ಮಡಿಕೇರಿ: ಕಾಂಗ್ರೆಸ್ ಸರ್ಕಾರ (Congress Government) ವಿಧಾನಸಭೆ ಚುನಾವಣೆ ವೇಳೆ ಜನರಿಗೆ ನೀಡಿದ್ದ ಉಚಿತ ಕೊಡುಗೆಗಳ ಭರವಸೆಗಳನ್ನ ಈಡೇರಿಸುವುದು ನಿಚ್ಚಳವಾಗಿದೆ. ಆದ್ರೆ ಆ ಕೊಡುಗೆಗಳನ್ನ ಬಡವರಿಗೆ ಮಾತ್ರ ಸೀಮಿತಗೊಳಿಸುವ ಎಲ್ಲ ಸಾಧ್ಯತೆ ಕಂಡುಬರುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಈ ಉಚಿತ ಕೊಡುಗೆಗಳ ಲಾಭ ಪಡೆಯಲು ಉತ್ಸುಕರಾಗಿರುವ ಜನರು, ಬಿಪಿಎಲ್ ಕಾರ್ಡ್ (BPL Card) ಮಾಡಿಸಿಕೊಳ್ಳಲು ಮುಗಿಬೀಳುತ್ತಿದ್ದಾರೆ.
ಇದರಿಂದ ಬಿಪಿಎಲ್ ಕಾರ್ಡ್‌ಗೆ ಮುಗಿಬಿದ್ದ ಜನರಿಗೆ ಇದೀಗ ಅರ್ಜಿ ಸ್ವೀಕಾರವನ್ನೇ ಅಹಾರ ಇಲಾಖೆ ಸ್ಥಗಿತಗೊಳಿಸಿದೆ. ಇದರಿಂದ ಕಾಂಗ್ರೆಸ್ ಪಕ್ಷವನ್ನು ನಂಬಿಕೆಟ್ಟವು ಅನ್ನೋ ಅನುಮಾನ ಜನರಲ್ಲಿ ಕಾಡತೋಡಗಿದೆ. ಇದನ್ನೂ ಓದಿ: ಕೊನೆಗೂ ಡಿಕೆಶಿಗೆ ಸಿಕ್ತು ಅದೃಷ್ಟದ ಮನೆ – ಕಾವೇರಿ ನಿವಾಸಕ್ಕೆ ಸಿಎಂ ಶಿಫ್ಟ್ – ಯಾರಿಗೆ ಯಾವ ಮನೆ?
ಕಾಂಗ್ರೆಸ್ ಪಕ್ಷ ಅಧಿಕಾರ ಬಂದ ಕೂಡಲೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಪ್ರತಿ ಮನೆಗೂ 200 ಯೂನಿಟ್ ವಿದ್ಯುತ್ ಉಚಿತ, ಮನೆಯ ಯಜಮಾನಿಗೆ ಪ್ರತಿ ತಿಂಗಳು 2,000 ರೂ, ನಿರುದ್ಯೋಗಿ ಪದವೀಧರರಿಗೆ ನಿರುದ್ಯೋಗ ಭತ್ಯೆ, ಕುಟುಂಬದ ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿ ಉಚಿತ ನೀಡುವುದಾಗಿ 5 ಗ್ಯಾರಂಟಿಗಳನ್ನ ಕಾಂಗ್ರೆಸ್ ಘೋಷಣೆ ಮಾಡಿದೆ. ಈಗಾಗಲೇ ಮೊದಲ ಕ್ಯಾಬಿನೆಟ್ ಸಭೆಯಲ್ಲೇ ಗ್ಯಾರಂಟಿಗಳಿಗೆ ತಾತ್ವಿಕ ಒಪ್ಪಿಗೆ ನೀಡಿದ್ದು, ಮುಂದಿನ ಸಭೆಯಲ್ಲೇ ಅನುಷ್ಠಾನಗೊಳಿಸುವುದಾಗಿ ಸಿಎಂ ಭರವಸೆ ನೀಡಿದ್ದಾರೆ.
