ಬೆಂಗಳೂರು: ವಿಧಾನಸಭಾ ಕಲಾಪ ನಡೆಯುತ್ತಿದ್ದ ವೇಳೆಯಲ್ಲೇ ಕಾಂಗ್ರೆಸ್ ಮೇಲೆ ಸಾಕಷ್ಟು ಅಪಪ್ರಚಾರ ನಡೆಸಲಾಗಿತ್ತು. ಜನರು ಇದಕ್ಕೆ ಸರಿಯಾದ ಉತ್ತರ ನೀಡಿದ್ದಾರೆ. ಜನ ಯಾವುದಕ್ಕೂ ಕಿವಿಗೊಡದೆ ಕಾಂಗ್ರೆಸ್‍ಗೆ ಮತಹಾಕಿದ್ದಾರೆ. ಒಟ್ಟಿನಲ್ಲಿ ಸಿದ್ದರಾಮಯ್ಯ ಸರ್ಕಾರದ ಅಭಿವೃದ್ಧಿ ಗೆ ಮತದಾರರು ಮಣೆ ಹಾಕಿದ್ದಾರೆ ಅಂತಾ ಸಚಿವ ಆಂಜನೇಯ ಹೇಳಿದ್ದಾರೆ.
Advertisement
ಅವರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಂಜನಗೂಡು, ಗುಂಡ್ಲುಪೇಟೆ ಮತದಾರರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪಚುನಾವಣೆಯ ಫಲಿತಾಂಶ ಇಂದು ಹೊರಬಿದ್ದಿದ್ದು, ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳನ್ನ ಜನರು ಒಪ್ಪಿ ಕಾಂಗ್ರೆಸ್ ಗೆಲ್ಲಿಸಿದ್ದಾರೆ. ದೇಶ ಕಟ್ಟಿದ್ದು, ಬೆಳೆಸಿದ್ದು ಕಾಂಗ್ರೆಸ್ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಮುಕ್ತ ಮಾಡಲು ಸಾಧ್ಯವಿಲ್ಲ. ಬಿಜೆಪಿಯವರು ಈ ಫಲಿತಾಂಶದಿಂದ ಇದನ್ನ ಅರ್ಥ ಮಾಡಿಕೊಳ್ಳಬೇಕು ಅಂತಾ ಹೇಳಿದ್ರು.
Advertisement
Advertisement
ಸಂಭ್ರಮಾಚರಣೆ: ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು ಸಿಎಂ ಮನೆ ಮುಂದೆ ಸಿಹಿ ಹಂಚಿ ಸಂಭ್ರಮಿಸಿದ್ರು. ಅಲ್ಲದೇ ಕಾವೇರಿ ನಿವಾಸದ ಮುಂದೆ ಪಟಾಕಿ ಸಿಡಿಸಿ ಗೆಲುವನ್ನು ಆಚರಿಸಲು ಮುಂದಾದಗ ಪೊಲೀಸರು ಅದಕ್ಕೆ ಅವಕಾಶ ನೀಡಲಿಲ್ಲ. ಹೀಗಾಗಿ ಘೋಷಣೆ ಕೂಗುವ ಮೂಲಕ ಸಂತಸ ವ್ಯಕ್ತಪಡಿಸಿದ್ರು.