ಶ್ರೀನಗರ: ಭಾರತ (India) ಮತ್ತು ಪಾಕ್ (Pakistan) ನಡುವೆ ಯುದ್ಧದ ಕಾರ್ಮೋಡ ಕವಿದಿದ್ದು, ಕಾಶ್ಮೀರದಲ್ಲಿ ವಿಮಾನ ಹಾರಾಟ ಸ್ಥಗಿತಗೊಳಿಸಲಾಗಿದೆ. ಇದರಿಂದ ಆಲ್ ಲಡಾಖ್ ಹೋಟೆಲ್ ಮತ್ತು ಅತಿಥಿ ಗೃಹ ಸಂಘಟನೆ (ALHAGHA) ಈ ಪ್ರದೇಶದಲ್ಲಿ ಸಿಲುಕಿರುವ ಪ್ರವಾಸಿಗರಿಗೆ ಉಚಿತ ವಸತಿ ಸೌಕರ್ಯವನ್ನು ಒದಗಿಸಿದೆ.
Due to the disruption of in & outbound flights in Leh, the @alhghaladakh, Leh, showing great solidarity & understanding, has announced that free stays would be provided to stranded tourists, whose flights have been affected due to the cancellation, at their current hotels. pic.twitter.com/WYt1S2KaaI
— Ladakh Tourism (@utladakhtourism) May 7, 2025
ಅಪರೇಷನ್ ಸಿಂಧೂರ (Operation Sindoor) ನಡೆದ ಬಳಿಕ ಸಂಘ ತುರ್ತು ಕಾರ್ಯಕಾರಿ ಸಭೆ ನಡೆಸಿ, ಈ ನಿರ್ಧಾರ ತೆಗೆದುಕೊಂಡಿದೆ. ಅನಿವಾರ್ಯದ ಪರಿಸ್ಥಿತಿಯಲ್ಲಿ ಅತಿಥಿಗಳ ಕಾಳಜಿವಹಿಸುವುದು ನಮ್ಮ ಕರ್ತವ್ಯವಾಗಿದೆ. ವಿಮಾನಗಳನ್ನು ರದ್ದಾಗಿದ್ದರಿಂದ ಪ್ರವಾಸಿಗರಿಗೆ ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ ಉಳಿದುಕೊಂಡಿರುವ ಹೋಟೆಲ್ಗಳಲ್ಲಿ ಪ್ರವಾಸಿಗರಿಗೆ ಉಳಿಯಲು ಅವಕಾಶ ನೀಡಲಾಗುವುದು ಎಂದು ಸಂಘಟನೆ ಹೇಳಿಕೊಂಡಿದೆ.
