ಹಾವೇರಿ: ಶಿಗ್ಗಾಂವಿಯ ಶೂಟೌಟ್ ಪ್ರಕರಣ ಮಾಸುವ ಮುನ್ನವೇ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಹುಲಗೂರು ಗ್ರಾಮದಲ್ಲಿ ಫೈರಿಂಗ್ ನಡೆದಿದೆ.
Advertisement
ಗ್ರಾಮದ ಮಹಿಳೆ ಸಲ್ಮಾ ಮನೆಯ ಕಟ್ಟೆ ಮೇಲೆ ಕುಳಿತಿದ್ದ ವೇಳೆ ಬೈಕ್ ಮೇಲೆ ಬಂದಿದ್ದ ಮುಸುಕುಧಾರಿಗಳು ಗುಂಡು ಹಾರಿಸಿದ್ದಾರೆ. ಅದೇ ವೇಳೆಯಲ್ಲಿ ಕರೆಂಟ್ ಹೋಗಿದ್ದು, ಕತ್ತಲಾಗಿದ್ದರಿಂದ ಗುಂಡಿನ ದಾಳಿಯಿಂದ ತಪ್ಪಿಸಿಕೊಂಡು ಮಹಿಳೆ ಮನೆಯೊಳಗೆ ಓಡಿ ಹೋಗಿದ್ದಾಳೆ. ಇದರಿಂದಾಗಿ ಮನೆಯ ಗೋಡೆಗೆ ಒಳಗೆ ಗುಂಡು ತಾಗಿದೆ. ಹೀಗಾಗಿ ಗುಂಡಿನ ದಾಳಿಯಲ್ಲಿ ಮಹಿಳೆ ಹಾಗೂ ಮಹಿಳೆಯ ಮನೆಯವರು 14 ಜನರು ಪಾರಾಗಿದ್ದಾರೆ. ಗುಂಡಿನ ಸದ್ದು ಕೇಳುತ್ತಿದ್ದಂತೆ ಬೆಚ್ಚಿಬಿದ್ದ ಅಲ್ಲಿನ ಜನರು ಸಲ್ಮಾಳ ಮನೆ ಬಳಿ ಜಮಾಯಿಸಿದ್ದಾರೆ. ಅಷ್ಟರಲ್ಲಿ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಇದನ್ನೂ ಓದಿ: ರಷ್ಯಾದಿಂದ ತೈಲ ಖರೀದಿ ಮುಂದುವರಿಸಿದ ಭಾರತ – ರಿಯಾಯಿತಿ ಬಗ್ಗೆ ಆಗಿಲ್ಲ ನಿರ್ಧಾರ
Advertisement
Advertisement
ಸಲ್ಮಾಳಿಗೆ ಕೆಲವು ವರ್ಷಗಳ ಹಿಂದೆ ಮದುವೆ ಆಗಿತ್ತು. ಮೂವರು ಮಕ್ಕಳಿದ್ದಾರೆ. ಪತಿ ಜಗಳ ಮಾಡಿಕೊಂಡಿದ್ದರಿಂದ ಸಲ್ಮಾ ಎರಡು ವರ್ಷಗಳಿಂದ ತವರುಮನೆ ಹುಲಗೂರು ಗ್ರಾಮದಲ್ಲಿ ವಾಸವಾಗಿದ್ದಾರೆ. ಆದರೆ ರಾತ್ರಿ ಒಂಬತ್ತು ಗಂಟೆ ಸುಮಾರಿಗೆ ಇದ್ದಕ್ಕಿದ್ದಂತೆ ಮುಸುಕುಧಾರಿಗಳು ಬಂದೂಕಿನಿಂದ ಫೈರಿಂಗ್ ಮಾಡಿದ್ದಾರೆ. ಈ ವೇಳೆ ಮನೆಯಲ್ಲಿದ್ದ ಸಲ್ಮಾ, ಆಕೆಯ ಮಕ್ಕಳು, ತಂದೆ ಮತ್ತು ಅಣ್ಣತಮ್ಮಂದಿರು ಸೇರಿದಂತೆ ಒಟ್ಟು ಹದಿನಾಲ್ಕು ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ಮೋದಿ ಪ್ರಧಾನಿಯಾಗಿ 8 ವರ್ಷ – ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ ವೇಗೆ ಚಾಲನೆ
Advertisement
ಘಟನೆಯಲ್ಲಿ ದುಷ್ಕರ್ಮಿಗಳ ಬಂದೂಕಿನಿಂದ ಒಂದು ಸುತ್ತು ಗುಂಡು ಹಾರಿದೆ. ವಿಷಯ ತಿಳಿಯುತ್ತಿದ್ದ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಹೆಚ್ಚುವರಿ ಎಸ್ಪಿ ವಿಜಯ್ಕುಮಾರ್ ಸೇರಿದಂತೆ ಶಿಗ್ಗಾಂವಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಶಿಗ್ಗಾಂವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.