ಬೆಂಗಳೂರು: ಶಾಶ್ವತ ವಿದ್ಯುತ್ ಸಂಪರ್ಕಕ್ಕೆ (Permanent Electricity Connection) ಅರ್ಜಿ ಸಲ್ಲಿಕೆಗೆ ಆ.15ರ ವರೆಗೆ ಅವಧಿ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ.
ಮೊದಲು ಜೂ.30 ರಿಂದ 15 ದಿನಗಳ ಒಳಗಡೆ ಅರ್ಜಿ ಸಲ್ಲಿಕೆಗೆ ಅವಕಾಶ ಇತ್ತು. ಸಚಿವ ಸಂಪುಟದಲ್ಲಿ ತೆಗೆದುಕೊಂಡ ನಿರ್ಣಯಕ್ಕೆ ಮಾರ್ಪಾಡು ಮಾಡಲಾಗಿದ್ದ, ಈ ಅವಧಿಯನ್ನು ಆ.15ರ ವರೆಗೆ ವಿಸ್ತರಿಸಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್‌ಗೆ ಬಿಗ್ ಶಾಕ್ – ಜಾರಕಿಹೊಳಿ ಆಪ್ತ, ಕುರುಬ ಸಮುದಾಯದ ಪ್ರಭಾವಿ ಮುಖಂಡ ಸದಾಶಿವ ದೇಶಿಂಗೆ ಬಿಜೆಪಿಗೆ ಸೇರ್ಪಡೆ
ಗ್ರಾಮೀಣ ಪ್ರದೇಶಗಳಲ್ಲಿ ಕೋಳಿ ಸಾಕಾಣಿಕೆ ಕೇಂದ್ರಗಳು ಮತ್ತು ಕೃಷಿ ಸಂಬಂಧಿತ ಚಟುವಟಿಕೆಗಳಿಗೂ ಸಹ ವಿದ್ಯುತ್ ಸಂಪರ್ಕಕಕ್ಕಾಗಿ ಸ್ವಾಧೀನಾನುಭವ ಪ್ರಮಾಣ ಪತ್ರ ಪಡೆಯುವುದರಿಂದ ವಿನಾಯಿತಿ ನೀಡಲಾಗಿದೆ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.
