಿಗೆ ಬ್ಯಾಡ್ ಟಚ್ – ಬೀದಿ ಕಾಮಣ್ಣರು ಅಂದರ್‌

Public TV
By Public TV
1 hour ago
thaad
Latest

ಅಮೆರಿಕ ಬಳಿಯಿದ್ದ 50% ಕ್ಷಿಪಣಿಗಳು ಖಾಲಿ – ಯುದ್ಧ ಮುಂದುವರಿದರೆ ʻದೊಡಣ್ಣʼನಿಗೆ ಆಪತ್ತು!

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?