ಬೆಂಗಳೂರು: ರಾಜ್ಯದ ಹಲವಡೆ ವರುಣನ ಆಗಮನವಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಸತತ ಒಂದು ಗಂಟೆಯಿಂದ ಗಡಿ ಜಿಲ್ಲೆ ಬೀದರ್‌ನಲ್ಲಿ (Bidar) ಬಿರುಗಾಳಿ ಸಹಿತ ಧಾರಾಕಾರ ಮಳೆ (Rain) ಸುರಿಯುತ್ತಿದ್ದು, ಜಿಲ್ಲೆಯಲ್ಲಿ ಜನ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ.
ಬೀದರ್, ಭಾಲ್ಕಿ, ಹುಮ್ನಾಬಾದ್, ಔರಾದ್ ಸೇರಿದಂತೆ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಬಿತ್ತನೆ ಮಾಡಿದ್ದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಬಹುತೇಕ ಮುಂಗಾರು ಮಳೆ ಕೈ ಕೊಟ್ಟ ಪರಿಣಾಮ ಬಿತ್ತನೆ ಮಾಡಿದ ವಿವಿಧ ಬೆಳೆಗಳು ಒಣಗಿ ಹೋಗಿತ್ತು. ಇದೀಗ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಬೆಳೆಗಳಿಗೆ ಈ ಮಳೆ ಸಂಜೀವಿನಿಯಾಗಿದೆ. ಧಾರಾಕಾರ ಮಳೆಯ ಜೊತೆಗೆ ದಟ್ಟ ಮೋಡಗಳು ಆವರಿಸಿದ್ದು ಇಂದು ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ: Delhi Rains: ಯಮುನೆ ಆರ್ಭಟ – ತಗ್ಗದ ಜನರ ಸಂಕಟ
Advertisement
Advertisement
ಇನ್ನು ಉತ್ತರ ಕನ್ನಡ (Uttara Kannada) ಜಿಲ್ಲೆಯ ಹೊನ್ನಾವರ ತಾಲೂಕಿನ ಕತ್ತಲೆ ಕಾಲನಿಯಲ್ಲಿ ಅಬ್ಬರದ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ಮರ ಉರುಳಿಬಿದ್ದಿದ್ದು, ನಾಲ್ಕು ಗಂಟೆ ಸಂಚಾರ ಬಂದ್ ಆಗಿದೆ. ಮರ ಬಿದ್ದ ಹಿನ್ನೆಲೆ ಹೊನ್ನಾವರ – ಬೆಂಗಳೂರು ಸಂಚಾರ ಬಂದ್ ಆಗಿದ್ದು, ವಾಹನ ಸವಾರರು ಪರದಾಡುವಂತಾಯಿತು. ಬಳಿಕ ಉರುಳಿ ಬಿದ್ದಿದ್ದ ಮರವನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಜಿಲ್ಲೆಯಲ್ಲಿ ಸೋಮವಾರ ರಾತ್ರಿಯಿಂದ ಮಳೆಯ ಅಬ್ಬರ ಹೆಚ್ಚಾಗಿದ್ದು, ಇನ್ನೂ ಒಂದು ವಾರಗಳ ಕಾಲ ಹೆಚ್ಚಿನ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇದನ್ನೂ ಓದಿ: ಬೆಂಗಳೂರಿನ 8 ವಲಯಗಳಲ್ಲಿ ಕುಡಿಯಲು ನೀರು ಯೋಗ್ಯವಲ್ಲ!
Advertisement
Advertisement
ಅದೇ ರೀತಿ ಐತಿಹಾಸಿಕ ಜಿಲ್ಲೆ ವಿಜಯಪುರಕ್ಕೂ (Vijayapura) ವರುಣ ಎಂಟ್ರಿ ಕೊಟ್ಟಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಜಿಲ್ಲೆಯಲ್ಲಿ ಮುಂಗಾರು ಕೈಕೊಟ್ಟಿದ್ದು, ಇದೀಗ ಜಿಲ್ಲೆಯಲ್ಲಿ ಜಿಟಿ ಜಿಟಿ ಮಳೆ ಆರಂಭವಾಗಿದೆ. ಈ ಜಿಲ್ಲೆಯಲ್ಲಿ ಮುಂಗಾರು ಕೈಕೊಟ್ಟಿದ್ದು, ಜೂನ್‌ನಿಂದ ಮಳೆ ಇಲ್ಲದೆ ರೈತರು ಕಂಗೆಟ್ಟಿದ್ದರು. ತುಂತುರು ಮಳೆ ಪ್ರಾರಂಭವಾಗಿದ್ದು, ಜನರು ಸಂತಸದಿಂದಿದ್ದಾರೆ. ಇದನ್ನೂ ಓದಿ: ಜಯದೇವ ಆಸ್ಪತ್ರೆಯ ನಿರ್ದೇಶಕರಾಗಿ ಡಾ. ಮಂಜುನಾಥ್ ಮತ್ತೆ ಮುಂದುವರಿಕೆ
ಇನ್ನು ಕಲಬುರಗಿ (Kalaburagi) ಜಿಲ್ಲೆಯಲ್ಲಿ ಈ ವರ್ಷದ ಮೊದಲ ಮುಂಗಾರು ಆರಂಭವಾಗಿದ್ದು, ಜಿಲ್ಲೆಯಲ್ಲಿ ಆವರಿಸಿದ್ದ ಬರದ ಛಾಯೆಯನ್ನು ಈ ಮಳೆ ಅಳಿಸುತ್ತಿದೆ. ಮಳೆಯಿಂದ ಅನ್ನದಾತನ ಮೊಗದಲ್ಲಿ ಮಂದಹಾಸ ಮೂಡಿದ್ದು, ಜಿಟಿ ಜಿಟಿ ಮಳೆಯಿಂದ ಇಳೆ ತಂಪೇರಿದೆ. ಹಾಗೆಯೇ ಹಾವೇರಿಯ ಜಿಲ್ಲೆಯ ಎಂಟು ತಾಲೂಕಿನಲ್ಲಿ ಧಾರಾಕಾರ ಮಳೆಯಾಗಿದ್ದು, ರೈತರು ಹರ್ಷಗೊಂಡಿದ್ದಾರೆ. ಇದನ್ನೂ ಓದಿ: ಪತ್ನಿಯಿಂದ್ಲೇ IAS ಅಧಿಕಾರಿ ಆಕಾಶ್ ಶಂಕರ್ ವಿರುದ್ಧ ದೂರು!
ಕಾದು ಕಬ್ಬಿಣದಂತಾಗಿದ್ದ ಯಾದಗಿರಿ (Yadgiri) ಜಿಲ್ಲೆಯಾದ್ಯಂತ ಜಿಟಿ ಜಿಟಿ ಮಳೆಯಾಗಿದ್ದು, ಜನ ಓಡಾಡಲು ಸಂಕಷ್ಟ ಎದುರಾಗಿದೆ. ಮಳೆಯಿಂದಾಗಿ ಜನರು ನಿತ್ಯದ ವ್ಯಾಪಾರ ವಹಿವಾಟಿಗೆ ತೆರಳಲು ಹಿಂದೇಟು ಹಾಕಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಸಿಎಂ ಆಗಿದ್ದಕ್ಕೆ ಹರಕೆ ಒಪ್ಪಿಸಿದ ಅಭಿಮಾನಿ
Web Stories