ಮೈಸೂರು: ರಾಜರು ಏನು ಮಾಡಿದ್ದಾರೆ ಸಿಎಂ ಸಿದ್ದರಾಮಯ್ಯ ಅವರು ಏನು ಮಾಡಿದ್ದಾರೆ ಅನ್ನುವುದನ್ನು ಜನ ತೀರ್ಮಾನ ಮಾಡುತ್ತಾರೆ ಎಂದು ಯದುವೀರ್ ಹೇಳಿದ್ದಾರೆ.
ಮಹಾರಾಜರ ನಂತರ ನಮ್ಮ ಸರ್ಕಾರವೇ ಹೆಚ್ಚು ಕೆಲಸ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಕಳೆದ ಎರಡು ದಿನಗಳ ಹಿಂದೆ ಹೇಳಿಕೆ ನೀಡಿದ್ದರು. ಈ ಕುರಿತು ಮೈಸೂರಿನಲ್ಲಿ ರಾಜವಂಶಸ್ಥ ಯದುವೀರ ಅವರು ಪ್ರತಿಕ್ರಿಯೆ ನೀಡಿ ರಾಜರ ಆಳ್ವಿಕೆ ಸಿದ್ದರಾಮಯ್ಯ ಆಳ್ವಿಕೆ ಹೋಲಿಕೆ ಮಾಡುವುದು ಸರಿಯಲ್ಲ. ಅಂದಿನ ರಾಜರ ಕಾಲಕ್ಕೂ, ಇಂದಿನ ಕಾಲಕ್ಕೂ ತುಂಬಾ ವ್ಯತ್ಯಾಸವಿದೆ ಎಂದು ತಿಳಿಸಿದರು.
Advertisement
Advertisement
ಸಿಎಂ ಸಿದ್ದರಾಮಯ್ಯ ಅವರು ಕಳೆದ ಐದು ವರ್ಷದಲ್ಲಿ ಏನು ಮಾಡಿದ್ದಾರೆ ಅನ್ನುವುದನ್ನು ಜನ ತೀರ್ಮಾನ ಮಾಡುತ್ತಾರೆ. ಜನರಿಗೆ ಎಲ್ಲವೂ ಗೊತ್ತಿದೆ. ರಾಜರು ನೀಡಿದ ಕೊಡುಗೆಯನ್ನು ಜನರು ಯಾವತ್ತು ಮರೆಯುವುದಿಲ್ಲ. ಮೈಸೂರು ಸಂಸ್ಥಾನ ಕೊಡುಗೆ ಎಲ್ಲರಿಗೂ ಗೊತ್ತಿದೆ ಎಂದು ಹೇಳಿದರು.
Advertisement
ಮಾರ್ಚ್ 10 ರಂದು ಮೈಸೂರಿನಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಜಯದೇವ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಿಎಂ ಸರ್ಕಾರದ ಕೊಡುಗೆಗಳನ್ನು ತಿಳಿಸಿದ್ದರು. ರಾಜ್ಯದಲ್ಲಿ ಮೈಸೂರು ರಾಜರ ನಂತರ ಯಾವುದಾದರೂ ಸರ್ಕಾರ ಅಭಿವೃದ್ಧಿ ಕೆಲಸ ಮಾಡಿದೆ ಎಂದರೇ ಅದು ನಮ್ಮ ಸರ್ಕಾರ ಮಾತ್ರ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು.
Advertisement
ಮೈಸೂರು ಜಿಲ್ಲೆಗೆ ನಮ್ಮ ಸರ್ಕಾರದಿಂದ 5 ಸಾವಿರ ಕೋಟಿ ರೂ. ಹಣ ನೀಡಿದ್ದೇವೆ. ಸ್ವಾತಂತ್ರ್ಯ ಭಾರತದಲ್ಲಿ ಇಷ್ಟು ಹಣ ಕೊಟ್ಟ ಸರ್ಕಾರ ಇಲ್ಲವೇ ಇಲ್ಲ. ಮೈಸೂರಿನ ಪರಂಪರೆ ಉಳಿಸಿಕೊಂಡು ಕಟ್ಟಡಗಳನ್ನ ನಿರ್ಮಿಸಿದ್ದೇವೆ ಎಂದು ತಮ್ಮ ಸರ್ಕಾರದ ಸಾಧನೆಗಳನ್ನು ತಿಳಿಸಿದ್ದರು.