ಅಭಿವೃದ್ಧಿ ಕಾರ್ಯಗಳಲ್ಲಿ ಜನರ ಸಹಭಾಗಿತ್ವ ಅಗತ್ಯ: ಈಶ್ವರಪ್ಪ

Public TV
2 Min Read
eswarappa shivamogga 6

ಶಿವಮೊಗ್ಗ: ದೇಶದ ಅಭಿವೃದ್ಧಿ ಕಾರ್ಯಗಳಲ್ಲಿ ಜನರ ಸಕ್ರಿಯ ಸಹಭಾಗಿತ್ವ ಅಗತ್ಯವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

eswarappa shivamogga 5

ಶಿವಮೊಗ್ಗ ಸಮೀಪದ ಅಬ್ಬಲಗೆರೆ ಗ್ರಾಮ ಪಂಚಾಯ್ತಿಯಲ್ಲಿ ಗಾಂಧಿ ಜಯಂತಿ ಅಂಗವಾಗಿ ಆಯೋಜಿಸಲಾಗಿದ್ದ ವಿವಿಧ ಕಾರ್ಯಕ್ರಮಗಳಿಗೆ ಕೆ.ಎಸ್.ಈಶ್ವರಪ್ಪ ಚಾಲನೆ ನೀಡಿದ ಬಳಿಕ ಮಾಧ್ಯಮಗಲೊಂದಿಗೆ ಮಾತನಾಡಿದ ಅವರು, ಜನರ ಭಾಗವಹಿಸುವಿಕೆಯಿಂದ ಮಾತ್ರ ಅಭಿವೃದ್ಧಿ ಕಾರ್ಯಗಳನ್ನು ಯಶಸ್ವಿಯಾಗಿ ಅನುಷ್ಟಾನಗೊಳಿಸಲು ಸಾಧ್ಯವಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಹಲವಾರು ಜನರ ಕೇಂದ್ರಿಕೃತವಾದ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ ಎಂದರು.

ಸರ್ಕಾರ ಜಾರಿಗೊಳಿಸುವ ಯೋಜನೆಗಳ ಅನುಷ್ಠಾನದಲ್ಲಿ ಜನರು ಸಹ ಜವಾಬ್ದಾರಿ ವಹಿಸಿಕೊಳ್ಳಬೇಕು. ಗ್ರಾಮ ಪಂಚಾಯತ್ ಮಟ್ಟದಲ್ಲಿ ಅಲ್ಲಿನ ಜನರೇ ಗ್ರಾಮಕ್ಕೆ ಅವಶ್ಯಕವಾದ ಯೋಜನೆಗಳನ್ನು ಗುರುತಿಸಿ, ಅನುಷ್ಠಾನಗೊಳಿಸುವ ಕಾರ್ಯಕ್ರಮವನ್ನು ಇಂದಿನಿಂದ ಆರಂಭಿಸಲಾಗಿದೆ ಎಂದರು. ಇದನ್ನೂ ಓದಿ: ಗಾಂಧೀಜಿ ತತ್ವಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು: ಎಸ್.ಟಿ.ಸೋಮಶೇಖರ್

eswarappa shivamogga 4

ಗಾಂಧಿ ಜಯಂತಿ ದಿನದಂದು ಗ್ರಾಮೀಣ ಭಾಗದ ಕಲ್ಯಾಣಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ಆರಂಭಿಸಲಾಗುತ್ತಿದೆ. ಮಹಿಳೆಯರ ಮತ್ತು ದುರ್ಬಲ ವರ್ಗದವರ ರಕ್ಷಣೆಗಾಗಿ ದೌರ್ಜನ್ಯದಿಂದ ಮುಕ್ತಿ ಕಾರ್ಯಕ್ರಮದ ಅಡಿಯಲ್ಲಿ ಮುಂದಿನ 10 ತಿಂಗಳ ಕಾಲ ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರಿಗೆ ತರಬೇತಿ ಹಾಗೂ ಅರಿವು ಮೂಡಿಸುವ ಕಾರ್ಯ ನಡೆಸಲಾಗುವುದು. ಗ್ರಾಮ ಪಂಚಾಯತ್ ಸದಸ್ಯರು, ವಿವಿಧ ಸ್ವಸಹಾಯ ಗುಂಪುಗಳ ಸದಸ್ಯೆಯರಿಗೆ ಶಿಕ್ಷಣ, ಆರೋಗ್ಯ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ತರಬೇತಿ ನೀಡಲಾಗುವುದು ಎಂದು ತಿಳಿಸಿದರು.

