ದೇವರೆಂದು ನಮ್ಮನ್ನು ನಾವೇ ಸ್ವಯಂ ಘೋಷಿಸಬಾರದು: ಮೋಹನ್‌ ಭಾಗವತ್‌

Public TV
1 Min Read
Mohan Bhagwat

ಪುಣೆ: ದೇವರೆಂದು ನಮ್ಮನ್ನು ನಾವೇ ಸ್ವಯಂಘೋಷಣೆ ಮಾಡಿಕೊಳ್ಳಬಾರದು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

ಮಣಿಪುರದಲ್ಲಿ (Manipura) ಮಕ್ಕಳ ಶಿಕ್ಷಣಕ್ಕಾಗಿ ಶ್ರಮಿಸಿದ ಮತ್ತು ಭಯ್ಯಾಜಿ ಎಂದು ಜನಪ್ರಿಯರಾಗಿದ್ದ ಶಂಕರ್ ದಿನಕರ್ ಕೇನ್ ಅವರ ಶತಮಾನೋತ್ಸವದ ಅಂಗವಾಗಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಭಾಗವತ್, ನಾವು ದೇವರಾಗುತ್ತೇವೋ ಇಲ್ಲವೋ ಎಂಬುದನ್ನು ಜನರು ನಿರ್ಧರಿಸುತ್ತಾರೆ. ನಾವು ದೇವರಾಗಿದ್ದೇವೆ ಎಂದು ಸ್ವಯಂ ಘೋಷಿಸಬಾರದು ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: 2047 ರವರೆಗೆ 24×7 ಕೆಲಸ ಮಾಡಬೇಕೆಂದು ದೇವರು ನನಗೆ ಆದೇಶಿಸಿದ್ದಾನೆ ಎಂದು ನಂಬಿದ್ದೇನೆ: ಮೋದಿ

Assam Rifles manipura PLA 2

ಶಾಂತವಾಗಿರುವುದಕ್ಕಿಂತ ಮಿಂಚಿನಂತೆ ಹೊಳೆಯಬೇಕು ಎಂದು ಕೆಲವರು ಭಾವಿಸುತ್ತಾರೆ. ಆದರೆ ಸಿಡಿಲು ಬಡಿದ ನಂತರ ಮೊದಲಿಗಿಂತ ಹೆಚ್ಚು ಕತ್ತಲೆಯಾಗುತ್ತದೆ. ಆದ್ದರಿಂದ ಕೆಲಸಗಾರರು ದೀಪಗಳಂತೆ ಉರಿಯಬೇಕು ಮತ್ತು ಅಗತ್ಯವಿದ್ದಾಗ ಮಾತ್ರ ಹೊಳೆಯಬೇಕು ಎಂದು ಹೇಳಿದರು. ಇದನ್ನೂ ಓದಿ: ನಿಮ್ಮ ಸೇವೆಗೆ ದೇವರು ನನ್ನ ಕಳುಹಿಸಿದ್ದಾನೆ: ಮೋದಿ

ಮಣಿಪುರದಲ್ಲಿ ಪರಿಸ್ಥಿತಿ ಕಷ್ಟಕರವಾಗಿದೆ. ಸುರಕ್ಷತೆಗೆ ಯಾವುದೇ ಗ್ಯಾರಂಟಿ ಇಲ್ಲ. ವ್ಯಾಪಾರ ಅಥವಾ ಸಾಮಾಜಿಕ ಕೆಲಸಕ್ಕಾಗಿ ಅಲ್ಲಿಗೆ ಹೋದವರಿಗೆ ಪರಿಸ್ಥಿತಿ ಇನ್ನಷ್ಟು ಸವಾಲಿನದ್ದಾಗಿದೆ. ಇಂತಹ ಕಠಿಣ ಪರಿಸ್ಥಿತಿಗಳಲ್ಲಿಯೂ ಸಂಘದ ಸ್ವಯಂಸೇವಕರು ದೃಢವಾಗಿ ನಿಂತು ಪರಿಸ್ಥಿತಿಯನ್ನು ಶಾಂತಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಮೋಹನ್‌ ಭಾಗವತ್‌ ಆರ್‌ಎಸ್‌ಎಸ್‌ ಕಾರ್ಯಕರ್ತರ ಶ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

 

Share This Article