ಲಕ್ನೋ: ಭಾರತೀಯ ಜನತಾ ಪಕ್ಷ (ಬಿಜೆಪಿ) ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಗೊಳಿಸಲು ತರಬೇತಿ ಪಡೆದಿದೆ. ಬಿಜೆಪಿಯವರು ಬಡವರಿಂದ ಹಣವನ್ನು ಪಡೆದು ತಮ್ಮ ಶ್ರೀಮಂತ ಉದ್ಯಮಿಗಳಿಗೆ ನೀಡುತ್ತಿದ್ದಾರೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ.
Advertisement
ಉತ್ತರ ಪ್ರದೇಶದ ಬಲರಾಮ್‍ಪುರದಲ್ಲಿ ಶನಿವಾರ ನಡೆದ ರ್‍ಯಾಲಿ ವೇಳೆ ಮಾತನಾಡಿದ ಅವರು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ನಿರಂತರವಾಗಿ ಹೆಚ್ಚುತ್ತಿದೆ. ಬಿಜೆಪಿಯವರು ಬಡವರಿಂದ ಹಣವನ್ನು ಪಡೆದು ತಮ್ಮ ಶ್ರೀಮಂತ ಉದ್ಯಮಿಗಳಿಗೆ ನೀಡುತ್ತಿದ್ದಾರೆ. ಹಾಗಾಗಿ ಜನರು ಈ ಬಾರಿ ಸಮಾಜವಾದಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುತ್ತಾರೆ ಎಂದು ಪ್ರತಿಪಾದಿಸಿದ್ದಾರೆ. ಇದನ್ನೂ ಓದಿ:
Advertisement
Advertisement
ಪಯಾಗ್‍ಪುರ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಮುಖೇಶ್ ಶ್ರೀವಾಸ್ತವ ಅವರ ಪರ ಚುನಾವಣಾ ಪ್ರಚಾರ ನಡೆಸಿದರು. ನಂತರ ಇದೇ ವೇಳೆ ಸಭೆಯಲ್ಲಿ ಮಾತನಾಡಿ, ಬಿಜೆಪಿ ಸರ್ಕಾರವು ಡೀಸೆಲ್ ಮತ್ತು ಪೆಟ್ರೋಲ್ ಅನ್ನು ತುಂಬಾ ದುಬಾರಿ ಮಾಡಿದೆ. ಬಡ ಜನರು ತಮ್ಮ ವಾಹನಗಳನ್ನು ಓಡಿಸಲು ಸಾಧ್ಯವಾಗುತ್ತಿಲ್ಲ. ರೈತರೂ ಟ್ರ್ಯಾಕ್ಟರ್ ಓಡಿಸಲು ಸಾಧ್ಯವಾಗುತ್ತಿಲ್ಲ. ನೆನಪಿನಲ್ಲಿಟ್ಟುಕೊಳ್ಳಿ ಚುನಾವಣೆ ಮುಗಿದ ತಕ್ಷಣ ಬಿಜೆಪಿಯವರು ಪೆಟ್ರೋಲ್ ಬೆಲೆಯನ್ನು 200 ರೂ.ಗೆ ಏರಿಸುತ್ತಾರೆ ಎಂದಿದ್ದಾರೆ. ಇದನ್ನೂ ಓದಿ: ಉಕ್ರೇನ್‍ನಿಂದ 2ನೇ ವಿಮಾನದಲ್ಲಿ ದೆಹಲಿಗೆ ಬಂದ 250 ಭಾರತೀಯರು
Advertisement
“ಬಾಬಾ ಸಿಎಂ” ಲಕ್ನೋದಿಂದ ಗೋರಖ್‍ಪುರಕ್ಕೆ ಟಿಕೆಟ್ ಕಾಯ್ದಿರಿಸಿದ್ದು, ಮಾರ್ಚ್ 11 ರಂದು ಹಿಂದಿರುಗಲಿದ್ದಾರೆ. ವಿಧಾನಸಭೆ ಚುನಾವಣೆ ಮುಗಿದ ಬಳಿಕ ಮತ್ತೆ ಸರ್ಕಾರವು ಇಂಧನ ಬೆಲೆಯನ್ನು ಹೆಚ್ಚಿಸಲಿದೆ. ಸದ್ಯ ಬಿಜೆಪಿ ನಾಯಕರ ಹೇಳಿಕೆಗಳು ಮತ್ತು ನಡವಳಿಕೆಯಿಂದ ಚುನಾವಣೆಯಲ್ಲಿ ಸೋಲುವ ಭಯದಿಂದ ಅವರು ಈಗ ಹಿಂಸಾಚಾರದತ್ತ ವಾಲುತ್ತಿದ್ದಾರೆ ಎಂಬುದನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಉಕ್ರೇನ್‍ನಿಂದ 2ನೇ ವಿಮಾನದಲ್ಲಿ ದೆಹಲಿಗೆ ಬಂದ 250 ಭಾರತೀಯರು
ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ ಮತ್ತು ಮಣಿಪುರದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗಳ ಫಲಿತಾಂಶವನ್ನು ಮಾರ್ಚ್ 10 ರಂದು ಪ್ರಕಟಿಸಲಾಗುವುದು. ಯುಪಿಯಲ್ಲಿ ಏಳು ಹಂತಗಳಲ್ಲಿ ಮತದಾನ ನಡೆಯುತ್ತಿದ್ದು, ಮಾರ್ಚ್ 7 ರಂದು ಕೊನೆಯ ಹಂತದ ಮತದಾನ ನಡೆಯಲಿದೆ.