ಪ್ರವಾಸಿಗರಿಗೆ ಮುನ್ನೆಚ್ಚರಿಕಾ ಕ್ರಮವಾಗಿ ಮಾಕ್ ಡ್ರಿಲ್ ಮೂಲಕ ಯುದ್ಧದ ಪರಿಸ್ಥಿತಿ ಉಂಟಾದರೆ ಹೇಗೆ ಸುರಕ್ಷಿತ ಕ್ರಮವಹಿಸಬೇಕು ಎಂಬುದನ್ನು ತಿಳಿಸಲಾಗಿದೆ. ಇದರ ನಡುವೆ, ಲಡಾಖ್ನ ಬೌದ್ಧ ಸಂಘ (LBA) ಭಾರತ ಸರ್ಕಾರದ ಆಪರೇಷನ್ ಸಿಂಧೂರಕ್ಕೆ ಬೆಂಬಲವನ್ನು ನೀಡಿದೆ. ಇದನ್ನೂ ಓದಿ: ಬಾಲಾಕೋಟ್, ಬ್ರಹ್ಮೋಸ್ ಬಳಿಕ ʻಆಪರೇಷನ್ ಸಿಂಧೂರʼ – ಪಾಕ್ ನಂಬಿದ್ದ ʻಮೇಡ್ ಇನ್ ಚೈನಾʼ ರೆಡಾರ್ ಫೇಲ್
ಭಾರತವು ಪಾಕಿಸ್ತಾನದ (Pakistan) ಉಗ್ರರ ತಾಣಗಳ ಮೇಲೆ ದಾಳಿ ನಡೆಸಿದ ಬೆನ್ನಲ್ಲೇ ವಾಯುನೆಲೆಯನ್ನು ನಿರ್ಬಂಧಿಸಲಾಗಿದ್ದು, ಭಾರತದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋ(Indigo) 165ಕ್ಕೂ ಹೆಚ್ಚು ವಿಮಾನಯಾನವನ್ನು ಸ್ಥಗಿತಗೊಳಿಸಿದೆ. ಜಮ್ಮು, ಶ್ರೀನಗರ, ಅಮೃತಸರ, ಲೇಹ್, ಚಂಡೀಗಢ, ಜೋಧ್ಪುರ, ಧರ್ಮಶಾಲಾ, ಬಿಕಾನೇರ್, ಗ್ವಾಲಿಯರ್, ಕಿಶನ್ಗಢ ಮತ್ತು ರಾಜ್ಕೋಟ್ಗೆ ತೆರಳುವ ಮತ್ತು ಅಲ್ಲಿಂದ ಹೊರಡುವ ವಿಮಾನಗಳನ್ನು ಮೇ 10ರವರೆಗೆ ಇಂಡಿಗೋ ರದ್ದುಗೊಳಿಸಿದೆ.
ಪರಿಸ್ಥಿತಿ ಸೂಕ್ಷ್ಮತೆಯನ್ನು ಗಮನಿಸಿ ಇತರ ನಿಲ್ದಾಣಗಳಿಗೆ ವಿಮಾನ ಹಾರಾಟವನ್ನು ಹೊಂದಾಣಿಕೆ ಮಾಡಲಾಗುವುದು. ವಿಮಾನ ನಿಲ್ದಾಣಕ್ಕೆ ಹೋಗುವ ಮೊದಲು ಪ್ರಯಾಣಿಕರು ತಮ್ಮ ಪ್ರಯಾಣದ ಸ್ಥಿತಿಯನ್ನು ಪರಿಶೀಲಿಸುವಂತೆ ಗ್ರಾಹಕರಿಗೆ ಇಂಡಿಗೋ ಸಲಹೆ ನೀಡಿದೆ. ಅಲ್ಲದೇ ಏರ್ ಇಂಡಿಯಾ(Air India) ಸಂಸ್ಥೆ ಕೂಡ ಜಮ್ಮು, ಶ್ರೀನಗರ, ಲೇಹ್, ಜೋಧ್ಪುರ, ಅಮೃತಸರ, ಭುಜ್, ಜಾಮ್ನಗರ, ಚಂಡೀಗಢ ಮತ್ತು ರಾಜ್ಕೋಟ್ ನಿಲ್ದಾಣಗಳಿಗೆ ತೆರಳುವ ಮತ್ತು ಅಲ್ಲಿಂದ ಹೊರಡುವ ಎಲ್ಲಾ ವಿಮಾನಗಳ ಹಾರಾಟಗಳನ್ನು ಮೇ 10ರ ವರೆಗೆ ಬಂದ್ ಮಾಡಿದೆ ಎಂದು ಎಕ್ಸ್ ಮೂಲಕ ತಿಳಿಸಿದೆ. ಇದನ್ನೂ ಓದಿ: ಆಪರೇಷನ್ ಸಿಂಧೂರ | ಉಗ್ರರ ಶವಗಳನ್ನು ಟ್ರ್ಯಾಕ್ಟರ್ನಲ್ಲಿ ಸಾಗಿಸಿದ ಭಿಕಾರಿಸ್ತಾನ್!