ಬೆಂಗಳೂರು: ಯಾವುದೇ ಕಾರಣಕ್ಕೂ ಫೆರಿಫೆರಲ್ ರಿಂಗ್ (Peripheral Ring) ರಸ್ತೆ ನಿರ್ಮಾಣ ಯೋಜನೆ ಕೈ ಬಿಡಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನ (Bengaluru) ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಭೂಮಿ ಕಳೆದುಕೊಂಡ ರೈತರು ಮತ್ತು ನಿವೇಶನದಾರರ ಜೊತೆಗಿನ ಸಂವಾದದಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಫೆರಿಫೆರಲ್ ರಿಂಗ್ ರಸ್ತೆ ಅವಶ್ಯಕತೆ ಇದ್ದು, ಯಾವುದೇ ಕಾರಣಕ್ಕೂ ಯೋಜನೆ ರದ್ದು ಮಾಡಲು ಸಾಧ್ಯವಿಲ್ಲ ಎಂದರು. ಇದನ್ನೂ ಓದಿ: ಲೋಕಸಭಾ ಚುನಾವಣೆ ಬಗ್ಗೆ ದೆಹಲಿಯಲ್ಲಿ ಸಭೆ: ಡಿ.ಕೆ ಶಿವಕುಮಾರ್
Advertisement
Advertisement
ಸಭೆಯಲ್ಲಿ ನೂರಾರು ಜನ ಭೂಮಿ ಕಳೆದುಕೊಂಡ ರೈತರು, ನಿವೇಶನದಾರರು ಭಾಗವಹಿಸಿದ್ದರು. ಸಭೆಯಲ್ಲಿ ತಮ್ಮ ಅಭಿಪ್ರಾಯಗಳನ್ನು ತಿಳಿಸಿದರು. ಅನೇಕ ಜನರು ಈ ಯೋಜನೆ ರದ್ದು ಮಾಡಬೇಕು ಎಂದು ಆಗ್ರಹ ಮಾಡಿದರು. ಯೋಜನೆ ರದ್ದು ಮಾಡಿ ಎನ್‌ಒಸಿ ನೀಡುವಂತೆ ಮನವಿ ಮಾಡಿದರು. ನೊಂದ ನಿವೇಶನದಾರರೊಬ್ಬರು ನನ್ನ ಮಕ್ಕಳು ನನ್ನ ಫೋಟೋ ಹಾಕುವ ಮುನ್ನ ಈ ಸಮಸ್ಯೆ ಇತ್ಯರ್ಥ ಮಾಡಿ ಎಂದು ಭಾವುಕ ಮಾತು ಆಡಿದರು. ಇದನ್ನೂ ಓದಿ: ಕಸ್ತೂರಿರಂಗನ್ ವರದಿ ಜಾರಿಗೆ ಸರ್ಕಾರ ಬದ್ಧ ಎಂದು ಹೇಳಿಲ್ಲ: ಈಶ್ವರ ಖಂಡ್ರೆ
Advertisement
ಇದಲ್ಲದೆ 2013ರ ಅನ್ವಯ ಭೂ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ಅಲ್ಲದೆ ಭೂಮಿ ಕಳೆದುಕೊಂಡವರಿಗೆ ಪರ್ಯಾಯ ಭೂಮಿ ನೀಡುವಂತೆ ಒತ್ತಾಯಗಳು ಕೇಳಿ ಬಂದವು. ಇದನ್ನೂ ಓದಿ: ಇದು ದರದ ಪ್ರಶ್ನೆ ಅಲ್ಲ, ಬೇರೆಯವರಿಗೆ ನಾವು ಮಾರುಕಟ್ಟೆ ಬಿಟ್ಟು ಕೊಟ್ಟಂತೆ: ಸೋಮಶೇಖರ ರೆಡ್ಡಿ
Advertisement
ಸಭೆ ಬಳಿಕ ಮಾತನಾಡಿದ ಡಿಸಿಎಂ, ಯಾವುದೇ ಕಾರಣಕ್ಕೂ ಯೋಜನೆ ರದ್ದು ಮಾಡಲು ಸಾಧ್ಯವಿಲ್ಲ. ನಾವು ಜಮೀನು ಡಿ ನೋಟಿಫಿಕೇಶನ್ ಮಾಡಲು ಆಗಲ್ಲ. ಹೇಗಾದ್ರು ಮಾಡಿ ನಿಮಗೆ ನ್ಯಾಯ ಕೊಡೋಣ ಅನ್ನೋದು ನನ್ನ ಮನಸ್ಸಿನಲ್ಲಿ ಇದೆ. ನಾನು ಕಾನೂನು ತಜ್ಞರ ಜೊತೆ ಚರ್ಚೆ ಮಾಡುತ್ತೇನೆ. ರಸ್ತೆ ನಿರ್ಮಾಣ ಸ್ಟಾಪ್ ಮಾಡಲು ಸಾಧ್ಯವಿಲ್ಲ. ಆದರೆ ಪರಿಹಾರ ವಿಚಾರದಲ್ಲಿ ಹೊಸ ತೀರ್ಮಾನ ಮಾಡುತ್ತೇವೆ. ಸಿಎಂ ಮತ್ತು ಕ್ಯಾಬಿನೆಟ್‌ನಲ್ಲಿ ಈ ಬಗ್ಗೆ ಚರ್ಚೆ ಮಾಡಬೇಕು. ಆದಷ್ಟು ಬೇಗ ನಾನು ಇವೆಲ್ಲ ಮುಗಿಸುತ್ತೇನೆ. ನಿಮಗೆ ಸಹಾಯ ಮಾಡುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು. ಇದನ್ನೂ ಓದಿ: ಮೂರನೇ ಬಾರಿಗೆ ಮೋದಿ ಪ್ರಧಾನಿಯಾಗಲಿ – ಉಡುಪಿಯ ಪಾದಬೆಟ್ಟುವಿನಲ್ಲಿ ವಿಶೇಷ ಹೋಮ
Web Stories