eswarappa shivamogga 3

ಸ್ವಾತಂತ್ರ್ಯದ 75ನೇ ವರ್ಷಾಚರಣೆ ಅಂಗವಾಗಿ ರಾಜ್ಯದ 750 ಗ್ರಾಮ ಪಂಚಾಯತ್ ಗಳಲ್ಲಿ `ಅಮೃತ ಗ್ರಾಮ’ ಯೋಜನೆ ಅನುಷ್ಠಾನ ಗೊಳಿಸಲಾಗುತ್ತಿದೆ. ಜಿಲ್ಲೆಯ 32 ಗ್ರಾಮ ಪಂಚಾಯತ್ ಗಳಲ್ಲಿ ಈ ಯೋಜನೆ ಜಾರಿಯಾಗಲಿದೆ. ಈ ಗ್ರಾಮ ಪಂಚಾಯತ್ ಗಳಲ್ಲಿ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸಲು ರಾಜ್ಯ ಸರ್ಕಾರ 25 ಲಕ್ಷ ರೂ. ಅನುದಾನ ಒದಗಿಸಲಿದೆ. ಪ್ರತಿಯೊಂದು ಮನೆಗಳಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಜಲಜೀವನ ಮಿಷನ್ ಯೋಜನೆಯನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದರು. ಇದನ್ನೂ ಓದಿ: ಗಾಂಧಿ ಜಯಂತಿ ವಿಶೇಷ – ವಿಜಯಪುರದ ಗ್ರಾಮ ಸಭೆ ವೀಕ್ಷಣೆ ಮಾಡಲಿದ್ದಾರೆ ಮೋದಿ

eswarappa shivamogga 2

ಸ್ವಚ್ಛ ಭಾರತ ಯೋಜನೆಯನ್ನು ಜಿಲ್ಲೆಯಾದ್ಯಂತ ಅನುಷ್ಠಾನಗೊಳಿಸಲಾಗುತ್ತಿದೆ. ಪ್ರತಿಯೊಂದು ಮನೆಗೆ ಶೌಚಾಲಯವನ್ನು ನಿರ್ಮಿಸಿ ಬಯಲು ಶೌಚಮುಕ್ತ ಗ್ರಾಮಗಳನ್ನು ರೂಪಿಸಲಾಗುತ್ತಿದೆ. ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮೀಣ ಪ್ರದೇಶದ ಪ್ರತಿಯೊಂದು ಕುಟುಂಬಕ್ಕೆ ವರ್ಷಕ್ಕೆ 100 ದಿನಗಳ ಕೂಲಿ ಕೆಲಸ ಒದಗಿಸಲಾಗುತ್ತಿದೆ ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಶಿವಮೊಗ್ಗ ಗ್ರಾಮಾಂತರ ಶಾಸಕ ಅಶೋಕ್ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿ.ಪಂ. ಸಿಇಒ ಎಂ.ಎಲ್.ವೈಶಾಲಿ ಭಾಗವಹಿಸಿದ್ದರು. ಇದನ್ನೂ ಓದಿ: ಬೀದಿ ಹುಡುಗನ ಡ್ಯಾನ್ಸ್ ಗೆ ವಿಸ್ಮಯಗೊಂಡ ನೆಟ್ಟಿಗರು – ವೀಡಿಯೋ ವೈರಲ್

Share This Article
Leave a Comment

Leave a Reply

Your email address will not be published. Required fields are marked *