ಇದಕ್ಕೆ ಪೂರಕವಾಗಿ ನೂತನ ಮುಖ್ಯಮಂತ್ರಿ ಸಿದ್ಧರಾಮಯ್ಯ ಕೂಡ ಮೊದಲ ಸಚಿವ ಸಂಪುಟ ಸಭೆಯಲ್ಲಿ ತಾತ್ವಿಕ ಒಪ್ಪಿಗೆ ನೀಡುವ ನಿರ್ಧಾರಗಳನ್ನು ಕೈಗೊಂಡು ಅಧಿಕೃತ ಆದೇಶಗಳನ್ನ ಹೊರಡಿಸಿದ್ದಾರೆ. ಆದರೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಾತ್ರ, ಹಾದಿಬೀದಿಯಲ್ಲಿ ಹೋಗುವವರಿಗೆಲ್ಲ ಈ ಯೋಜನೆಗಳ ಲಾಭ ಸಿಗುವುದಿಲ್ಲ. ನಿಜಕ್ಕೂ ಬಡವರಿಗೆ, ಅರ್ಹರಿಗೆ ಮಾತ್ರ ಸಿಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ನಿಂದ ಶುರುವಾಯ್ತು ಬಿಜೆಪಿ ಕಾಲದ ಅಕ್ರಮದ ತನಿಖೆ – ಮೊದಲ ಎಫ್‌ಐಆರ್ ದಾಖಲು
ಇದೆಲ್ಲವನ್ನೂ ಗಮನಿಸಿರುವ ಕೊಡಗಿನ ಸಾರ್ವಜನಿಕರು ತಮ್ಮ ಹೆಸರಿನಲ್ಲಿ ಬಿಪಿಎಲ್ ಕಾರ್ಡ್ ಗಳನ್ನು ಮಾಡಿಸಿಕೊಳ್ಳಲು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ವೆಬ್ ಸೈಟ್ ಗೆ ಮೊರೆ ಹೋಗಿದ್ದಾರೆ. ಕೆಲವರು ತಮ್ಮ ಮೊಬೈಲ್ ಮತ್ತು ಕಂಪ್ಯೂಟರ್ ಗಳ ಸಹಾಯದಿಂದ ಆಹಾರ ahar.kar.nic.in ವೆಬ್ ಸೈಟ್ ಓಪನ್ ಮಾಡಲು ಪ್ರಯತ್ನಿಸುತ್ತಿದ್ದರೆ, ಇನ್ನೂ ಕೆಲವರು ಸಮೀಪದ ಸೈಬರ್ ಸೆಂಟರ್ ಗಳಿಗೆ ಹೋಗಿ ಬಿಪಿಎಲ್ ಕಾರ್ಡ್ ಗಳನ್ನೂ ಮಾಡಿಸಿಕೊಳ್ಳಲು ಮುಂದಾಗುತ್ತಿದ್ದಾರೆ. ಹೆಚ್ಚಿನ ಜನರು ಏಕಕಾಲಕ್ಕೆ ಅರ್ಜಿ ಸಲ್ಲಿಸಲು ಮುಂದಾಗುತ್ತಿದ್ದು, ಇಲಾಖೆ ತಾತ್ಕಾಲಿಕವಾಗಿ ಅರ್ಜಿ ಸ್ವೀಕಾರವನ್ನ ಸ್ಥಗಿತಗೊಳಿಸಿದೆ ಎಂದು ತಮ್ಮ ವೆಬ್ ಸೈಟ್ ನಲ್ಲೆ ಸ್ಪಷ್ಟವಾಗಿ ನಮೂದಿಸಿಬಿಟ್ಟಿದ್ದಾರೆ.
ಇನ್ನೂ ಈ ಸಮಸ್ಯೆ ಬಗ್ಗೆ ಆಹಾರ ಇಲಾಖೆ ಅಧಿಕಾರಿಗಳನ್ನು ಕೇಳಿದ್ರೆ. ಬಿಪಿಎಲ್ ಕಾರ್ಡ್ ತಿದ್ದುಪಡಿ ಸಂಬಂಧಿಸಿದಂತೆ ಆಹಾರ ಇಲಾಖೆಯಲ್ಲಿ ಜನವರಿ ಹಾಗೂ ಫೆಬ್ರವರಿ ತಿಂಗಳಲ್ಲಿ ಕಾರ್ಡ್ ತಿದ್ದುಪಡಿಗೆ ಸರ್ವರ್ ಒಪನ್ ಇತ್ತು. ಮಾಚ್ 9ರಿಂದ ನೀತಿ ಸಂಹಿತೆ ಜಾರಿಯಾಗುವ ವರೆಗೂ GSC ಅಪ್ಲಿಕೇಶನ್ ಹಾಕುವುದಕ್ಕೆ ಅವಕಾಶ ನೀಡಲಾಗಿತ್ತು. ಮೇ ತಿಂಗಳಲ್ಲೂ 17 ಹಾಗೂ 18ರ ವರೆಗೂ ಸರ್ವರ್ ಒಪನ್ ಇತ್ತು. ಇದೀಗ ಸ್ಥಗಿತಗೊಳಿಸಲಾಗಿದೆ. ಮುಂದೆ ಸರ್ಕಾರ ನಿರ್ದೇಶನ ನೀಡುವವರೆಗೂ ಅರ್ಜಿಗಳನ್ನ ಸ್ಥಗಿತಗೊಳಿಸಲಾಗುತ್ತದೆ. ದೂರದ ಊರಿನ ಬಂದವರು ವಾಪಸ್ ಹೋಗುತ್ತಿದ್ದಾರೆ. ಸರ್ಕಾರದ ಅದೇಶ ಬರುವವರೆಗೂ ಜನರು ಕಾಯಲೇಬೇಕು ಎಂದು ಇಲಾಖೆಯ ಆಧಿಕಾರಿಗಳು ತಿಳಿಸಿದ್ದಾರೆ.